Homeರಾಜಕೀಯಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

- Advertisement -
- Advertisement -

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಕುಂದರ ಮೂಲದ ಖಾಸಗಿ ಬಸ್ ಚಾಲಕ ಸಿಯಾದ್ (29) ಎಂದು ಗುರುತಿಸಲಾಗಿದೆ.

ಅನ್ಯಾಯವಾಗಿ ಕಸ್ಟಡಿಗೆ ತೆಗೆದುಕೊಂಡು ಆತನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಯುವಕನ ಕುಟುಂಬಸ್ಥರು ಹಾಗೂ ಸಂಬಂಧಿಕರು ಗಂಭೀರ ಆರೋಪ ಮಾಡಿದ್ದಾರೆ. ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲದ ಸಿಯಾದ್, ತಮ್ಮ ಬಡ ಕುಟುಂಬಕ್ಕೆ ಏಕೈಕ ಜೀವನಾಧಾರ ಹಾಗೂ ಆಸರೆಯಾಗಿದ್ದರು. ಮಗನ ಅಕಾಲಿಕ ಸಾವಿನಿಂದ ಪೋಷಕರು ಸಂಪೂರ್ಣವಾಗಿ ದಿಕ್ಕಾಪಾಲಾಗಿದ್ದಾರೆ.

ವರದಿಗಳ ಪ್ರಕಾರ, ನೆರೆಮನೆಯ 13 ವರ್ಷದ ಬಾಲಕನೊಬ್ಬ ಕಾಣೆಯಾಗಿದ್ದಾನೆ ಎಂಬ ದೂರು ಕುಂದರ ಪೊಲೀಸ್ ಠಾಣೆಗೆ ಬಂದಿತ್ತು. ಈ ದೂರಿನನ್ವಯ ಜೂನ್ 16 ರ ರಾತ್ರಿ ಪೊಲೀಸರು ಸಿಯಾದ್‌ನನ್ನು ವಶಕ್ಕೆ ಪಡೆದಿದ್ದರು. ಆದರೆ, ಮರುದಿನ ಬೆಳಿಗ್ಗೆ ಕಾಣೆಯಾಗಿದ್ದ ಬಾಲಕ ಸುರಕ್ಷಿತವಾಗಿ ಮನೆಗೆ ಹಿಂದಿರುಗಿದ ನಂತರ ಪೊಲೀಸರು ಸಿಯಾದ್‌ನನ್ನು ಬಿಡುಗಡೆ ಮಾಡಿದ್ದರು.

ಆದರೆ, ಕಸ್ಟಡಿಗೆ ಪಡೆದ ತಕ್ಷಣವೇ ಪೊಲೀಸರು ಸಿಯಾದ್ ಮೇಲೆ ನರಕಯಾತನೆ ಹಾಗೂ ಹಲ್ಲೆ ಪ್ರಾರಂಭಿಸಿದ್ದರು ಎಂದು ಘಟನೆ ವೇಳೆ ಜೀಪ್‌ನಲ್ಲಿದ್ದ ದೂರುದಾರರೇ ಸಾಕ್ಷಿ ನುಡಿದಿದ್ದಾರೆ. ವ್ಯಕ್ತಿ ನಾಪತ್ತೆ ದೂರು ನೀಡಿದ್ದ ದೂರುದಾರರು ತಿಳಿಸಿರುವಂತೆ, ಕುಂದರ ಪೊಲೀಸರು ಸಿಯಾದ್‌ನನ್ನು ವಶಕ್ಕೆ ಪಡೆದು ಪೊಲೀಸ್ ಜೀಪಿಗೆ ಹತ್ತಿಸಿದ ತಕ್ಷಣ, ನಾಗರಿಕ ಪೊಲೀಸ್ ಅಧಿಕಾರಿ (ಸಿಪಿಒ) ಶ್ರೀಜಿತ್ ಆತನ ಮೇಲೆ ದೈಹಿಕ ಹಲ್ಲೆ ನಡೆಸಲು ಪ್ರಾರಂಭಿಸಿದರು.

