Homeಮುಖಪುಟಬಿಜೆಪಿಯ ‘ಬುಲ್ಡೋಜರ್‌’ ರಾಜಕಾರಣ ಎದುರಿಸಲು ಎಎಪಿ ಎಂಎಲ್‌ಎಗಳೊಂದಿಗೆ ಇಂದು ಕೇಜ್ರಿವಾಲ್‌ ಸಭೆ

ಬಿಜೆಪಿಯ ‘ಬುಲ್ಡೋಜರ್‌’ ರಾಜಕಾರಣ ಎದುರಿಸಲು ಎಎಪಿ ಎಂಎಲ್‌ಎಗಳೊಂದಿಗೆ ಇಂದು ಕೇಜ್ರಿವಾಲ್‌ ಸಭೆ

- Advertisement -
- Advertisement -

ಬಿಜೆಪಿ ಆಡಳಿತದಲ್ಲಿರುವ ದೆಹಲಿಯ ಮೂರು ಮುನ್ಸಿಪಲ್ ಕಾರ್ಪೊರೇಷನ್‌ಗಳು ನಡೆಸುತ್ತಿರುವ ಬುಲ್ಡೋಜರ್ ರಾಜಕೀಯದ ಕುರಿತು ಚರ್ಚಿಸಲು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ ಬೆಳಿಗ್ಗೆ ಪಕ್ಷದ ದೆಹಲಿ ಶಾಸಕರ ಸಭೆ ಕರೆದಿದ್ದಾರೆ.

ಎಎಪಿ ರಾಜಕೀಯ ಪ್ರತಿತಂತ್ರವನ್ನು ರೂಪಿಸಲು ನೋಡುತ್ತಿದೆ ಪಕ್ಷದ ನಾಯಕರು ತಿಳಿಸಿದ್ದಾರೆ. ಈ ಹಿಂದೆ ಶನಿವಾರ ಸಭೆ ಕರೆಯಲಾಗಿತ್ತು, ಆದರೆ ಮುಂಡ್ಕ ಬೆಂಕಿ ದುರಂತದ ಕಾರಣ ಸಭೆಯನ್ನು ಮುಂದೂಡಲಾಯಿತು.

ಮೂರು ಕಾರ್ಪೋರೇಷನ್‌ಗಳಿಂದ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವು “ನಿರ್ದಿಷ್ಟ ಸಮುದಾಯವನ್ನು, ಬಡವರನ್ನು ಗುರಿಯಾಗಿಸಿಕೊಂಡಿದೆ” ಎಂದು ಎಎಪಿ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬುಲ್ಡೋಜರ್ ರಾಜಕೀಯ” ಎಎಪಿ ಮತ್ತು ಬಿಜೆಪಿ ನಡುವೆ ಹೊಸ ವಾಗ್ವಾದವನ್ನು ಉಂಟು ಮಾಡಿದೆ. ಕೇಂದ್ರ ನಾಗರಿಕ ಸಂಸ್ಥೆಗಳ ಪದಾಧಿಕಾರಿಗಳ ವಿರುದ್ಧ ತನಿಖೆ ನಡೆಸುವವರೆಗೆ ರಾಜಧಾನಿಯಲ್ಲಿ ತೆರವು ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.

ಬುಲ್ಡೋಜರ್‌ ರಾಜಕಾರಣದ ಕುರಿತು ಮೊದಲು ತುಸು ಮೌನವಾಗಿದ್ದ ಎಎಪಿ, ನಂತರ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದೆ. ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮನೀಶ್‌ ಸಿಸೋಡಿಯಾ ಅವರು, “ಬಿಜೆಪಿ ಬುಲ್ಡೋಜರ್ ರಾಜಕೀಯ ಮಾಡುತ್ತಿದ್ದು, ಇದರಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ” ಎಂದು ಎಚ್ಚರಿಸಿದ್ದರು.

“ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಮೊದಲು ಅನುಮತಿ ನೀಡಿದ ಕೌನ್ಸಿಲರ್‌ಗಳಿಗೂ ನೋಟಿಸ್ ಜಾರಿ ಮಾಡಬೇಕು” ಎಂದು ಒತ್ತಾಯಿಸಿದ್ದರು.

“1,750 ಅನಧಿಕೃತ, ನಿಯಮಿತವಲ್ಲದೆ ಕಾಲೋನಿಗಳಿಗೆ ನೋಟಿಸ್ ಕಳುಹಿಸಲಾಗಿದೆ. ಇಲ್ಲಿ 50 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇದು ಬುಲ್ಡೋಜರ್ ರಾಜಕಾರಣ. ಈ ಜನರನ್ನು ನಿರಾಶ್ರಿತರನ್ನಾಗಿ ಮಾಡಲು ಬಿಜೆಪಿ ಬಯಸುತ್ತಿದೆ. ಜೊತೆಗೆ 10 ಲಕ್ಷ ಜನರು ವಾಸಿಸುವ ಜೆಜೆ ಕ್ಲಸ್ಟರ್‌ಗಳ 860 ಕಾಲೋನಿಗಳಿಗೂ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಈ ರೀತಿಯಾಗಿ ಇಡೀ ದೆಹಲಿಯನ್ನು ಧ್ವಂಸ ಮಾಡಲು ಬಿಜೆಪಿ ಹೊರಟಿದೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಫ್ಲಾಟ್‌ಗಳಲ್ಲಿ ಹೆಚ್ಚುವರಿ ಬಾಲ್ಕನಿ ಅಥವಾ ಕೊಠಡಿಯನ್ನು ನಿರ್ಮಿಸಿದ ಜನರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದ ಅವರು, “ಕಳೆದ ಎರಡು ವರ್ಷಗಳಲ್ಲಿ ಸುಮಾರು ಮೂರು ಲಕ್ಷ ಜನರು ಇಂತಹ ನೋಟಿಸ್‌ಗಳನ್ನು ಸ್ವೀಕರಿಸಿದ್ದಾರೆ” ಎಂದು ಮಾಹಿತಿ ನೀಡಿದ್ದರು.

“ನಾವು ಜನರಿಗೆ ಮನೆ ನೀಡಲು ಪ್ರಯತ್ನಿಸುತ್ತಿದ್ದೇವೆ ಮತ್ತು ಬಿಜೆಪಿ ಬುಲ್ಡೋಜರ್‌ ಮೂಲಕ ಅವುಗಳನ್ನು ಉರುಳಿಸುತ್ತದೆ” ಎಂದು ಕಟುವಾಗಿ ಟೀಕಿಸಿದ್ದರು.

ದೆಹಲಿಯ ಜಹಾಂಗೀರ್‌ಪುರಿ ಕೋಮು ಸಂಘರ್ಷ ನಡೆದ ಬಳಿಕ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಬಿಜೆಪಿ ಆರಂಭಿಸಿತು. ಸುಪ್ರೀಂ ಕೋರ್ಟ್ ತಡೆಯಾಜ್ಞೆಯ ನಡುವೆಯೂ ಕಾರ್ಯಾಚರಣೆಯನ್ನು ನಡೆಸಿದ್ದು ಚರ್ಚೆಗೆ ಗ್ರಾಸವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...