Homeಮುಖಪುಟಕೇಜ್ರಿವಾಲ್‌ ಅವರ ನಕಲಿ ವಿಡಿಯೋ ಪ್ರಸಾರ: ದೆಹಲಿ ಬಿಜೆಪಿ ನಾಯಕನ ಮನೆಯಲ್ಲಿ ಪಂಜಾಬ್ ಪೊಲೀಸರು!

ಕೇಜ್ರಿವಾಲ್‌ ಅವರ ನಕಲಿ ವಿಡಿಯೋ ಪ್ರಸಾರ: ದೆಹಲಿ ಬಿಜೆಪಿ ನಾಯಕನ ಮನೆಯಲ್ಲಿ ಪಂಜಾಬ್ ಪೊಲೀಸರು!

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಕಲಿ ವೀಡಿಯೋ ಟ್ವೀಟ್ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳು ದೆಹಲಿ ಬಿಜೆಪಿ ವಕ್ತಾರ ನವೀನ್ ಕುಮಾರ್ ಜಿಂದಾಲ್ ಅವರ ಮನೆಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.

ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಅಧಿಕಾರದಲ್ಲಿರುವ ಪಂಜಾಬ್‌ನ ಪೊಲೀಸರು “ನನ್ನನ್ನು ಬಂಧಿಸಲು” ಕಾರಿನಲ್ಲಿ ಬಂದಿದ್ದಾರೆ ಎಂದು ನವೀನ್ ಕುಮಾರ್‌‌ ಟ್ವೀಟ್ ಮಾಡಿದ್ದಾರೆ.

“… ನಾನು ಅರವಿಂದ್ ಕೇಜ್ರಿವಾಲ್‌ ಅವರಿಗೆ ಹೆದರುವುದಿಲ್ಲ. ನಾನು ಸಾರ್ವಜನಿಕರಿಗೆ ಅವರ ಬಗ್ಗೆ ಸತ್ಯವನ್ನು ಹೇಳುತ್ತಲೇ ಇರುತ್ತೇನೆ” ಎಂದು ನವೀನ್ ಕುಮಾರ್‌ ಟ್ವೀಟ್ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಜ್ರಿವಾಲ್ ಅವರ “ತಿರುಚಿರುವ ವೀಡಿಯೊ ಕ್ಲಿಪ್” ಅನ್ನು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಪಂಜಾಬ್ ಪೊಲೀಸರು ಶುಕ್ರವಾರದಂದು ನವೀನ್‌ ಕುಮಾರ್‌ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ವಕೀಲರು ಮತ್ತು ಸಬ್ ಇನ್ಸ್‌ಪೆಕ್ಟರ್ ಗಗನ್‌ದೀಪ್ ಸಿಂಗ್ ಅವರು ಮೊಹಾಲಿಯಲ್ಲಿ ದೂರು ದಾಖಲಿಸಿದ ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರಾಜ್ಯದಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಪಂಜಾಬ್ ಪೊಲೀಸರು ದೆಹಲಿ ಬಿಜೆಪಿ ನಾಯಕರ ವಿರುದ್ಧ ದಾಖಲಿಸಿರುವ ಎರಡನೇ ಪ್ರಕರಣ ಇದಾಗಿದೆ.

“ಜಿಂದಾಲ್ ಅವರು ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದ ದೃಶ್ಯಗಳಿಂದ ಕತ್ತರಿಸಿದ ವೀಡಿಯೊವನ್ನು ಹಂಚಿಕೊಂಡು ಮೂಲ ವಿಷಯವನ್ನು ತಿರುಚಿದ್ದಾರೆ” ಎಂದು ದೂರುದಾರರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಒಂದು ರಾಜ್ಯ-ಹಲವು ಜಗತ್ತುಗಳು ಜಾಹೀರಾತು; ಹಲವು ಜಗತ್ತುಗಳ ನಿರ್ನಾಮದ ವಾಸ್ತವ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...