“ಸಿಯಾದ್ ರನ್ನು ಪೊಲೀಸರು ಕ್ರೂರವಾಗಿ ಥಳಿಸಿದಾಗ ನಾನು ಜೀಪಿನೊಳಗೇ ಇದ್ದೆ. ಹಲ್ಲೆಯ ತೀವ್ರತೆಗೆ ಆತ ನೋವಿನಿಂದ ಆಕ್ರಂದನ ಮುಗಿಲು ಮುಟ್ಟುವಂತೆ ಕೂಗಾಡಿದನು” ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದಾರೆ.

ಸಿಯಾದ್ ಅವರ ಪೋಷಕರಾದ ಬದ್ರುದ್ದೀನ್ ಮತ್ತು ಆರಿಫಾ ಬೀವಿ ಅವರು ಮಾತನಾಡಿ, ಬೇರೊಬ್ಬ ವ್ಯಕ್ತಿ ಎಂದು ತಪ್ಪಾಗಿ ಭಾವಿಸಿ ಪೊಲೀಸರು ತಮ್ಮ ಮಗನನ್ನು ಪೊಲೀಸ್ ವಾಹನದೊಳಗೆ ಅಮಾನವೀಯವಾಗಿ ಥಳಿಸಿದ್ದಾರೆಂದು ಸಿಯಾದ್ ತಮಗೆ ತಿಳಿಸಿದ್ದಾಗಿ ಕಣ್ಣೀರು ಹಾಕಿದ್ದಾರೆ. 

ಕುಟುಂಬಸ್ಥರ ಪ್ರಕಾರ, ಸಿಯಾದ್‌ಗೆ ಈ ಹಿಂದೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿರಲಿಲ್ಲ. ಆದರೆ ಪೊಲೀಸರ ಕ್ರೂರ ಹಲ್ಲೆಯ ನಂತರ, ತೀವ್ರ ನೋವಿನಿಂದಾಗಿ ಆತನಿಗೆ ಎಂಟು ದಿನಗಳ ಕಾಲ ನೀರು ಕುಡಿಯಲು ಕೂಡ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆರೋಗ್ಯ ಸ್ಥಿತಿ ಅತ್ಯಂತ ಕ್ಷೀಣಿಸಿದಾಗ ಸಿಯಾದ್ ಅವರನ್ನು ಕೊಲ್ಲಂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ಎದೆನೋವಿಗೆ ಕಾರಣ ತಿಳಿಯಲು ಎಕ್ಸ್-ರೇ ಪರೀಕ್ಷೆ ನಡೆಸಿದಾಗ, ಪೊಲೀಸರ ಹಲ್ಲೆಯಿಂದಾಗಿ ಆತನ ಪಕ್ಕೆಲುಬುಗಳು ಮುರಿದಿರುವುದು ಪತ್ತೆಯಾಯಿತು.

