Homeಮುಖಪುಟಕೇರಳ| 10 ಜನ ಶಂಕಿತ ಮಾದಕ ವಸ್ತು ಬಳಕೆದಾರರಿಗೆ ಎಚ್‌ಐವಿ ಪಾಸಿಟಿವ್!

ಕೇರಳ| 10 ಜನ ಶಂಕಿತ ಮಾದಕ ವಸ್ತು ಬಳಕೆದಾರರಿಗೆ ಎಚ್‌ಐವಿ ಪಾಸಿಟಿವ್!

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಮತ್ತು ಮಾದಕ ವಸ್ತು ಬಳಸುವ ಯುವಕರು ಸೇರಿದಂತೆ ಹತ್ತು ಜನರಿಗೆ ಎಚ್‌ಐವಿ ಪಾಸಿಟಿವ್ ಕಂಡುಬಂದಿದೆ.

ಕೇರಳ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ (ಕೆಎಸ್‌ಎಸಿಎಸ್) ಪ್ರಕಾರ, ಕೇರಳದಲ್ಲಿ ಪ್ರತಿ ತಿಂಗಳು ಸರಾಸರಿ 130 ರಿಂದ 140 ಹೊಸ ಎಚ್‌ಐವಿ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಹೊಸದಾಗಿ ಪತ್ತೆಯಾಗುತ್ತಿರುವ ಎಚ್‌ಐವಿ ಪಾಸಿಟಿವ್ ಪ್ರಕರಣಗಳಲ್ಲಿ 18-25 ವರ್ಷ ವಯಸ್ಸಿನ ಯುವಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಕಂಡುಬಂದಿದೆ. ಮಾದಕ ವಸ್ತು ಸೇವನೆಯೇ ಪ್ರಮುಖ ಕಾರಣವೆಂದು ಅಂದಾಜಿಸಲಾಗಿದೆ. ರಾಜ್ಯದಲ್ಲಿ ಎಚ್‌ಐವಿ ಚಿಕಿತ್ಸೆ ಪಡೆಯುತ್ತಿರುವ ಒಟ್ಟು ವ್ಯಕ್ತಿಗಳು ಸುಮಾರು 17,000.

ಕೆಎಸ್‌ಎಸಿಎಸ್ ನಡೆಸಿದ ಸ್ಕ್ರೀನಿಂಗ್ ಸಮಯದಲ್ಲಿ ಮಲಪ್ಪುರಂನಲ್ಲಿ ಈ ಗುಂಪನ್ನು ಗುರುತಿಸಲಾಯಿತು. ಅವರು ಮಾದಕ ವಸ್ತು ಸೇವನೆಗಾಗಿ ಸಿರಿಂಜ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಶಂಕಿಸಲಾಗಿದೆ.

ಹೆಚ್ಚಿನ ವ್ಯಕ್ತಿಗಳು ಎಚ್‌ಐವಿ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ಕಂಡುಹಿಡಿಯಲು ಮತ್ತಷ್ಟು ಸ್ಕ್ರೀನಿಂಗ್ ನಡೆಸಲಾಗುತ್ತಿದೆ ಎಂದು ಮಲಪ್ಪುರಂ ಜಿಲ್ಲಾ ವೈದ್ಯಾಧಿಕಾರಿ ಆರ್ ರೇಣುಕಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೇರಳದಲ್ಲಿ ಮಾದಕ ವಸ್ತು ಸೇವನೆಯಲ್ಲಿ, ವಿಶೇಷವಾಗಿ ಯುವಕರಲ್ಲಿ ಆತಂಕಕಾರಿ ಹೆಚ್ಚಳ ಕಂಡುಬಂದಿದೆ. ಕೊಲೆಗಳಂತಹ ಗಂಭೀರ ಅಪರಾಧಗಳಲ್ಲಿ ಮಾದಕ ವ್ಯಸನಿಗಳು ಭಾಗಿಯಾಗಿರುವ ಹಲವಾರು ಪ್ರಕರಣಗಳ ಹಿನ್ನೆಲೆಯಲ್ಲಿ ಕಳೆದ ಕೆಲವು ವಾರಗಳಿಂದ ರಾಜ್ಯಾದ್ಯಂತ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳು ಕಾರ್ಯಾಚರಣೆ ನಡೆಸುತ್ತಿವೆ.

ಕೆಎಸ್‌ಎಸಿಎಸ್‌, ಶಿಕ್ಷಣ ಸಂಸ್ಥೆಗಳ ಮೂಲಕ ಮತ್ತು ವಲಸೆ ಕಾರ್ಮಿಕರಲ್ಲಿ ಬೃಹತ್ ಜಾಗೃತಿ ಚಟುವಟಿಕೆಗಳನ್ನು ನಡೆಸುತ್ತಿದೆ. ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವರು ತಮ್ಮ ಗುರುತನ್ನು ಬಹಿರಂಗಪಡಿಸಲು ಸಿದ್ದರಿಲ್ಲದೆ ಇರುವುದು ವಲಸೆ ಕಾರ್ಮಿಕರನ್ನು ಪರೀಕ್ಷಿಸುವಲ್ಲಿ ಎದುರಿಸುತ್ತಿರುವ ಪ್ರಮುಖ ಸವಾಲುಗಳಾಗಿವೆ.

ಕೇರಳದಲ್ಲಿ ಪತ್ತೆಯಾಗುತ್ತಿರುವ ಹೊಸ ಎಚ್‌ಐವಿ ಪಾಸಿಟಿವ್ ಪ್ರಕರಣಗಳಲ್ಲಿ ಲೈಂಗಿಕ ಕಾರ್ಯಕರ್ತರು ಹಾಗೂ ಸಲಿಂಗಿಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಕಂಡುಬಂದಿದೆ.

ನಕಲಿ ಶಾಲೆಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಿಲ್ಲ ಅವಕಾಶ: ಸಿಬಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...