Homeಕರ್ನಾಟಕಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಶ್ರೀನಿವಾಸ ವೈದ್ಯ ನಿಧನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಶ್ರೀನಿವಾಸ ವೈದ್ಯ ನಿಧನ

- Advertisement -
- Advertisement -

‘ಹಳ್ಳ ಬಂತು ಹಳ್ಳ’ ಕಾದಂಬರಿ ಖ್ಯಾತಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಶ್ರೀನಿವಾಸ ವೈದ್ಯರವರು ಇಂದು ನಿಧನರಾಗಿದ್ದಾರೆ.

87 ವರ್ಷದ ಶ್ರೀನಿವಾಸ ವೈದ್ಯರವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಧಾರವಾಡ ಜಿಲ್ಲೆಯ ನವಲಗುಂದದವರಾದ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಲೇ ಸಾಹಿತ್ಯದಲ್ಲಿ ಆಸಕ್ತಿ ಹೊಂದಿ ತೊಡಿಸಿಕೊಂಡಿದ್ದರು. ಲಲಿತ ಪ್ರಬಂಧಗಳು ಮತ್ತು ಹಲವು ಕಾದಂಬರಿಗಳನ್ನು ರಚಿಸಿದ್ದಾರೆ. ಅವರ ‘ಹಳ್ಳ ಬಂತು ಹಳ್ಳ’ ಕಾದಂಬರಿಗೆ 2004ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು 2008ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿತ್ತು.

ಸಂವಾದ ಎನ್ನುವ ಸಾಂಸ್ಕೃತಿಕ ಸಂಘಟನೆಯನ್ನು ಸ್ಥಾಪಿಸಿರುವ ಅವರು, ತಲೆಗೊಂದು ತರತರ,
ಮನಸುಖರಾಯನ ಮನಸು ಮತ್ತು ರುಚಿಗೆ ಹುಳಿಯೊಗರು ಎಂಬ ಲಲಿತ ಪ್ರಬಂಧಗಳನ್ನು ರಚಿಸಿದ್ದಾರೆ. ಅಗ್ನಿಕಾರ್ಯ, ಮೊದಲ ಓದು ಮತ್ತು ಕಪ್ಪೆ ನುಂಗಿದ ಹುಡುಗ ಎಂಬ ಕಥಾ ಸಂಕಲನಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ನಿಮ್ಮ ಫಲಿತಾಂಶ ನೋಡಲು ಈ ಲಿಂಕ್ ಬಳಸಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

0
ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅನಾರ್ ಭಾರತದಲ್ಲಿ ನಾಪತ್ತೆಯಾದ ಎಂಟು ದಿನಗಳ ನಂತರ ಕೋಲ್ಕತ್ತಾ ಪೊಲೀಸರು ಅವರ ತುಂಡರಿಸಿದ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಕೋಲ್ಕತ್ತಾ ಪೊಲೀಸರು ಹತ್ಯೆಯು ಪೂರ್ವ ನಿಯೋಜಿತ ಎಂದು ಹೇಳಿಕೊಂಡಿದ್ದಾರೆ. ಅನಾರ್...