Homeಮುಖಪುಟಬಿಜೆಪಿ ಮತ್ತೆ ಗೆದ್ದರೆ, ಮೋದಿ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಕೇಜ್ರಿವಾಲ್‌

ಬಿಜೆಪಿ ಮತ್ತೆ ಗೆದ್ದರೆ, ಮೋದಿ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಕೇಜ್ರಿವಾಲ್‌

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್ ಬಿಜೆಪಿ ಮತ್ತು ಮೋದಿ ಸರಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, ಸರ್ವಾಧಿಕಾರಿ’ ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ, ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ್ದು, ನಿಮ್ಮ ಮುಂದಿನ ಪ್ರಧಾನಿ ಯಾರು ಎಂದು ಬಿಜೆಪಿಗರನ್ನು ಕೇಳಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ 2025ರ ನಂತರ ನರೇಂದ್ರ ಮೋದಿ ಅಲ್ಲ, ಅಮಿತ್ ಶಾ ದೇಶವನ್ನು ಮುನ್ನಡೆಸುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಗರು ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರು? ಎಂದು ಇಂಡಿಯಾ ಮೈತ್ರಿಕೂಟವನ್ನು ಕೇಳುತ್ತಾರೆ, ನಾನು ಬಿಜೆಪಿಯವರನ್ನು ಕೇಳುತ್ತೇನೆ, ನಿಮ್ಮ ಪ್ರಧಾನಿ ಯಾರು? ಮೋದಿ ಮುಂದಿನ ಸೆಪ್ಟೆಂಬರ್‌ನಲ್ಲಿ 75 ವರ್ಷಗಳನ್ನು ಪೂರೈಸುತ್ತಿದ್ದಾರೆ. 75 ವರ್ಷ ತುಂಬಿದ ಪಕ್ಷದ ಸದಸ್ಯರು ನಿವೃತ್ತಿಯಾಗಬೇಕು ಎಂಬ ನಿಯಮ ರೂಪಿಸಿದವರು ಅವರೇ, ಮುಂದಿನ ವರ್ಷ ಅವರು ನಿವೃತ್ತಿಯಾಗಬೇಕಿದೆ. ಮೋದಿಯವರ ಭರವಸೆಗಳನ್ನು ಯಾರು ಪೂರೈಸುತ್ತಾರೆ? ಅಮಿತ್ ಶಾ ಮಾಡುತ್ತಾರಾ? ನೀವು ಮತ ಹಾಕಲು ಹೊರಟಾಗ, ನೀವು ಅಮಿತ್ ಶಾಗೆ ಮತ ಹಾಕುತ್ತಿದ್ದೀರಿ, ಮೋದಿಗೆ ಅಲ್ಲ ಎಂಬುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ.

ಮೋದಿ ಅತ್ಯಂತ ಅಪಾಯಕಾರಿ ಯೋಜನೆಯನ್ನು ಹೊಂದಿದ್ದಾರೆ, ಅವರು ರಾಜ್ಯ ಚುನಾವಣೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಜೆಪಿಯ ಹಿರಿಯ ನಾಯಕರನ್ನು ಬದಿಗೆ ಸರಿಸುತ್ತಿದ್ದಾರೆ. ಮೋದಿ-ಒಂದು  ರಾಷ್ಟ್ರ, ಒಂದು ನಾಯಕ-ಅಪಾಯಕಾರಿ ಯೋಜನೆಯನ್ನು ಹೊಂದಿದ್ದಾರೆ. ಅವರು ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸುತ್ತಾರೆ ಮತ್ತು ಎಲ್ಲಾ ಹಿರಿಯ ಬಿಜೆಪಿ ನಾಯಕರನ್ನು ಅಧಿಕಾರದಿಂದ ದೂರವಿಡುತ್ತಾರೆ, ವಸುಂಧರಾ ರಾಜೆ, ಶಿವರಾಜ್ ಚೌಹಾಣ್ ಅವರನ್ನು ನೋಡಿ..ಈಗ ಯೋಗಿ ಆದಿತ್ಯನಾಥ್ ಸರದಿ, ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮೋದಿ ಉತ್ತರಪ್ರದೇಶ ಮುಖ್ಯಮಂತ್ರಿಯನ್ನು ಬದಲಾಯಿಸುತ್ತಾರೆ.

