Homeಕರ್ನಾಟಕಡಿ.ಎಸ್. ನಾಗಭೂಷಣ್ ಅವರ 'ಗಾಂಧಿ ಕಥನ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಡಿ.ಎಸ್. ನಾಗಭೂಷಣ್ ಅವರ ‘ಗಾಂಧಿ ಕಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಎಚ್. ಲಕ್ಷೀನಾರಾಯಣ ಸ್ವಾಮಿ ಅವರ 'ತೊಗಲ ಚೀಲದ ಕರ್ಣ ' ಮಹಾ ಕಾವ್ಯಕ್ಕೆ ಯುವ ಪುರಸ್ಕಾರ

- Advertisement -
- Advertisement -

ಕನ್ನಡದ ಪ್ರಮುಖ ಲೇಖಕರಾದ ಡಿ.ಎಸ್. ನಾಗಭೂಷಣ್ ಅವರ ‘ಗಾಂಧಿ ಕಥನ’ ಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಈ ’ವರ್ಷದ ಪುಸ್ತಕ’ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಗುರುವಾರ ಘೋಷಿಸಿದೆ.

ಅಕಾಡೆಮಿಯು ನೀಡುವ ‘ಯುವ ಪುರಸ್ಕಾರ’ ಕ್ಕೆ ಎಚ್. ಲಕ್ಷೀನಾರಾಯಣ ಸ್ವಾಮಿ ಅವರ ‘ತೊಗಲ ಚೀಲದ ಕರ್ಣ’ ಮಹಾ ಕಾವ್ಯವು ಆಯ್ಕೆಯಾಗಿದೆ. ‘ಬಾಲ ಪುರಸ್ಕಾರ’ ಕ್ಕೆ ಬಸು ಬೇವಿನಗಿಡದ ಅವರ ‘ಓಡಿ ಹೋದ ಹುಡುಗ’ ಮಕ್ಕಳಿಗಾಗಿ ಬರೆದ ಕಾದಂಬರಿ ಆಯ್ಕೆಯಾಗಿದೆ.

ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಹಾಗೂ ಸನ್ಮಾನ ಒಳಗೊಂಡಿದ್ದರೆ ಯುವ ಪುರಸ್ಕಾರ ಹಾಗೂ ಬಾಲ ಪುರಸ್ಕಾರಗಳು ಐವತ್ತು ಸಾವಿರ ರೂಪಾಯಿ ನಗದು ಹಾಗೂ ಸನ್ಮಾನಗಳನ್ನು ಒಳಗೊಂಡಿರುತ್ತವೆ.

ಇದನ್ನೂ ಓದಿ: ಮಂಗಳೂರು: ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗೆ ಕಾಂಡೋಮ್‌ ಹಾಕಿದ್ದ ವ್ಯಕ್ತಿಯ ಬಂಧನ

ಸಾಹಿತಿ ಕಮಲಾ ಹಂಪನಾ, ಜಗದೀಶ್ ಕೊಪ್ಪ ಹಾಗೂ ವಿಜಯಕುಮಾರಿ ಯುವ ಸಾಹಿತ್ಯ ಪ್ರಶಸ್ತಿಯ ತೀರ್ಪುಗಾರರಾಗಿದ್ದರೇ, ಬಾಲ ಸಾಹಿತ್ಯ ಪ್ರಶಸ್ತಿಗೆ ಟಿ. ಪಿ. ಅಶೋಕ, ಮಾಲತಿ ಪಟ್ಟಣಶೆಟ್ಟಿ ಹಾಗೂ ಎಸ್. ದಿವಾಕರ ತೀರ್ಪುಗಾರರಾಗಿದ್ದರು.

ಪ್ರಮುಖ ಕೃತಿ ಆಯ್ಕೆಯ ತೀರ್ಪುಗಾರರಾಗಿ ಬೊಳುವಾರ್ ಮಹಮ್ಮದ್ ಕುಂಞಿ, ಅಮರೇಶ ನುಗಡೋಣಿ ಹಾಗೂ ಸಬೀಹಾ ಭೂಮಿಗೌಡ ಅವರಿದ್ದರು. ಪುಸ್ತಕ ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕರಾದ ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ನಡೆದಿದೆ.

ಫೆಬ್ರವರಿ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿ ವಿಜೇತರರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸಾಹಿತಿ ಚಂದ್ರಶೇಖರ ಕಂಬಾರ ಅಭಿನಂದಿಸಿದ್ದಾರೆ.


ಇದನ್ನೂ ಓದಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...