Homeಮುಖಪುಟಕೇರಳ | ಆರ್‌ಎಸ್‌ಎಸ್‌ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ್ : ವರದಿ

ಕೇರಳ | ಆರ್‌ಎಸ್‌ಎಸ್‌ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ್ : ವರದಿ

- Advertisement -
- Advertisement -

ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ.

ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ತ್ರಿಶ್ಶೂರ್‌ನಲ್ಲಿ ಭೇಟಿಯಾಗಿದ್ದಾರೆ ಎಂದು ವಿಶೇಷ ಪೊಲೀಸ್ ಘಟಕದ ವರದಿ ಹೇಳಿರುವುದಾಗಿ ಈಟಿವಿ ಭಾರತ್ ವರದಿ ಮಾಡಿದೆ.

ಈ ಮೂಲಕ ಎಡಿಜಿಪಿ ವಿರುದ್ಧ ಕೇರಳದ ವಿಧಾನಸಭೆಯ ಪ್ರತಿಪಕ್ಷ ನಾಯಕ ವಿಡಿ ಸತೀಶನ್ ಮಾಡಿರುವ ಆರೋಪವನ್ನು ಪೊಲೀಸರ ವರದಿ ದೃಢೀಕರಿಸಿದಂತಾಗಿದೆ.

ಕೇರಳ ಪೊಲೀಸರ ತ್ರಿಶ್ಶೂರ್ ವಿಶೇಷ ಘಟಕದ ವರದಿ ಪ್ರಕಾರ, “ಮೇ 22, 2023ರಂದು ಪರಮೆಕ್ಕಾವ್ ವಿದ್ಯಾ ಮಂದಿರಲ್ಲಿ ಆರ್‌ಎಸ್‌ಎಸ್‌ ನಾಯಕನನ್ನು ಭೇಟಿಯಾಗಲು ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌ ವತಿಯಿಂದಲೇ ವ್ಯವಸ್ಥೆ ಮಾಡಿದ್ದ ಕಾರಿನಲ್ಲಿ ಪ್ರಯಾಣಿಸಿದ್ದರು. ಈ ಬಗ್ಗೆ ಮರುದಿನವೇ ಗುಪ್ತಚರ ಇಲಾಖೆಯ ಮುಖ್ಯಸ್ಥರು, ಕೇರಳ ಪೊಲೀಸ್ ಮತ್ತು ಸರ್ಕಾರಕ್ಕೆ ಮಾಹಿತಿ ದೊರೆತಿತ್ತು” ಎಂದು ಈಟಿವಿ ಭಾರತ್ ತಿಳಿಸಿದೆ.

ಪೊಲೀಸರ ವರದಿ ಆರ್‌ಟಿಐಯಲ್ಲಿ ಲಭ್ಯವಿಲ್ಲ. ಅದನ್ನು ಬಹಿರಂಗಗೊಳಿಸುತ್ತಿಲ್ಲ. ಪೊಲೀಸರ ಘಟಕ ಎಡಿಜಿಪಿ ಮತ್ತು ಆರ್‌ಎಸ್‌ಎಸ್‌ ನಾಯಕನ ಭೇಟಿಯನ್ನು ಸಿಸಿಟಿವಿ ಆಧರಿಸಿನ ಖಚಿತಪಡಿಸಿದೆ. ಈ ಬಗ್ಗೆ ತಿರುವನಂತಪುರದ ಉನ್ನತಾಧಿಕಾರಿಗಳಿಗೆ ಮಾಹಿತಿ ನೀಡಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಈಟಿವಿ ಭಾರತ್ ಹೇಳಿದೆ.

ಎಡಿಜಿಪಿ ಅಜಿತ್ ಕುಮಾರ್ ಅವರು ತನ್ನ ಮೇಲಿನ ಆರೋಪದ ಕುರಿತು ಮುಖ್ಯಮಂತ್ರಿ ಕಚೇರಿಗೆ ಸ್ಪಷ್ಟನೆ ಕೊಟ್ಟಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಮುಖ್ಯಮಂತ್ರಿ ಪರವಾಗಿ ಆಡಳಿತರೂಢ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಸಭೆ ಆಯೋಜಿಸಿದ್ದರು ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಆದರೆ, ಆರೋಪವನ್ನು ಗೋವಿಂದನ್ ತಿರಸ್ಕರಿದ್ದಾರೆ. ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಪರವಾಗಿ ಯಾವುದೇ ಸಭೆ ನಡೆಸಿಲ್ಲ ಎಂದು ತಿಳಿಸಿದ್ದಾರೆ.

ಎಡಿಜಿಪಿ ಎಂಆರ್ ಅಜಿತ್ ಕುಮಾರ್ ಅವರೇ ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿಯನ್ನು ಭೇಟಿಯಾಗಿರುವುದನ್ನು ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಕಚೇರಿಗೆ ನೀಡಿರುವ ವಿವರಣೆಯಲ್ಲಿ ಈ ವಿಷಯ ಬಹಿರಂಗವಾಗಿದೆ ಎಂದು ಇನ್ನೂ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇದನ್ನೂ ಓದಿ : ಕೊಯಮತ್ತೂರು | 12 ಮಂದಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...