Homeಕರ್ನಾಟಕಕೇಂದ್ರ ಸಾಹಿತ್ಯ ಅಕಾಡೆಮಿ: ಯುವ ಪುರಸ್ಕಾರಕ್ಕೆ ಶ್ರುತಿ ಬಿಆರ್, ಬಾಲ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಆಯ್ಕೆ

ಕೇಂದ್ರ ಸಾಹಿತ್ಯ ಅಕಾಡೆಮಿ: ಯುವ ಪುರಸ್ಕಾರಕ್ಕೆ ಶ್ರುತಿ ಬಿಆರ್, ಬಾಲ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಆಯ್ಕೆ

- Advertisement -
- Advertisement -

ಕೇಂದ್ರ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ‘ಬಾಲ ಸಾಹಿತ್ಯ ಪುರಸ್ಕಾರ’ ಮತ್ತು ‘ಯುವ ಪುರಸ್ಕಾರ ಪ್ರಶಸ್ತಿ’ ಪ್ರಕಟಗೊಂಡಿದೆ.

ಬಾಲ ಸಾಹಿತ್ಯ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಬಿಳಿಗೆರೆ ಅವರು ಆಯ್ಕೆಯಾಗಿದ್ದಾರೆ. ಕೃಷ್ಣಮೂರ್ತಿಯವರ ‘ಛೂಮಂತ್ರಯ್ಯನ ಕಥೆಗಳು’ ಕಥಾ ಸಂಗ್ರಹಕ್ಕೆ ಪ್ರಶಸ್ತಿ ದೊರೆತಿದೆ.

ಕೃಷ್ಣಮೂರ್ತಿಯವರು ಕಣ್ಮುಚ್ಚಾಲೆ ಮಕ್ಕಳ ಗುಂಪು, ನಮ್ಮ ಪ್ರಕಾಶನ ಮತ್ತು ಸಿರಿಸಮೃದ್ಧಿ ಬಳಗ ಮುಂತಾದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆ. ಹುಳಿಯಾರಿನ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಸಾವಯವ ಕೃಷಿ ಮತ್ತು ಮಳೆ ನೀರಿನ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಮಕ್ಕಳಿಗಾಗಿ ಜೀರಿಂಬೆ ಹಾಡು, ಗುಡು ಗುಡು ಗುಡ್ಡ, ಪದ್ಯದ ಮರ, ಡ್ರೂ ಡ್ರೂ ಡ್ರೂಟೆ, ಹಾಡೆ ಸುವ್ವಿ ಹಾಡಿನ ಪುಸ್ತಕಗಳನ್ನು ಬರೆದಿದ್ದಾರೆ. ಹಾಗೆಯೇ ಮಳೆ ಹುಚ್ಚ, ಅಗಲ ಕಿವಿಯ ಅರಿವುಗಾರ, ನವಿಲೂರಿನ ಕತೆ, ಅಂಗಭಂಗದ ರಾಜ್ಯದಲ್ಲಿ, ಕೇಡಾಳ ಕೆಪ್ಪರ್ಕ, ಕತ್ತೆ ಹಾಡು ಎಂಬ ಮಕ್ಕಳ ನಾಟಕಗಳನ್ನು ರಚಿಸಿದ್ದಾರೆ. ಚಗಚೆ ಹೂವಿನ ಹುಡುಗಿ, ಛೂಮಂತ್ರಯ್ಯನ ಕತೆಗಳು ಇವರ ಮಕ್ಕಳ ಕಥಾ ಪುಸ್ತಕಗಳಾಗಿದೆ.

ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ ಇವರ ಕಾವ್ಯ ಕೃತಿಗಳಾಗಿದ್ದು, ಮಳೆ ನೀರ ಕೊಯ್ಲು ಕುರಿತ ಪುಸ್ತಕಗಳು ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ, ಬಿಸ್ಲುಬಾಳೆ ಹಣ್ಣು ಮತ್ತು ಇತರ ಪ್ರಬಂಧಗಳು ರಚಿಸಿದ್ದಾರೆ.

ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಸಾಹಿತ್ಯ ಪ್ರಶಸ್ತಿ, ಜಿಎಸ್ಎಸ್ ಕಾವ್ಯ ಪ್ರಶಸ್ತಿ, ಶಿಕ್ಷಣ ಸಿರಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಪ್ರಶಸ್ತಿಗಳಿಗೆ ಕೃಷ್ಣಮೂರ್ತಿ ಬಿಳಿಗೆರೆ ಭಾಜನರಾಗಿದ್ದಾರೆ.

ಯುವ ಪುರಸ್ಕಾರಕ್ಕೆ ಶ್ರುತಿ ಬಿಆರ್‌ ಆಯ್ಕೆ

ಯುವ ಪುರಸ್ಕಾರಕ್ಕೆ ಕವಯತ್ರಿ ಶ್ರುತಿ ಬಿಆರ್‌ ಆಯ್ಕೆಯಾಗಿದ್ದಾರೆ. ಶ್ರುತಿ ಅವರ ಚೊಚ್ಚಲ ಕವನ ಸಂಕಲನ ‘ಜಿರೋ ಬ್ಯಾಲೆನ್ಸ್‌’ಗೆ ಪ್ರಶಸ್ತಿ ಲಭಿಸಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯವರಾದ ಶ್ರುತಿ ಬಿಆರ್, ಪ್ರಸ್ತುತ ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶ್ರುತಿ ಅವರು ಮಾನಸ ಗಂಗೋತ್ರಿಯ ಮೈಸೂರು ವಿಶ್ವ ವಿದ್ಯಾನಿಲಯದಿಂದ ಪ್ರಥಮ ರ್‍ಯಾಂಕ್‌ ಮತ್ತು ಐದು ಚಿನ್ನದ ಪದಕಗಳೊಂದಿಗೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, 2017ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿಹೆಚ್‌ಡಿ ಪದವಿ ಪಡೆದಿದ್ದಾರೆ.

ಇವರ ಹಲವಾರು ಲೇಖನಗಳು, ಕವಿತೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 2008ರಲ್ಲಿ ಪ್ರಜಾವಣಿ ದೀಪಾವಳಿ ವಿಶೇಷಾಂಕದ ಕವನ ಸ್ಪರ್ಧೆಯ ವಿದ್ಯಾರ್ಥಿ ವಿಭಾಗದ ಬಹುಮಾನ ದೊರೆತಿದೆ.

ಬಾಲ ಸಾಹಿತ್ಯ ಪುರಸ್ಕಾರಕ್ಕೆ ಒಟ್ಟು ಏಳು ಕಾದಂಬರಿಗಳು, ಆರು ಕವನ ಸಂಕಲನಗಳು ನಾಲ್ಕು ಕಥಾ ಸಂಕಲನಗಳು, ಐದು ಸಣ್ಣ ಕಥಾ ಸಂಕಲನಗಳು, ಒಂದು ನಾಟಕ ಮತ್ತು ಒಂದು ಹಿಸ್ಟಾರಿಕಲ್ ಫಿಕ್ಷನ್‌ ಆಯ್ಕೆಯಾಗಿವೆ.

ಯುವ ಪುರಸ್ಕಾರ ಒಟ್ಟು 10 ಕವನ ಸಂಕಲನಗಳು, ಏಳು ಕಥಾ ಸಂಕಲನಗಳು, ಎರಡು ಪ್ರಬಂಧ ಸಂಕಲನಗಳು, ಒಂದು ಕಾದಂಬರಿ, ಒಂದು ಗಝಲ್ ಪುಸ್ತಕ್ಕೆ ದೊರೆತಿದೆ.

ಇದನ್ನೂ ಓದಿ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುಮಾರಸ್ವಾಮಿ, ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...