Homeಮುಖಪುಟಕೇಜ್ರಿವಾಲ್ ಕಸ್ಟಡಿ ಇಂದು ಅಂತ್ಯ: ಕೋರ್ಟ್‌ಗೆ ಹಾಜರುಪಡಿಸಲಿರುವ ಇಡಿ

ಕೇಜ್ರಿವಾಲ್ ಕಸ್ಟಡಿ ಇಂದು ಅಂತ್ಯ: ಕೋರ್ಟ್‌ಗೆ ಹಾಜರುಪಡಿಸಲಿರುವ ಇಡಿ

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇಡಿ ಕಸ್ಟಡಿ ಇಂದು ಅಂತ್ಯಗೊಳ್ಳಲಿದ್ದು, ಅವರನ್ನು ಬೆಳಿಗ್ಗೆ 11 ಗಂಟೆಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.

ಮಾರ್ಚ್ 21 ರಂದು ಬಂಧಿತರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರವರೆಗೆ ನ್ಯಾಯಾಲಯ ಇಡಿ ಕಸ್ಟಡಿಗೆ ಒಪ್ಪಿಸಿತ್ತು.

ತನ್ನ ಬಂಧನ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದಿರುವ ಕೇಜ್ರಿವಾಲ್, ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಏಪ್ರಿಲ್ 2ರೊಳಗೆ ಪ್ರತಿಕ್ರಿಯೆ ನೀಡುವಂತೆ ಇಡಿಗೆ ಹೈಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 3ಕ್ಕೆ ನಿಗದಿಪಡಿಸಿದೆ.

ಕೇಜ್ರಿವಾಲ್ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರ ಬಂಧನ ಖಂಡಿಸಿ ಮಾರ್ಚ್‌ 31ರಂದು ದೆಹಲಿಯ ರಾಮ್‌ಲೀಲಾ ಮೈದಾನಲ್ಲಿ ಇಂಡಿಯಾ ಮೈತ್ರಿಕೂಟದ ವತಿಯಿಂದೆ ‘ಪ್ರಜಾ ಪ್ರಭುತ್ವ ರಕ್ಷಿಸಿ’ ಎಂಬ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ.

ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಇಡಿ, 22ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಾಲಯ ಆರಂಭದಲ್ಲಿ ಮಾರ್ಚ್‌ 28ವರೆಗೆ ಇಡಿ ಕಸ್ಟಡಿಗೆ ನೀಡಿತ್ತು. ಮಾರ್ಚ್‌ 28ರಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಇಡಿ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ನ್ಯಾಯಾಲಯ ಏಪ್ರಿಲ್ 1ರ ವರೆಗೆ ಕಸ್ಟಡಿ ವಿಸ್ತರಣೆ ಮಾಡಿದೆ.

ಇದನ್ನೂ ಓದಿ : ಪ್ರತಿಪಕ್ಷಗಳ ಒಗ್ಗಟ್ಟನ್ನು ಬಲಪಡಿಸಿದ ‘ಲೋಕತಂತ್ರ ಬಚಾವೋ’ ರ್‍ಯಾಲಿ: ಯಾವ್ಯಾವ ನಾಯಕರು ಏನೇನು ಹೇಳಿದ್ರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...