Homeಮುಖಪುಟ"ಮೆಲಾನಿಯ ಟ್ರಂಪ್‌" ಕಾರ್ಯಕ್ರಮದಲ್ಲಿ ಕೇಜ್ರಿ ಮತ್ತು ಸಿಸೋಡಿಯ ಹೆಸರು ರದ್ದು: ಆಪ್‌ ಆರೋಪ

“ಮೆಲಾನಿಯ ಟ್ರಂಪ್‌” ಕಾರ್ಯಕ್ರಮದಲ್ಲಿ ಕೇಜ್ರಿ ಮತ್ತು ಸಿಸೋಡಿಯ ಹೆಸರು ರದ್ದು: ಆಪ್‌ ಆರೋಪ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರ ಹೆಸರನ್ನು ಟ್ರಂಪ್‌ ಭೇಟಿಯ ಕಾರ್ಯಕ್ರಮದಿಂದ ಕೈ ಬಿಡಲಾಗಿದೆ ಎಂದು ಎಎಪಿ ಆರೋಪಿಸಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಹ್ಮದಾಬಾದ್‌ ನಲ್ಲಿ ನಡೆಯಲಿರುವ “ನಮಸ್ತೇ ಟ್ರಂಪ್”‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ದೆಹಲಿಯಲ್ಲಿ ಟ್ರಂಪ್‌ ಮತ್ತು ಮೋದಿಯ ನಡುವೆ ಮಾತುಕತೆ ನಡೆಯಲಿದೆ. ಈ ಸಮಯದಲ್ಲಿ ಟ್ರಂಪ್‌ ಪತ್ನಿ ಮೆಲಾನಿಯ ಟ್ರಂಪ್‌ ಅವರು ದಹಲಿಯ ಶಾಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆ ಕಾರ್ಯಕ್ರಮದ ಪಟ್ಟಿಯಲ್ಲಿ ಮುಖ್ಯ ಅತಿಥಿಗಳಾಗಿದ್ದ ಸಿಎಂ ಕೇಜ್ರಿವಾಲ್‌ ಮತ್ತು ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಎಎಪಿ ಆರೋಪಿಸಿದೆ.

ದೆಹಲಿ ಶಾಲೆಯಲ್ಲಿ ಹೊಸದಾಗಿ ಪರಿಚಯಿಸಲಾದ “ಹ್ಯಾಪಿನೆಸ್ಸ್‌ ಕರಿಕ್ಯುಲಮ್‌ (ಸಂತಸದಾಯಕ ಪಠ್ಯ) ಅನ್ನು ವೀಕ್ಷಿಸಲು ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಕಾರ್ಯಕ್ರಮದ ಪಟ್ಟಿಯಿಂದ ದೆಹಲಿಯ ಇಬ್ಬರು ಉನ್ನತ ನಾಯಕರನ್ನು ವಿವಿಐಪಿ ಪಟ್ಟಿಯಿಂದ ಕೈಬಿಡುವುದರ ಹಿಂದೆ ಕೇಂದ್ರ ಸರ್ಕಾರದ ಹುನ್ನಾರವಿದೆ ಎಂದು ಎಎಪಿ ಆರೋಪಿಸಿದೆ.

ಶಾಲಾ ಮಕ್ಕಳಲ್ಲಿ ಒತ್ತಡವನ್ನು ಕಡಿಮೆ ಮಾಡುವ ಪ್ರಯತ್ನವಾಗಿ ಎರಡು ವರ್ಷಗಳ ಹಿಂದೆ “ಹ್ಯಾಪಿನೆಸ್ಸ್‌  ಪಠ್ಯಕ್ರಮ”ವನ್ನು ದೆಹಲಿ ಉಪ ಮುಖ್ಯಮಂತ್ರಿ ಸಿಸೋಡಿಯಾ ಪರಿಚಯಿಸಿದ್ದರು. ಇದು 40 ನಿಮಿಷಗಳ ಧ್ಯಾನ, ವಿಶ್ರಾಂತಿ ಮತ್ತು ಹೊರಾಂಗಣ ಚಟುವಟಿಕೆಗಳನ್ನು ಒಳಗೊಂಡಿದೆ.