ಪಕ್ಕೆಲುಬಿನ ಮುರಿತ ಮತ್ತು ಅದರಿಂದ ಉಂಟಾದ ಆಂತರಿಕ ಗಾಯಗಳಿಂದಾಗಿ ಸಿಯಾದ್ ಅವರ ಶ್ವಾಸಕೋಶಕ್ಕೆ ತೀವ್ರ ಪ್ರಮಾಣದ ಸೋಂಕು ತಗುಲಿತು. ಸ್ಥಿತಿ ಇನ್ನಷ್ಟು ಬಿಗಡಾಯಿಸಿದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ವೆಂಟಿಲೇಟರ್ ಬೆಂಬಲದೊಂದಿಗೆ ತುರ್ತು ಚಿಕಿತ್ಸೆ ಪಡೆಯುತ್ತಿದ್ದ ಸಿಯಾದ್, ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಯಾವುದೇ ಅಪರಾಧ ಹಿನ್ನೆಲೆಯಿಲ್ಲದ ಸಿಯಾದ್ ತಮ್ಮ ಕುಟುಂಬದ ಏಕೈಕ ಆಧಾರ ಸ್ತಂಭವಾಗಿದ್ದರು. ಈ ಘಟನೆಯಿಂದ ಆಕ್ರೋಶಗೊಂಡಿರುವ ಸಂಬಂಧಿಕರು ಹಾಗೂ ಸಾರ್ವಜನಿಕರು, ಹಲ್ಲೆಯಲ್ಲಿ ಭಾಗಿಯಾದ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ಸೇವೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕೆಂದು ತೀವ್ರವಾಗಿ ಒತ್ತಾಯಿಸಿದ್ದಾರೆ. ಘಟನೆಯ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ದೂರು ಸಲ್ಲಿಸುವುದಾಗಿಯೂ ಕುಟುಂಬಸ್ಥರು ತಿಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಪ್ರಸ್ತುತ ಜಿಲ್ಲಾ ಅಪರಾಧ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಅವರಿಗೆ ವಹಿಸಲಾಗಿದೆ. ಆದರೆ, ಪೊಲೀಸರು ತಮ್ಮ ಮೇಲಿನ ಕಸ್ಟಡಿ ಹಲ್ಲೆಯ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ.

ಮತ್ತೊಂದೆಡೆ, ಈ ಘಟನೆಯನ್ನು ಖಂಡಿಸಿ ಕುಂದರ ಪೊಲೀಸ್ ಠಾಣೆಯ ಹೊರಗೆ ಭಾರತೀಯ ಪ್ರಜಾಸತ್ತಾತ್ಮಕ ಯುವ ಒಕ್ಕೂಟ (ಡಿವೈಎಫ್‌ಐ – DYFI) ಬೃಹತ್ ಪ್ರತಿಭಟನೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ. 

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಘಟನೆಗೆ ಕಾರಣರಾದವರ ವಿರುದ್ಧ ತಕ್ಷಣದ ಕ್ರಮಕ್ಕೆ ಕರೆ ನೀಡಿದ್ದು, “ಸರ್ಕಾರವು ಎಲ್ಲಾ ಅಪರಾಧಿಗಳನ್ನು ಕಠಿಣ ಕ್ರಮದ ಮೂಲಕ ಕಾನೂನಿನ ಮುಂದೆ ತರಲಿದೆ” ಎಂದು ಭರವಸೆ ನೀಡಿದ್ದಾರೆ.

ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಹಾಗೂ ಶಾಸಕರಾದ ಕೆ.ಎನ್. ಬಾಲಗೋಪಾಲ್ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, “ಈ ಘಟನೆಯು ಕೇರಳದ ಪೊಲೀಸ್ ವ್ಯವಸ್ಥೆಯು ಪ್ರಸ್ತುತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದಕ್ಕೆ ಗೊಂದಲದ ಹಾಗೂ ಕಳವಳಕಾರಿ ಪ್ರತಿಬಿಂಬವಾಗಿದೆ” ಎಂದು ಬಣ್ಣಿಸಿದ್ದಾರೆ. 

ಈ ಹಿಂದೆ ತಿರುವನಂತಪುರಂನ ಫೋರ್ಟ್ ಪೊಲೀಸ್ ಠಾಣೆಯಲ್ಲಿ ನಡೆದ ಉದಯಕುಮಾರ್ ಕಸ್ಟಡಿ ಕೊಲೆ ಪ್ರಕರಣಕ್ಕೆ ಈ ಘಟನೆಯನ್ನು ಹೋಲಿಸಿದ ಬಾಲಗೋಪಾಲ್, ಘಟನೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಬೇಕು, ಅವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕು ಮತ್ತು ಸಂಕಷ್ಟದಲ್ಲಿರುವ ಸಿಯಾದ್ ಕುಟುಂಬಕ್ಕೆ ಸರ್ಕಾರ ತಕ್ಷಣವೇ ಸೂಕ್ತ ಆರ್ಥಿಕ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...