Homeಮುಖಪುಟಕುಸ್ತಿಪಟುಗಳ ಹೋರಾಟಕ್ಕೆ ಮಣಿದ ಕೇಂದ್ರ; ಜು 4ಕ್ಕೆ ಡಬ್ಲ್ಯುಎಫ್‌ಐ ಚುನಾವಣೆ, ಚುನಾವಣಾ ಅಧಿಕಾರಿ ನೇಮಕ

ಕುಸ್ತಿಪಟುಗಳ ಹೋರಾಟಕ್ಕೆ ಮಣಿದ ಕೇಂದ್ರ; ಜು 4ಕ್ಕೆ ಡಬ್ಲ್ಯುಎಫ್‌ಐ ಚುನಾವಣೆ, ಚುನಾವಣಾ ಅಧಿಕಾರಿ ನೇಮಕ

- Advertisement -
- Advertisement -

ಭಾರತೀಯ ಒಲಿಂಪಿಕ್ ಸಂಸ್ಥೆಯು (ಐಒಎ), ಭಾರತ ಕುಸ್ತಿ ಫೆಡರೇಷನ್‌ ಚುನಾವಣೆಯನ್ನು ಜುಲೈ 4ರಂದು ನಡೆಸಲು ನಿರ್ಧರಿಸಿದೆ. ಚುನಾವಣಾ ಅಧಿಕಾರಿಯನ್ನಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್‌ ಕುಮಾರ್ ಅವರನ್ನು ಆಯ್ಕೆ ಮಾಡಿದೆ.

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಹೋರಾಟದಲ್ಲಿ ತೊಡಗಿದ್ದು, ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಜುಲೈ 7ರಂದು ಅವರ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ಅವರು ನನೆಗುದಿಗೆ ಬಿದ್ದಿರುವ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವುದಾಗಿ ಹೇಳಿದ್ದರು. ಆದರೆ, ಡಬ್ಲುಎಫ್‌ಐ ವಿಶೇಷ ಮಹಾಸಭೆಯನ್ನು ಕರೆಯಲು 21 ದಿನಗಳ ಮೊದಲು ನೋಟಿಸ್‌ ನೀಡಬೇಕಾಗಿರುವ ಕಾರಣ ಜುಲೈ 4ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ವಾರ್ಷಿಕ ಮಹಾಸಭೆ ಅಥವಾ ವಿಶೇಷ ಮಹಾಸಭೆ ಕರೆದು ಚುನಾವಣೆ ನಡೆಸಬಹುದಾಗಿದೆ. ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಸದಸ್ಯರಿಗೆ ಅಥವಾ ಬೆಂಬಲಿಗರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸಚಿವರು ಕುಸ್ತಿಪಟುಗಳಿಗೆ ಆಶ್ವಾಸನೆ ನೀಡಿದ್ದರು. ಹಾಗಾಗಿ ಕುಸ್ತಿಪಟುಗಳು ಜೂನ್ 15ರವರೆಗೆ ಹೋರಾಟ ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ.

ಐಒಎ ಸಿಇಒ ಆಗಿರುವ ಕಲ್ಯಾಣ್ ಚೌಬೆ ಅವರು ನ್ಯಾ.ಮಿತ್ತಲ್ ಕುಮಾರ್ ಅವರಿಗೆ ನೇಮಕದ ವಿಷಯವನ್ನು ಪತ್ರಮುಖೇನ ತಿಳಿಸಿದ್ದು, ಹುದ್ದೆ ವಹಿಸಲು ಸಮ್ಮತಿಸುವಂತೆ ಮನವಿ ಮಾಡಿದ್ದಾರೆ. ಆದರೆ ನ್ಯಾ.ಮಿತ್ತಲ್ ಕುಮಾರ್ ಅವರು ವಿಶೇಷ ಮಹಾಸಭೆಯ ದಿನಾಂಕದ ಬಗ್ಗೆ ತಮ್ಮದೇ ನಿರ್ಧಾರ ಕೈಗೊಳ್ಳಬಹುದು. ಜುಲೈ 4ರಂದೇ ಚುನಾವಣೆ ನಡೆಸಬೇಕೇ ಅಥವಾ ಕೆಲದಿನಗಳ ನಂತರ ನಡೆಸಬೇಕೇ ಎಂಬುದು ಅವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಅಜಯ್ ಮಿಶ್ರಾರಂತೆ ಬ್ರಿಜ್ ಭೂಷಣ್‌ರನ್ನು ಬಿಡಲು ಸಾಧ್ಯವಿಲ್ಲ: ರೈತರ ಪ್ರತಿಭಟನೆಯಲ್ಲಿ ಕುಸ್ತಿಪಟು ಬಜರಂಗ್ ಹೇಳಿಕೆ