ಎಎಪಿ ಸರ್ಕಾರ ಜುಲೈ 2018 ರಲ್ಲಿ ತನ್ನ ಶಾಲೆಗಳಲ್ಲಿ ‘ಸಂತೋಷದಾಯಕ ಪಠ್ಯಕ್ರಮ’ ವನ್ನು ಪರಿಚಯಿಸಿತು. ಪಠ್ಯಕ್ರಮದ ಅಡಿಯಲ್ಲಿ, ನರ್ಸರಿ ಮತ್ತು ಶಿಶುವಿಹಾರದ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ಬಾರಿ ಮತ್ತು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನಕ್ಕೆ ಒಂದು ಗಂಟೆಯ ಅವಧಿಯಲ್ಲಿ ಧ್ಯಾನ, ವಿಶ್ರಾಂತಿಯ ಜೊತೆಗೆ ಕಥೆ ಹೇಳುವಿಕೆ ಮತ್ತು ಪ್ರಶ್ನೆ-ಉತ್ತರದ ವಿಷಯಗಳನ್ನು ಒಳಗೊಂಡಿದೆ.

ಅಮೆರಿಕದ ಪ್ರಥಮ ಮಹಿಳೆಯ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ ಎಂದು ಸಿಸೋಡಿಯಾ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಮೆಲಾನಿಯಾ ಟ್ರಂಪ್ ಭೇಟಿ ನೀಡಲಿರುವ ಶಾಲೆಯ ಹೆಸರು ಮತ್ತು ಸ್ಥಳವನ್ನು ಭದ್ರತಾ ಕಾರಣಗಳಿಂದ ಬಹಿರಂಗಪಡಿಸಿಲ್ಲ.

ನಾವು ಯುಎಸ್ ರಾಯಭಾರ ಕಚೇರಿಯಿಂದ ಶಾಲಾ ಭೇಟಿಗೆ ವಿನಂತಿಯನ್ನು ಪಡೆದುಕೊಂಡಿದ್ದೇವೆ. ಅವರು ಬರಲು ಬಯಸಿದರೆ ಖಂಡಿತ ಅವರನ್ನು ಸ್ವಾಗತಿಸುತ್ತೇವೆ ಎಂದು ನಾವು ಅವರಿಗೆ ತಿಳಿಸಿದ್ದೇವೆ ಎಂದು ಪಟ್ಪರ್ಗಂಜ್‌ನ ದೆಹಲಿ ಸರ್ಕಾರಿ ಶಾಲೆಗೆ ಭೇಟಿಯ ಸಂದರ್ಭದಲ್ಲಿ ಸಿಸೋಡಿಯ ಹೇಳಿದ್ದಾರೆ.

ಯಾರನ್ನು ಆಹ್ವಾನಿಸಬೇಕು ಮತ್ತು ಯಾರನ್ನು ಆಹ್ವಾನಿಸಬಾರದು ಎಂದು ಭಾರತೀಯ ಸರ್ಕಾರವು ವಿದೇಶಿ ಅತಿಥಿಗೆ ಸಲಹೆ ನೀಡುವುದಿಲ್ಲ. “ಸಣ್ಣ ರಾಜಕೀಯವನ್ನು ಪ್ರಮುಖ ಸಂದರ್ಭಗಳಲ್ಲಿ ಮಾಡಬಾರದು. ಭಾರತ ಸರ್ಕಾರವು ಎಲ್ಲ ಪಕ್ಷಗಳನ್ನು ಒಳಗೊಂಡ ಭಾರತೀಯರನ್ನು ಪ್ರತಿನಿಧಿಸುತ್ತದೆ. ಇಂತಹ ಸಂದರ್ಭದಲ್ಲಿ ರಾಜಕೀಯ ತರಬಾರದು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...