Homeಮುಖಪುಟಕೇರಳ: ಕೋಳಿ ಫಾರಂನಲ್ಲಿ ಅಗ್ನಿ ಅವಘಡ, 20 ಮಂದಿಗೆ ಗಾಯ

ಕೇರಳ: ಕೋಳಿ ಫಾರಂನಲ್ಲಿ ಅಗ್ನಿ ಅವಘಡ, 20 ಮಂದಿಗೆ ಗಾಯ

- Advertisement -
- Advertisement -

ಕೇರಳದ ಪಲ್ಲಕಾಡ್ ಜಿಲ್ಲೆಯ ಕೋಳಿ ಸಾಕಾಣಿಕೆ ಕೇಂದ್ರದಲ್ಲಿ ತೈಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿ, ಸಿಬ್ಬಂದಿ ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿರುವಿಳಂಕುನ್ನುನಲ್ಲಿ ಸಂಜೆ 5 ಗಂಟೆಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು  ತಿಳಿಸಿದ್ದಾರೆ.

“ಎನ್‌ಆರ್‌ಐ ಒಡೆತನದ ಈ ಕೇಂದ್ರವು ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾಗ, ತೈಲ ಸೋರಿಕೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅವರು ಅಗ್ನಿಶಾಮಕ ದಳದ ಸಹಾಯವನ್ನು ಕೋರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಂತೆ, ತೈಲ ಟ್ಯಾಂಕ್‌ನ ಉಷ್ಣತೆಯು ಹೆಚ್ಚಾಗಿ, ಸ್ಫೋಟಕ್ಕೆ ಕಾರಣವಾಯಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರನ್ನು ಪಿಟಿಐ ಉಲ್ಲೇಖಿಸಿದೆ.

ಆಯಿಲ್ ಟ್ಯಾಂಕ್‌ನಲ್ಲಿ ಎಣ್ಣೆಯನ್ನು ಹೋಲುವ ದ್ರವ ಇದ್ದು ಹೆಚ್ಚಿನ ತಾಪಮಾನದಿಂದಾಗಿ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ, 20 ಜನರು ಗಾಯಗೊಂಡಿದ್ದು ಅವರನ್ನು ಹತ್ತಿರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಂಕಿಯನ್ನು ನಂದಿಸಲಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.


ಇದನ್ನೂ ಓದಿ: ಇರಾಕ್‌: ಕೋವಿಡ್‌ ಆಸ್ಪತ್ರೆಯಲ್ಲಿ ಅಗ್ನಿ ಅವಘಡ- 50ಕ್ಕು ಹೆಚ್ಚು ಜನರ ದುರ್ಮರಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...