Homeಮುಖಪುಟಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ಈ ಕಾರ್ಯಕ್ರಮದಡಿಯಲ್ಲಿ ಶಿಕ್ಷಣವಂಚಿತರಿಗೆ ಮಾಸಿಕ ವಿದ್ಯಾರ್ಥಿವೇತನ ನೀಡುವುದರೊಂದಿಗೆ ಪಿಯುಸಿವರೆಗಿನ ಉಚಿತ ಶಿಕ್ಷಣವನ್ನೂ ನೀಡಲಾಗುತ್ತಿದೆ.

- Advertisement -
- Advertisement -

ರಾಜ್ಯ ಸಾಕ್ಷರತಾ ಮಿಷನ್ ಅಡಿಯಲ್ಲಿ ನೀಡುವ ಸಮಾನ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ 12ನೇ ತರಗತಿಯನ್ನು ಯಶಸ್ವಿಯಾಗಿ ಪೂರೈಸಿದ ನಂತರ 18 ಮಂದಿ ಮಂಗಳಮುಖಿಯರು ಉನ್ನತ ವ್ಯಾಸಂಗಕ್ಕೆ ಅರ್ಹತೆ ಪಡೆದಿದ್ದಾರೆ.

ಈ ಕಾರ್ಯಕ್ರಮದಡಿಯಲ್ಲಿ ಶಿಕ್ಷಣವಂಚಿತರಿಗೆ ಮಾಸಿಕ ವಿದ್ಯಾರ್ಥಿವೇತನ ನೀಡುವುದರೊಂದಿಗೆ ಪಿಯುಸಿವರೆಗಿನ ಉಚಿತ ಶಿಕ್ಷಣವನ್ನೂ ನೀಡಲಾಗುತ್ತಿದೆ.

ಈ 18 ಜನ ಮಂಗಳಮುಖಿಯರು, ಮಾಸಿಕ ವಿದ್ಯಾರ್ಥಿವೇತನದೊಂದಿಗೆ 6 ನೇ ತರಗತಿಯಿಂದ 12ನೇ ತರಗತಿವರೆಗೆ ಉಚಿತವಾಗಿ ಸಮಾನ ಶಿಕ್ಷಣ ನೀಡುವ ‘ಸಮನ್ವಯ’ ಯೋಜನೆಯ ಭಾಗವಾಗಿದ್ದರು.

ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಸಿಕ 1,000 ವಿದ್ಯಾರ್ಥಿವೇತನವನ್ನು ನೀಡಿದರೆ, ಉನ್ನತ ಮಾಧ್ಯಮಿಕ ವಿದ್ಯಾರ್ಥಿಗಳು ಪ್ರತಿ ತಿಂಗಳು 1,250 ರೂ. ವಿದ್ಯಾರ್ಥಿ ವೇತನ ಪಡೆಯುತ್ತಾರೆ.

ಹನ್ನೆರಡನೇ ತರಗತಿಯ ಸಮಾನ ಶಿಕ್ಷಣ ಕಾರ್ಯಕ್ರಮವನ್ನು ಉನ್ನತ ಮಾಧ್ಯಮಿಕ ಕೋರ್ಸ್‌ಗೆ ಸಮನಾಗಿ ಮಾಡಲಾಗಿರುವುದರಿಂದ, ಇದರಲ್ಲಿ ಪಾಸಾದ ಎಲ್ಲಾ ಅಭ್ಯರ್ಥಿಗಳು ಉನ್ನತ ವ್ಯಾಸಂಗಕ್ಕೆ ದಾಖಲಾಗಬಹುದು.

