ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪತ್ರ ಬರೆದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದು, “ದೆಹಲಿಯಲ್ಲಿ ಮತಗಳನ್ನು ಖರೀದಿಸಲು ಬಿಜೆಪಿ ನಾಯಕರು ಹಣ ಹಂಚುತ್ತಿದ್ದಾರೆ. ಇದನ್ನು ಆರ್‌ಎಸ್‌ಎಸ್‌ ಬೆಂಬಲಿಸುತ್ತಾ?” ಎಂದು ಪ್ರಶ್ನಿಸಿದ್ದಾರೆ. “ದೆಹಲಿಯಲ್ಲಿ ದಲಿತರು ಮತ್ತು ಪೂರ್ವಾಂಚಲಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ದೊಡ್ಡ ಪ್ರಮಾಣದಲ್ಲಿ ಅಳಿಸಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಸರಿ ಎಂದು ಆರ್‌ಎಸ್‌ಎಸ್‌ಗೆ ಅನಿಸುತ್ತಿದೆಯಾ?” ಎಂದು ಕೇಜ್ರಿವಾಲ್ ಪತ್ರದಲ್ಲಿ ಕೇಳಿದ್ದಾಗಿ ವರದಿಯಾಗಿದೆ. “ದೆಹಲಿ ಚುನಾವಣೆಯಲ್ಲಿ ಬಿಜೆಪಿ … Continue reading ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪತ್ರ ಬರೆದ ಕೇಜ್ರಿವಾಲ್