ಈ ಕುಸ್ತಿ ಫಡರೇಷನ್‌ಗೆ ಕೇಂದ್ರಾಡಳಿತ ಪ್ರದೇಶ ಚಂಡೀಗಢ ಮತ್ತು ದೆಹಲಿ ಸೇರಿದಂತೆ 25 ಸಂಯೋಜಿತ ಘಟಕಗಳಿವೆ. ಪ್ರತಿ ಘಟಕಗಳು ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಬಹುದು. ಪ್ರತಿಯೊಬ್ಬರೂ ಮತ ಚಲಾಯಿಸಲು ಅವಕಾಶವಿದೆ. ಚುನಾವಣೆಯಲ್ಲಿ ಒಟ್ಟು 50 ಜನ ಮತದಾನ ಮಾಡಲಿದ್ದಾರೆ.

ರಾಜ್ಯ ಘಟಕಗಳು ಕಾರ್ಯಕಾರಿ ಸಮಿತಿಯಲ್ಲಿರುವವರನ್ನು ಮಾತ್ರ ಪ್ರತಿನಿಧಿಗಳನ್ನಾಗಿ ನಾಮನಿರ್ದೇಶನ ಮಾಡಬೇಕಾಗುತ್ತದೆ ಎಂದು ಕುಸ್ತಿ ಫೆಡರೇಷನ್ ನಿಯಮಾವಳಿ ಹೇಳುತ್ತದೆ. ಹಾಗಾಗಿ ಬ್ರಿಜ್ ಭೂಷಣ್ ಸಿಂಗ್‌ ಅವರ ಬೆಂಬಲಿಗರು ಅರ್ಹ ಅಭ್ಯರ್ಥಿಗಳಾಗಿದ್ದು ಚುನಾವಣೆಗೆ ನಾಮಪತ್ರ ಸಲ್ಲಿಸಿದರೆ ಏನಾಗಬಹುದು ಎನ್ನುವ ಕುತೂಹಲವೂ ಮೂಡಿದೆ.

ಆರೋಪಿ ಬ್ರಿಜ್‌ಭೂಷಣ್ ಸಿಂಗ್ ಅವರ ಪುತ್ರ ಕರಣ್ ಈ ಹಿಂದಿನ ಡಬ್ಲ್ಯುಎಫ್‌ಐ ಆಡಳಿತವರ್ಗದಲ್ಲಿ ಉಪಾಧ್ಯಕ್ಷ ಸ್ಥಾನದಲ್ಲಿದ್ದರು. ಅವರು ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದಾರೆ. ಸಿಂಗ್ ಅವರ ಅಳಿಯ ವಿಶಾಲ್ ಸಿಂಗ್ ಅವರು ಬಿಹಾರ ಕುಸ್ತಿ ಸಂಸ್ಥೆ ಅಧ್ಯಕ್ಷರಾಗಿದ್ದಾರೆ. ಇವರೆನ್ನೆಲ್ಲ ಇದೀಗ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ.

ಜುಲೈ 7ರಂದು ಅನುರಾಗ್ ಠಾಕೂರ್ ಅವರನ್ನು ಕುಸ್ತಿಪಟುಗಳು ಭೇಟಿಯಾದರು. ಈ ವೇಳೆ, ಭಾರತ ಕುಸ್ತಿ ಒಕ್ಕೂಟಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಾಗೂ ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನು ಕುಸ್ತಿಪಟುಗಳು ಸಚಿವರಿಗೆ ಸಲ್ಲಿಸಿದರು. ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು ಡಬ್ಲ್ಯುಎಫ್‌ಐ ಭಾಗವಾಗಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು.

ಕುಸ್ತಿಪಟುಗಳು ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ತಮ್ಮ ಪ್ರತಿಭಟನೆಯ ಬಗ್ಗೆ ತಮ್ಮ ವಿರುದ್ಧ ಪೋಲೀಸ್ ಪ್ರಕರಣವನ್ನು ದಾಖಲಿಸಿದ್ದಾರೆ. ಅವೆಲ್ಲ ಪ್ರಕರಣಗಳನ್ನು ತಗೆಯಬೇಕು. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಅವರು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...