ನಾನು ದೇಶದ 140 ಕೋಟಿ ಜನರಲ್ಲಿ ಭಿಕ್ಷೆ ಬೇಡಲು ಬಂದಿದ್ದೇನೆ. ಸರ್ವಾಧಿಕಾರದಿಂದ ನನ್ನ ದೇಶವನ್ನು ಉಳಿಸಿ, ಸುಪ್ರೀಂಕೋರ್ಟ್ ನನಗೆ 21 ದಿನಗಳನ್ನು ನೀಡಿದೆ. ಒಂದು ದಿನ 24 ಗಂಟೆಗಳು ಆದರೆ ನಾನು 36 ಗಂಟೆಗಳ ಕಾಲ ಕೆಲಸ ಮಾಡುತ್ತೇನೆ. ನನ್ನ ಸಂಪೂರ್ಣ ಜೀವ ನನ್ನ ದೇಶಕ್ಕೆ ಸಮರ್ಪಿತವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಗರು ನನ್ನನ್ನು ಜೈಲಿಗೆ ಕಳುಹಿಸಿದರು, ಪ್ರಧಾನಿ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಹೇಳುತ್ತಾರೆ. ಮತ್ತೊಂದೆಡೆ ಅವರು ತಮ್ಮ ಪಕ್ಷಕ್ಕೆ ಎಲ್ಲಾ ಭ್ರಷ್ಟರನ್ನು ಸ್ವಾಗತಿಸಿದ್ದಾರೆ, ನೀವು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬಯಸಿದರೆ, ಅರವಿಂದ್ ಕೇಜ್ರಿವಾಲ್ ಅವರಿಂದ ಕಲಿಯಿರಿ. 2015ರಲ್ಲಿ ನಾವು ಸರ್ಕಾರ ರಚಿಸಿದಾಗ ನನ್ನ ಸಚಿವರೊಬ್ಬರು ಅಂಗಡಿಯವನಿಗೆ 5 ಲಕ್ಷ ರೂಪಾಯಿ ಕೇಳುತ್ತಿರುವ ಆಡಿಯೋವನ್ನು ಯಾರೋ ನನಗೆ ಕಳುಹಿಸಿದ್ದರು. ಅದರ ಬಗ್ಗೆ ಯಾರಿಗೂ ತಿಳಿದಿರಲಿಲ್ಲ, ಆದರೆ ನಾನು ಆ ಕೇಸ್‌ನ್ನು ಸಿಬಿಐಗೆ ಒಪ್ಪಿಸಿದೆ, ನೀವು ಏನು ಮಾಡಿದ್ದೀರಿ? ಪಕ್ಷಕ್ಕೆ ಎಲ್ಲಾ ಭ್ರಷ್ಟರನ್ನು ನೀವು ಸ್ವಾಗತಿಸುತ್ತೀರಿ ಮತ್ತು ನಿಮ್ಮನ್ನು ಭ್ರಷ್ಟಾಚಾರದ ವಿರುದ್ಧ ಹೋರಾಟಗಾರ ಎಂದು ಕರೆಯುವ ಧೈರ್ಯವಿದೆಯೇ? ನನ್ನನ್ನು ಬಂಧಿಸುವ ಮೂಲಕ ಬಿಜೆಪಿಯವರು ಯಾವುದೇ ಕೇಸು ಇಲ್ಲದಿದ್ದರೂ ಯಾರನ್ನು ಬೇಕಾದರೂ ಬಂಧಿಸಬಹುದು ಎಂಬ ಸಂದೇಶವನ್ನು ನೀಡಿದ್ದಾರೆ ಎಂದು ಕೇಜ್ರವಾಲ್‌ ಹೇಳಿದ್ದಾರೆ.

ನನಗೆ ಹುದ್ದೆಗಳ ಮೇಲೆ ಪ್ರೀತಿ ಇಲ್ಲ, ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ 49 ದಿನಗಳಲ್ಲಿ ರಾಜೀನಾಮೆ ನೀಡಿದ್ದೆ, ನನ್ನನ್ನು ಬಂಧಿಸಿದಾಗ ನಾನೇಕೆ ರಾಜೀನಾಮೆ ನೀಡಲಿಲ್ಲ? ಎಎಪಿ ದೆಹಲಿಯನ್ನು ಅಭೂತಪೂರ್ವ ಅಂತರದಿಂದ ಗೆದ್ದಿದೆ. ಮುಂದಿನ 20 ವರ್ಷಗಳ ಕಾಲ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಅವರಿಗೆ ತಿಳಿದಿದೆ. ನಾನು ರಾಜೀನಾಮೆ ನೀಡಿ ಎಎಪಿ ಸರ್ಕಾರ ಪತನವಾಗುವಂತೆ ಪಿತೂರಿ ನಡೆಸಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ ಮತ್ತು ಜೈಲಿನಿಂದ ಸರ್ಕಾರವನ್ನು ನಡೆಸುತ್ತೇನೆ ಎಂದು ಹೇಳಿದ್ದೇನೆ. ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಕೂಡ ರಾಜೀನಾಮೆ ನೀಡಬಾರದಿತ್ತು ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...