Homeಮುಖಪುಟಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

- Advertisement -
- Advertisement -

ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ ಸಂಸದೆ ಸ್ವಾತಿ ಮಲಿವಾಲ್ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ಮೇ 13ರಂದು ಸ್ವಾತಿ ಮಲಿವಾಲ್ ಸಿಎಂ ನಿವಾಸದ ಭದ್ರತೆಯನ್ನು ಉಲ್ಲಂಘಿಸಿ ಅನಧಿಕೃತವಾಗಿ ಪ್ರವೇಶಿಸಿದ್ದಾರೆ. ಈ ವೇಳೆ ನಾನು ತಡೆಯಲು ಯತ್ನಿಸಿದ್ದೇನೆ ಆಗ ನನಗೆ ನಿಂದನೆ ಮಾಡಿದ್ದಾರೆ ಎಂದು ಬಿಭವ್ ಕುಮಾರ್ ಆರೋಪಿಸಿದ್ದಾರೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ಇ-ಮೇಲ್ ಮೂಲಕ ಸಲ್ಲಿಸಿದ ದೂರಿನಲ್ಲಿ, ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಹೋದಾಗ ಮುಖ್ಯಮಂತ್ರಿಗಳ ನಿವಾಸದಲ್ಲಿ ತನ್ನ ಮೇಲೆ ಸ್ವಾತಿ ಹಲ್ಲೆ ನಡೆಸಿದ್ದಾರೆ, ಇದೀಗ ದೂರು ನೀಡುವ ಮೂಲಕ ತನ್ನನ್ನು ತಪ್ಪಾಗಿ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕುಮಾರ್ ಅವರು ತಮ್ಮ ದೂರಿನ ಪ್ರತಿಯನ್ನು ಪೊಲೀಸ್ ಉಪ ಆಯುಕ್ತರಿಗೆ ಕಳುಹಿಸಿದ್ದಾರೆ. ಮಲಿವಾಲ್ ಅವರು ಸಿಎಂ ನಿವಾಸದ ಭದ್ರತೆಯನ್ನು ಉಲ್ಲಂಘಿಸಿ, ಬಲವಂತವಾಗಿ ಮತ್ತು ಅನಧಿಕೃತವಾಗಿ ಪ್ರವೇಶಿಸಿ ಅಲ್ಲಿ ಗದ್ದಲ ಸೃಷ್ಟಿಸಿದ್ದಾರೆ. ನಾನು ಆಕೆಯನ್ನು ತಡೆಯಲು ಯತ್ನಿಸಿದಾಗ ದೈಹಿಕವಾಗಿ ಹಲ್ಲೆ ಮಾಡುವ ಉದ್ದೇಶದಿಂದ  ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮೇ 13ರಂದು ರಾಜ್ಯಸಭಾ ಸಂಸದೆ ಎಂದು ಭದ್ರತಾ ಸಿಬ್ಬಂದಿಗೆ ಹೇಳುವ ಮೂಲಕ ಮಲಿವಾಲ್ ಅವರು ಸಿಎಂ ನಿವಾಸಕ್ಕೆ ನುಗ್ಗಿದ್ದು, ಭದ್ರತಾ ಅಧಿಕಾರಿಗಳ ಆಕ್ಷೇಪಣೆಗಳ ಹೊರತಾಗಿಯೂ ಅವರು ಬಲವಂತವಾಗಿ ಸಿಎಂ ನಿವಾಸಕ್ಕೆ ಪ್ರವೇಶಿಸಿದ್ದಾರೆ ಎಂದು ಕುಮಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 9:22ಕ್ಕೆ ಕುಮಾರ್ ಸಿಎಂ ನಿವಾಸದ ಮುಖ್ಯ ಕೊಠಡಿಗೆ ಪ್ರವೇಶಿಸಿದಾಗ ಮಲಿವಾಲ್ ಅವರು ಅಲ್ಲಿ ಕುಳಿತಿರುವುದು ಕಂಡು ಬಂದಿದೆ. ಮಲಿವಾಲ್ ಅವರ ಬಳಿ ಮುಖ್ಯಮಂತ್ರಿಯನ್ನು ಭೇಟಿಯಾಗಲು ಸರಿಯಾದ ವಿಧಾನವನ್ನು ಅನುಸರಿಸುವಂತೆ ನಯವಾಗಿ ವಿನಂತಿಸಿದೆ. ಇದಕ್ಕೆ ಮಲಿವಾಲ್ ನನ್ನ ಮೇಲೆ ಕಿರುಚಲು ಮತ್ತು ನಿಂದಿಸಲು ಪ್ರಾರಂಭಿಸಿದರು. ಮಲಿವಾಲ್ ಬಳಿಕ ಕೇಜ್ರಿವಾಲ್‌ ನಿವಾಸದ ಒಳಭಾಗದ ಕಡೆಗೆ ನಡೆಯಲು ಪ್ರಾರಂಭಿಸಿದರು. ಅವರು ಕೇಜ್ರಿವಾಲ್‌ಗೆ ಹಾನಿ ಮಾಡುವ ಉದ್ದೇಶ ಹೊಂದಿದ್ದರು. ಇದಕ್ಕೆ ನಾನು ಬಲವಾಗಿ ಆಕ್ಷೇಪಿಸಿದ್ದೇನೆ ಎಂದು ಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ನಿವಾಸದಿಂದ ಹೊರಹೋಗುವಂತೆ ಮಲಿವಾಲ್‌ಗೆ ಮನವಿ ಮಾಡಿದಾಗ, ಅವರು ನಾನು ನಿಮ್ಮನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುತ್ತೇನೆ, ನೀವು ನಿಮ್ಮ ಇಡೀ ಜೀವನವನ್ನು ಜೈಲಿನಲ್ಲಿ ಕಳೆಯುವಂತೆ ಮಾಡುತ್ತೇನೆ ಎಂದು ಬೆದರಿಸಿದ್ದಾರೆ ಎಂದು  ಕುಮಾರ್ ಹೇಳಿದ್ದಾರೆ.

ಮಲಿವಾಲ್ ಅವರು ಅತಿಕ್ರಮ ಪ್ರವೇಶ ಮಾಡಿದ್ದಾರೆ, ಸಿಎಂ ನಿವಾಸದ ಭದ್ರತೆಯನ್ನು ಉಲ್ಲಂಘಿಸಿದ್ದಾರೆ, ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸದಂತೆ ತಡೆದು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಮಾರ್ ಆರೋಪಿಸಿದ್ದಾರೆ.

ಮಲಿವಾಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇದು ಚುನಾವಣಾ ಸಮಯವಾದ್ದರಿಂದ ಇದೆಲ್ಲವೂ ಬಿಜೆಪಿಯ ಆಜ್ಞೆಯ ಮೇರೆಗೆ ನಡೆದಿರಬಹುದು. ಅವರ ಕರೆ, ದಾಖಲೆಗಳು, ಚಾಟ್‌ಗಳು ಮತ್ತು ಬಿಜೆಪಿ ನಾಯಕರೊಂದಿಗಿನ ಸಂವಾದದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಕುಮಾರ್‌ ದೂರಿನಲ್ಲಿ ಆಗ್ರಹಿಸಿದ್ದಾರೆ.

ಮೇ 13ರಂದು ಕೇಜ್ರಿವಾಲ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಲು ಹೋದಾಗ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಲಿವಾಲ್ ಕುಮಾರ್ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನು ಓದಿ: ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...