ಇದನ್ನೂ ಓದಿ: ಇವರ ಹೋರಾಟದ ಬದುಕಿಗೆ ನಮ್ಮದೊಂದು ಸಲಾಮ್

ಪರೀಕ್ಷೆಗೆ ಒಟ್ಟು 22 ಅಭ್ಯರ್ಥಿಗಳು ಹಾಜರಾಗಿದ್ದು, 18 ಮಂದಿ ಯಶಸ್ವಿಯಾಗಿ ಪಾಸಾಗಿದ್ದಾರೆ. ಪಥನಂತಿಟ್ಟಾದಲ್ಲಿ 8 ಅಭ್ಯರ್ಥಿಗಳು ಪರೀಕ್ಷೆ ಬರೆದು ಪಾಸಾಗಿದ್ದರೆ, ತಿರುವನಂತಪುರಂ ನಲ್ಲಿ 5, ಕೊಲ್ಲಂನಲ್ಲಿ 2 ಮತ್ತು ತ್ರಿಶೂರ್, ಕೋಝಿಕೋಡ್ ಕಣ್ಣೂರ್‌‌ನಲ್ಲಿ ತಲಾ ಒಬ್ಬರು ಪಾಸಾಗಿದ್ದಾರೆ.

ಪಥನಂತಿಟ್ಟಾ ಜಿಲ್ಲೆಯಲ್ಲಿ, ರಾಜ್ಯ ಸಾಕ್ಷರತಾ ಮಿಷನ್ ಸಮಾನ ಶಿಕ್ಷಣ ಕಾರ್ಯಕ್ರಮಕ್ಕೆ ಸೇರಿಕೊಂಡವರಿಗೆ ಉಚಿತ ಆಹಾರ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಿತ್ತು.

ಈ ಸಮನ್ವಯ ಯೋಜನೆ 2018 ರಲ್ಲಿ ಪ್ರಾರಂಭವಾದಾಗಿನಿಂದ, 39 ಮಂದಿ ಮಂಗಳಮುಖಿಯರು ಉನ್ನತ ವ್ಯಾಸಂಗಕ್ಕೆ ಅರ್ಹರಾಗಿದ್ದಾರೆ. ಪ್ರಸ್ತುತ 30 ಮಂಗಳಮುಖಿಯರು ಹತ್ತನೇ ತರಗತಿಯ ಈ ಕಾರ್ಯಕ್ರಮದಡಿಯಲ್ಲಿ ದಾಖಲಾಗಿದ್ದರೆ, ಹನ್ನೆರಡನೇ ತರಗತಿಗೆ 62 ದಾಖಲಾತಿಗಳು ಆಗಿವೆ.

ಬಾಲ್ಯದಲ್ಲಿಯೇ ಲಿಂಗ ಗುರುತಿಸುವಿಕೆಯ ಕಾರಣದಿಂದ ಔಪಚಾರಿಕ ಶಿಕ್ಷಣ ಮತ್ತು ಅನೌಪಚಾರಿಕ ಶಿಕ್ಷಣ ಎರಡರಿಂದಲೂ ವಂಚಿತವಾಗುವ ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಇತ್ತೀಚೆಗೆ ತನ್ನೆಲ್ಲಾ ಸಂಕಷ್ಟಗಳನ್ನೂ ಮೀರಿಕೊಂಡು ಮುನ್ನೆಲೆಗೆ ಬರುತ್ತಿದೆ. ಇದಕ್ಕೆ ಕರ್ನಾಟಕ ಮತ್ತು ಕೇರಳದಂತಹ ರಾಜ್ಯಗಳೇ ಉತ್ತಮ ಉದಾಹರಣೆಗಳು. ಅದಾಗ್ಯೂ ಇಂದಿಗೂ ಅಸುರಕ್ಷಿತ ವಾತಾವರಣದಲ್ಲಿ ಮತ್ತು ಅಪಾಯಕಾರಿಯಾಗಿಯಾಗಿ ಬದುಕು ಅನೇಕ ಮಂಗಳಮುಖಿಯರು ನಮ್ಮ ಸುತ್ತಲೇ ಇದ್ದಾರೆ.

ಇಂತಹವರ ನಡುವೆ ಸಾಧನೆ ಮಾಡುವ ಮಂಗಳಮುಖಿಯರು ನಿಜಕ್ಕೂ ಆಶಾದಾಯಕವಾಗಿ ಕಾಣುತ್ತಾರೆ.


ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಹೋರಾಟಗಾರ್ತಿ ಅಖೈ ಪದ್ಮಶಾಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...