Homeಮುಖಪುಟಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ - ದೆಹಲಿ ಗವರ್ನರ್ ಸಕ್ಸೇನಾ

ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ – ದೆಹಲಿ ಗವರ್ನರ್ ಸಕ್ಸೇನಾ

- Advertisement -
- Advertisement -

ದೆಹಲಿಯ ಮುಖ್ಯಮಂತ್ರಿ ಆತಿಶಿ ಅವರು ಈ ಹಿಂದಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗಿಂತ ಸಾವಿರ ಪಟ್ಟು ಉತ್ತಮ ಎಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಶುಕ್ರವಾರ ಹೊಗಳಿದ್ದಾರೆ. ಅವರು ದೆಹಲಿಯ ಇಂದಿರಾಗಾಂಧಿ ದೆಹಲಿ ಮಹಿಳಾ ತಾಂತ್ರಿಕ ವಿಶ್ವವಿದ್ಯಾಲಯದ ಏಳನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಕೇಜ್ರಿವಾಲ್‌ಗಿಂತ

“ದಿಲ್ಲಿಯ ಸಿಎಂ ಮಹಿಳೆಯಾಗಿರುವುದು ನನಗೆ ಇಂದು ಸಂತಸ ತಂದಿದೆ. ಅವರು ತಮ್ಮ ಹಿಂದಿನ ಸಿಎಂಗಿಂತ ಸಾವಿರ ಪಟ್ಟು ಉತ್ತಮರು ಎಂದು ಆತ್ಮವಿಶ್ವಾಸದಿಂದ ಹೇಳಬಲ್ಲೆ’’ ಎಂದು ಸಕ್ಸೇನಾ ಅವರು ಹೇಳಿದ್ದಾರೆ. ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಈ ಹೇಳಿಕೆ ವೇಳೆ ಅತಿಶಿಯತ್ತ ನೋಟ ಬೀರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಸಕ್ಸೇನಾ, “ನೀವು ಮುಂದುವರಿದಂತೆ, ನಿಮ್ಮನ್ನು ಮುನ್ನಡೆಸುವ ನಾಲ್ಕು ಮಾರ್ಗದರ್ಶಿ ಸೂತ್ರಗಳಿರುತ್ತವೆ. ಮೊದಲನೆಯದು, ನಿಮ್ಮ ಕಡೆಗಿನ ನಿಮ್ಮ ಜವಾಬ್ದಾರಿ, ಎರಡನೆಯದು, ನಿಮ್ಮ ಪೋಷಕರು ಹಾಗೂ ಕುಟುಂಬ, ಮೂರನೆಯದು, ಸಮಾಜ ಮತ್ತು ರಾಷ್ಟ್ರ ನಿರ್ಮಾಣದೆಡೆಗಿನ ಹೊಣೆಗಾರಿಕೆ” ಎಂದು ಅವರು ಹೇಳಿದ್ದಾರೆ. ಕೇಜ್ರಿವಾಲ್‌ಗಿಂತ

ಲಿಂಗ ತಾರತಮ್ಯದ ಗೋಡೆಯನ್ನು ಒಡೆದು ಹಾಕಿ, ಎಲ್ಲ ಕ್ಷೇತ್ರಗಳಲ್ಲೂ ಇನ್ನಿತರರೊಂದಿಗೆ ಸಮನಾಗಿ ನಿಲ್ಲುವ ಮಹಿಳೆಯಾಗುವುದು ನಿಮ್ಮ ನಾಲ್ಕನೆ ಜವಾಬ್ದಾರಿ ಎಂದು ಅವರು ಹೇಳಿದ್ದಾರೆ.

ಸೆಪ್ಟೆಂಬರ್ ತಿಂಗಳಲ್ಲಿ ಕೇಜ್ರಿವಾಲ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಂತರ, ಆಡಳಿತ ಮತ್ತು ಅಧಿಕಾರಶಾಹಿಯ ನಿಯಂತ್ರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಎಎಪಿ ಮತ್ತು ಬಿಜೆಪಿ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದೆ.

ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ, ಸಾರ್ವಜನಿಕರಿಂದ ನಾನು ಪ್ರಾಮಾಣಿಕತೆಯ ಪ್ರಮಾಣ ಪತ್ರ ಪಡೆಯಲು ಬಯಸುತ್ತೇನೆ. ಹಾಗಾಗಿ ಈಗ ತಾನು ರಾಜೀನಾಮೆ ನೀಡುತ್ತೇನೆ ಎಂದು ರಾಜೀನಾಮೆ ವೇಳೆ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಇದರ ನಂತರ ಪಕ್ಷದ ಶಾಸಕಾಂಗ ಸಭೆಯಲ್ಲಿ ಕೇಜ್ರಿವಾಲ್ ಅವರು ಅತಿಶಿ ಅವರ ಹೆಸರನ್ನು ಮುಖ್ಯಮಂತ್ರಿಯಾಗಿ ಪ್ರಸ್ತಾಪಿಸಿದ್ದರು ಮತ್ತು ಅದನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್ 

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...