Homeಮುಖಪುಟದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪತ್ರ ಬರೆದ ಕೇಜ್ರಿವಾಲ್

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪತ್ರ ಬರೆದ ಕೇಜ್ರಿವಾಲ್

- Advertisement -
- Advertisement -

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದು, “ದೆಹಲಿಯಲ್ಲಿ ಮತಗಳನ್ನು ಖರೀದಿಸಲು ಬಿಜೆಪಿ ನಾಯಕರು ಹಣ ಹಂಚುತ್ತಿದ್ದಾರೆ. ಇದನ್ನು ಆರ್‌ಎಸ್‌ಎಸ್‌ ಬೆಂಬಲಿಸುತ್ತಾ?” ಎಂದು ಪ್ರಶ್ನಿಸಿದ್ದಾರೆ.

“ದೆಹಲಿಯಲ್ಲಿ ದಲಿತರು ಮತ್ತು ಪೂರ್ವಾಂಚಲಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ದೊಡ್ಡ ಪ್ರಮಾಣದಲ್ಲಿ ಅಳಿಸಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಸರಿ ಎಂದು ಆರ್‌ಎಸ್‌ಎಸ್‌ಗೆ ಅನಿಸುತ್ತಿದೆಯಾ?” ಎಂದು ಕೇಜ್ರಿವಾಲ್ ಪತ್ರದಲ್ಲಿ ಕೇಳಿದ್ದಾಗಿ ವರದಿಯಾಗಿದೆ.

“ದೆಹಲಿ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಆರ್‌ಎಸ್‌ಎಸ್ ಮತ ಕೇಳಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಅದಕ್ಕೂ ಮೊದಲು, ಕಳೆದ ಕೆಲವು ದಿನಗಳಲ್ಲಿ ಬಿಜೆಪಿ ಮಾಡಿರುವ ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತಾ? ಎಂಬುವುದನ್ನು ಜನರು ನಿಮ್ಮಿಂದ ತಿಳಿದುಕೊಳ್ಳಲು ಬಯಸಿದ್ದಾರೆ” ಎಂದು ಡಿಸೆಂಬರ್ 30ರಂದು ಬರೆದ ಪತ್ರದಲ್ಲಿ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ.

“ಬಿಜೆಪಿಯು ಭಾರತದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ನಿಮಗೆ ಅನಿಸುತ್ತಿಲ್ಲವೇ? ಎಂದು ಕೇಜ್ರಿವಾಲ್ ಅವರು ಹಿಂದಿಯಲ್ಲಿ ಬರೆದ ಪತ್ರದ ಕೊನೆಯಲ್ಲಿ ಕೇಳಿದ್ದಾರೆ ಎಂದು ವರದಿಗಳು ಹೇಳಿವೆ.

ದೆಹಲಿಯಲ್ಲಿ ತಂಗಿರುವ ಅಕ್ರಮ ರೊಹಿಂಗ್ಯಾ ಮತ್ತು ಬಾಂಗ್ಲಾದೇಶೀಯರನ್ನು ಚುನಾವಣೆಯಲ್ಲಿ ಮತಬ್ಯಾಂಕ್‌ಗಳಾಗಿ ಬಳಸಿಕೊಳ್ಳಲು ದಾಖಲೆಗಳು ಮತ್ತು ಹಣದ ಮೂಲಕ ಎಎಪಿ ಮತ್ತು ಕೇಜ್ರಿವಾಲ್ ಸಹಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ.

ಇದನ್ನೂ ಓದಿ : ನ್ಯಾಯಮೂರ್ತಿಗಳ ಸಂಬಂಧಿಕರಿಗೆ ಹುದ್ದೆ ನೀಡುವ ಕ್ರಮ ಪರಿಶೀಲನೆ : ಕೊಲಿಜಿಯಂ ನಿರ್ಧಾರ ಸ್ವಾಗತಿಸಿದ ಅಭಿಷೇಕ್ ಮನು ಸಿಂಘ್ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...