Homeಮುಖಪುಟ'ಕೇಜ್ರಿವಾಲ್ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ..'; ಎಎಪಿ ಮುಖಂಡ ಗೋಪಾಲ್ ರೈ

‘ಕೇಜ್ರಿವಾಲ್ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ..’; ಎಎಪಿ ಮುಖಂಡ ಗೋಪಾಲ್ ರೈ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ದೆಹಲಿ ಸಚಿವ ಗೋಪಾಲ್ ರೈ ಶುಕ್ರವಾರ ಹೇಳಿದ್ದಾರೆ. ರೈ ಅವರು ಕೇಜ್ರಿವಾಲ್ ಕುಟುಂಬವನ್ನು ಭೇಟಿ ಮಾಡಲು ಸಿವಿಲ್ ಲೈನ್ಸ್‌ನಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದ್ದರು.

“ಸಿಎಂ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆಯಂತೆ; ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಯಾರಿಗೂ ಅವಕಾಶ ನೀಡುತ್ತಿಲ್ಲ. ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಮುಂದುವರಿದಿದೆ” ಎಂದು ಸಿಎಂ ನಿವಾಸಕ್ಕೆ ತೆರಳುವ ರಸ್ತೆಯ ಸುತ್ತಲೂ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಕೇಜ್ರಿವಾಲ್ ಕುಟುಂಬವನ್ನು ಭೇಟಿಯಾಗಲು ಹೋಗದಂತೆ ತಡೆದ ನಂತರ ರೈ ಹೀಗೆ ಹೇಳಿದರು.

“ನಾನು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಇಲ್ಲಿಗೆ ಬಂದಿದ್ದೇನೆ. ಆದರೆ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ತೋರುತ್ತದೆ. ಯಾವ ಕಾನೂನಿನ ಅಡಿಯಲ್ಲಿ ನನ್ನನ್ನು ಸಿಎಂ ಕುಟುಂಬ ಸದಸ್ಯರನ್ನು ಭೇಟಿಯಾಗದಂತೆ ತಡೆಹಿಡಿಯಲಾಗಿದೆ ಎಂದು ತಿಳಿಯಬೇಕಿದೆ’ ಎಂದು ರೈ ಹೇಳಿದ್ದಾರೆ.

ಇಡಿ ಬಂಧನದಿಂದ ಕೇಜ್ರಿವಾಲ್ ಮಧ್ಯಂತರ ರಕ್ಷಣೆಗಾಗಿ ಸಲ್ಲಿಸಿದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ನಂತರ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಅವರ ನಿವಾಸದಲ್ಲಿ ಪ್ರಶ್ನಿಸಿದ ನಂತರ ಗುರುವಾರ ಕೇಜ್ರಿವಾಲ್ ಅವರನ್ನು ಬಂಧಿಸಲಾಯಿತು.

ಇದನ್ನೂ ಓದಿ; ‘ಪ್ರಜಾಪ್ರಭುತ್ವದ ಕೊಲೆ, ಸರ್ವಾಧಿಕಾರ..’; ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...