Homeಮುಖಪುಟಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಯವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಯವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Advertisement -
- Advertisement -

ಕನ್ನಡದ ಖ್ಯಾತ ಲೇಖಕರಾದ ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಪದ್ಮರಾಜ ದಂಡಾವತಿಯವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರತಿದೆ.

ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾದರೆ, ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿಯವರು ಅನುವಾದಿಸಿದ ‘ಸೀತಾ: ರಾಮಾಯಣದ ಸಚಿತ್ರ ಮರುಕಥನ’ ಕೃತಿ ಆಯ್ಕೆಯಾಗಿದೆ.

ಮೂಡ್ನಾಕೂಡು ಚಿನ್ನಸ್ವಾಮಿಯವರ ಪರಿಚಯ

ಚಾಮರಾಜನಗರ ಜಿಲ್ಲೆಯವರಾದ ಮೂಡ್ನಾಕೂಡು ಚಿನ್ನಸ್ವಾಮಿಯವರು ದಲಿತ-ಬಂಡಾಯ ಸಾಹಿತ್ಯದಲ್ಲಿ ವಿಶೇಷ ಛಾಪು ಮೂಡಿಸಿದವರು. “ನಾನೊಂದು ಮರವಾಗಿದ್ದರೆ”, “ನಮ್ಮ ಎಲುಬಿನ ಹಂದರದೊಳಗೊಂದು ಮಂದಿರವಿದೆ” ಎಂದು ಬರೆದು ಕನ್ನಡ ಸಾಹಿತ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದರು. ಸರಳ ಹಾಗೂ ಆಪ್ತವಾಗಿ ಮೂಡಿಬಂದ ಇವರ ಕವಿತೆಗಳು ಬುದ್ಧಪ್ರಜ್ಞೆಯನ್ನು ಬಿತ್ತಿವೆ.

ಇವರ ಕವಿತೆಗಳು ಇಂಗ್ಲೀಷ್, ಸ್ಪ್ಯಾನಿಷ್, ಫ್ರೆಂಚ್ ಹಾಗೂ ಹೀಬ್ರೂ ಭಾಷೆಗಳಿಗೆ ಅನುವಾದಗೊಂಡು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲೂ ಪ್ರಕಟವಾಗಿವೆ. ಔಟ್‌ಲುಕ್‌ ಪತ್ರಿಕೆ ‘ಭಾರತವನ್ನು ಪುನರ್‌ ನಿರ್ಮಾಣ ಮಾಡಿದ 50 ದಲಿತ ಸಾಧಕರ ಪಟ್ಟಿ’ ಪ್ರಕಟಿಸಿದ್ದು, ಅದರಲ್ಲಿ ಚಿನ್ನಸ್ವಾಮಿಯವರ ಹೆಸರೂ ಸೇರಿದೆ.

ನಾನೊಂದು ಮರವಾಗಿದ್ದರೆ, ಚಪ್ಪಲಿ ಮತ್ತು ನಾನು, ಬುದ್ಧ ಬೆಳದಿಂಗಳು, ಮತ್ತೆ ಮಳೆ ಬರುವ ಮುನ್ನ, ಮೋಹದ ದೀಪ, ಪಾಪಪ್ರಜ್ಞೆ, ಕೆಂಡ ಮಂಡಲ, ಬಹುರೂಪಿ, ಒಂದು ಕೊಡ ಹಾಲಿನ ಸಮರ, ಅಪರಿಮಿತದ ಕತ್ತಲೆ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ ಸೇರಿದಂತೆ ಇದುವರೆಗೆ 38 ಕೃತಿಗಳನ್ನು ರಚಿಸಿದ್ದಾರೆ. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕಥನವಾಗಿದೆ.

ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ನಿವೃತ್ತರಾಗಿದ್ದು, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಾಮರಾಜನಗರ 2ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಏಪ್ರಿಲ್ 2011ರಲ್ಲಿ ಭಾಲ್ಕಿಯಲ್ಲಿ ನಡೆದ ಕಲ್ಯಾಣ ನಾಡಿನ ಶರಣ ಸಮ್ಮೇಳನದಲ್ಲಿ ಮತ್ತು ಜೂನ್ 2011ರಲ್ಲಿ ಕೊಪ್ಪಳದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದರು.

‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದ್ದು ಇದನ್ನು ಗದಗ “ಲಡಾಯಿ ಪ್ರಕಾಶನ” ಪ್ರಕಟಿಸಿದೆ. ಅವರ ಪ್ರಶಸ್ತಿಯು ಒಂದು ಲಕ್ಷ ರುಪಾಯಿ, ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿದ್ದೆ.

ಪದ್ಮರಾಜ ದಂಡಾವತಿ

ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ ಹಿರಿಯ ಪತ್ರಕರ್ತರಾದ ಪದ್ಮರಾಜ ದಂಡಾವತಿಯವರಿಗೆ ಕೇಂದ್ರ ಸಾಹಿತ್ಯ ಅನುವಾದ ಪ್ರಶಸ್ತಿ ದೊರಕಿದೆ. ಅವರ ದೇವದತ್ತ ಪಟ್ಟನಾಯಕ ಅವರ ‘ಸೀತಾ’ ಕೃತಿಯನ್ನು ಇಂಗ್ಲಿಷನಿಂದ ಕನ್ನಡಕ್ಕೆ ಅನುವಾದಿಸಿದ್ದು ಧಾರವಾಡದ “ಮನೋಹರ ಗ್ರಂಥಮಾಲೆ” ಯು ಈ ಕೃತಿಯನ್ನು ಪ್ರಕಟಿಸಿದೆ. ಅನುವಾದ ಪ್ರಶಸ್ತಿಯು ಐವತ್ತು ಸಾವಿರ ರುಪಾಯಿ, ಪ್ರಶಸ್ತಿ ಫಲಕ ಹಾಗೂ ಸನ್ಮಾನಗಳು ಒಳಗೊಂಡಿರುತ್ತವೆ.

2023ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ.

ಇದನ್ನೂ ಓದಿ: ಮೂಡ್ನಾಕೂಡು ಚಿನ್ನಸ್ವಾಮಿಯವರ ’ಬುದ್ಧಾನುಸಾಸನಂ’: ಬೌದ್ಧ ಧಮ್ಮದ ಅರಿವಿನ ದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...