Homeಮುಖಪುಟಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ...

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

- Advertisement -
- Advertisement -

ಯುವಕನೋರ್ವ ತನ್ನ ಗೆಳತಿ, ಕುಟುಂಬ ಸದಸ್ಯರು ಸೇರಿ ಐವರನ್ನು ಹತ್ಯೆಗೈದು, ತಾನೂ ವಿಷ ಸೇವಿಸಿ ಪೊಲೀಸರ ಮುಂದೆ ಹಾಜರಾದ ಭಯಾನಕ ಘಟನೆ ಕೇರಳದ ತಿರುವನಂತಪುರ ಜಿಲ್ಲೆಯ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೋಮವಾರ (ಫೆ.24) ನಡೆದಿದೆ.

ಆರೋಪಿ 23 ವರ್ಷದ ಅಫಾನ್ ಎಂದು ತಿಳಿದು ಬಂದಿದೆ. ಅಫಾನ್ ಸೋಮವಾರ ಸಂಜೆ 6.15ರ ಸುಮಾರಿಗೆ ವೆಂಜರಮೂಡು ಪೊಲೀಸ್ ಠಾಣೆಗೆ ತೆರಳಿ, “ತನ್ನ ಗೆಳತಿ ಸೇರಿ 6 ಮಂದಿಯನ್ನು ಹತ್ಯೆಗೈದಿದ್ದೇನೆ. ಮನೆಯಲ್ಲಿ ಗ್ಯಾಸ್ ಆನ್ ಮಾಡಿಟ್ಟಿದ್ದೇನೆ. ತಾನೂ ವಿಷ ಸೇವಿಸಿದ್ದೇನೆ” ಎಂದಿದ್ದಾನೆ.

ಯುವಕನ ಮಾತು ಕೇಳಿ ದಂಗಾದ ಪೊಲೀಸರು, ತಕ್ಷಣ ಆತನ ಮನೆಗೆ ಧಾವಿಸಿದ್ದಾರೆ. ಅಲ್ಲಿ ಆತನ 13 ವರ್ಷದ ಸಹೋದರ ಅಹ್ಸಾನ್ ಮತ್ತು ಗೆಳತಿ ಫರ್ಝಾನಾಳ ಮೃತದೇಹ ಕಂಡು ಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಶೆಮಿ ಜೀವನ್ಮರಣ ಹೋರಾಟದಲ್ಲಿದ್ದರು. ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿ ಅಫಾನ್, ತನ್ನ ಸಹೋದರ ಅಹ್ಸಾನ್, ಗೆಳತಿ ಫರ್ಝಾನಾ, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿದಾ (ಲತೀಫ್ ಅವರ ಪತ್ನಿ) ಮತ್ತು ತಾಯಿ ಶೆಮಿ ಸೇರಿ 6 ಮಂದಿಯ ಮೇಲೆ ದಾಳಿ ಮಾಡಿದ್ದಾನೆ. ಈ ಪೈಕಿ ಐವರು ಸಾವನ್ನಪ್ಪಿದ್ದು, ತಾಯಿ ಶೆಮಿ ಬದುಕುಳಿದಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಅಫಾನ್ ಸುತ್ತಿಗೆಯಿಂದ ಹೊಡೆದು ಎಲ್ಲರನ್ನೂ ಹತ್ಯೆ ಮಾಡಿದ್ದಾನೆ. ಆತನ ಚಿಕ್ಕಪ್ಪ ಲತೀಫ್ ಅವರ ದೇಹ ಅವರ ಮನೆಯ ಲಿವಿಂಗ್ ರೂಮಿನ ಸೋಫಾದಲ್ಲಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ. ಲತೀಫ್ ಅವನ ಪತ್ನಿ ಶಾಹಿದಾ ಅವರ ದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ. ಗೆಳತಿ ಫರ್ಝಾನಾ ಅವರ ದೇಹ ಕೂಡ ಸೋಫಾದಲ್ಲಿ ಪತ್ತೆಯಾಗಿದ್ದು, ಅವರ ಮುಖವನ್ನು ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿತ್ತು.

ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂರು ಪ್ರದೇಶಗಳಾದ ವೆಂಜರಮೂಡು, ಎಸ್‌.ಎನ್‌ ಪುರಂ ಮತ್ತು ಪಾಂಗೋಡ್‌ನಲ್ಲಿ ಕೊಲೆಗಳು ನಡೆದಿವೆ. ಪೊಲೀಸರ ಪ್ರಕಾರ, ಆರೋಪಿ ಅಫಾನ್ ವೆಂಜರಮೂಡಿನಲ್ಲಿರುವ ತನ್ನ ಮನೆಯಿಂದ ಪಾಂಗೋಡಿಗೆ ಸುಮಾರು 25 ಕಿ.ಮೀ ದೂರ ಪ್ರಯಾಣಿಸಿ, ಅಲ್ಲಿ ಮೊದಲು ತನ್ನ ಅಜ್ಜಿಯನ್ನು ಕೊಂದಿದ್ದಾನೆ. ನಂತರ 4 ಕಿ.ಮೀ ಪ್ರಯಾಣಿಸಿ ಎಸ್‌.ಎನ್‌ ಪುರಂನ ಕೂನನ್‌ವೆಂಗದಲ್ಲಿ ಚಿಕ್ಕಪ್ಪ ಮತ್ತು ಚಿಕ್ಕಮ್ಮರನ್ನು ಅವರ ಮನೆಯಲ್ಲೇ ಹತ್ಯೆ ಮಾಡಿದ್ದಾರೆ. ಅಲ್ಲಿಂದ ವೆಂಜರಮೂಡಿನ ಮನೆ ಕಡೆಗೆ ಪ್ರಯಾಣಿಸಿದ ಆತ, ದಾರಿ ಮಧ್ಯೆ ಗೆಳತಿ ಫರ್ಝಾನಳನ್ನು ಕರೆದುಕೊಂಡು ಬಂದಿದ್ದಾನೆ. ಮನೆಗೆ ತಲುಪಿದ ನಂತರ, ಸಹೋದರ ಅಹ್ಸಾನ್, ಗೆಳತಿ ಫರ್ಝಾನ ಮತ್ತು ತಾಯಿ ಶೆಮಿ ಮೇಲೆ ದಾಳಿ ಮಾಡಿದ್ದಾನೆ.

ಘಟನೆ ಸಂಬಂಧ ವೆಂಜರಮೂಡು ಮತ್ತು ಪಾಂಗೋಡ್ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ನಡುವೆ ಸರಣಿ ಕೊಲೆಗಳು ನಡೆದಿವೆ. ಆದರೆ, ಆರೋಪಿಯ ಸರಿಯಾದ ಹೇಳಿಕೆಯನ್ನು ಪಡೆಯಲು ಸದ್ಯಕ್ಕೆ ಸಾಧ್ಯವಾಗದ ಕಾರಣ ಪ್ರತಿ ಕೊಲೆಯ ನಿಖರವಾದ ಸಮಯವನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ. ಆರೋಪಿ ವಿಷ ಸೇವಿಸಿದ್ದ ಕಾರಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿರುವನಂತಪುರಂ ಗ್ರಾಮೀಣ ಎಸ್ಪಿ ಸುದರ್ಶನ್ ಕೆ.ಎಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಆರೋಪಿ ಅಫಾನ್ ಪೊಲೀಸರ ಮುಂದೆ ಶರಣಾಗುವ ಮೊದಲು ವಿಷ ಸೇವಿಸಿದ್ದರು. ಅವರನ್ನು ಪ್ರಸ್ತುತ ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ವಾಮನಪುರಂ ಶಾಸಕ ಡಿ.ಕೆ. ಮುರಳಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಮ್ಮ ಕುಟುಂಬವು ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು. ಆದರೆ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ, ಅದು ವಿಫಲವಾದರೆ ಯಾರಾದರು ಬದುಕುಳಿಯಬಹುದೆಂಬ ಭಯದಿಂದ, ಸ್ವತಃ ನಾನೇ ಕೊಲ್ಲುವ ತೀರ್ಮಾನ ಮಾಡಿದೆ” ಎಂಬುವುದಾಗಿ ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎಂದು ಶಾಸಕ ಡಿ.ಕೆ. ಮುರಳಿ ಹೇಳಿದ್ದಾರೆ.

ವಿದೇಶದಲ್ಲಿ ವಾಹನಗಳ ಬಿಡಿಭಾಗಗಳ ವ್ಯವಹಾರ ನಡೆಸುತ್ತಿದ್ದ ಅಫಾನ್‌ನ ತಂದೆ, ಇತ್ತೀಚೆಗೆ ವಿಸಿಟಿಂಗ್ ವೀಸಾದಲ್ಲಿ ತೆರಳಿದ್ದರು. ಅವರ ವ್ಯವಹಾರ ಕುಸಿದು ಕುಟುಂಬ ಭಾರೀ ಸಾಲದಲ್ಲಿ ಸಿಲುಕಿತ್ತು. ಅಫಾನ್‌ನ ತಾಯಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಿರಿಯ ಸಹೋದರ ಅಹ್ಸಾನ್ ವೆಂಜರಮೂಡು ಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕುಟುಂಬಸ್ಥರು ತನಗೆ ಹಣ ನೀಡದ ಕಾರಣ ಅಫಾನ್‌ ಅಸಮಾಧಾನಗೊಂಡಿದ್ದ ಎಂದು ಸಂಬಂಧಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ, ಪೊಲೀಸರು ಇದನ್ನು ಇನ್ನೂ ದೃಢಪಡಿಸಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸೌಜನ್ಯ : thenewsminute.com

ಮೂವರು ಅಪ್ರಾಪ್ತ ಆದಿವಾಸಿ ಬಾಲಕಿಯರ ಮೇಲೆ 18 ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...