Homeಚಳವಳಿಕೇರಳ: ಸಂಜೆ ಕರ್ಫ್ಯೂ ವಿರುದ್ಧ ವಿದ್ಯಾರ್ಥಿನಿಯರ ಒಂದು ವರ್ಷದ ಹೋರಾಟಕ್ಕೆ ಗೆಲುವು

ಕೇರಳ: ಸಂಜೆ ಕರ್ಫ್ಯೂ ವಿರುದ್ಧ ವಿದ್ಯಾರ್ಥಿನಿಯರ ಒಂದು ವರ್ಷದ ಹೋರಾಟಕ್ಕೆ ಗೆಲುವು

- Advertisement -
- Advertisement -

ಕಾಲೇಜುಗಳ ಮಹಿಳಾ ಹಾಸ್ಟೆಲ್‌ಗಳಲ್ಲಿ ಸಂಜೆ 6 ಗಂಟೆಗೆ ಆರಂಭವಾಗುತ್ತಿದ್ದ ಕರ್ಫ್ಯೂ ವಿರುದ್ದ ಹೋರಾಟ ಆರಂಭಿಸಿದ್ದ ಕೇರಳದ ಅಲುವಾ ಯುಸಿ ಕಾಲೇಜಿನ ವಿದ್ಯಾರ್ಥಿಗಳು ಒಂದು ವರ್ಷದ ಬಳಿಕ ಗೆಲುವು ಸಾಧಿಸಿದ್ದಾರೆ.

ಮಹಿಳಾ ಹಾಸ್ಟೆಲ್‌ಗಳಲ್ಲಿ ಕರ್ಫ್ಯೂ ಸಮಯವನ್ನು ರಾತ್ರಿ 9.30ರ ನಂತರ ವಿಧಿಸಬೇಕು ಎಂಬ ವಿದ್ಯಾರ್ಥಿಗಳ ಉತ್ತಾಯಕ್ಕೆ ಕಾಲೇಜು ಆಡಳಿತ ಒಪ್ಪಿಗೆ ನೀಡಿದೆ. “ಇದು ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯ. ಹಲವು ಪ್ರತಿಭಟನೆಗಳು ನಡೆಸಿ, ಹಕ್ಕೊತ್ತಾಯಗಳನ್ನು ಸಲ್ಲಿಸಿದ ನಂತರ, ಕಾಲೇಜು ಅಂತಿಮವಾಗಿ ನಮ್ಮ ಕೆಲವು ಬೇಡಿಕೆಗಳನ್ನು ಒಪ್ಪಿಕೊಂಡಿದೆ ”ಎಂದು ವಿದ್ಯಾರ್ಥಿನಿ ಎಮಿಲ್ಲಾ ಜಾನ್ ಹೇಳಿದ್ದಾರೆ.

“2019 ರ ಹೈಕೋರ್ಟ್ ಆದೇಶದಂತೆ ಎಲ್ಲಾ ಹಾಸ್ಟೆಲ್‌ಗಳಲ್ಲಿ ಕರ್ಫ್ಯೂ ರಾತ್ರಿ 9.30ರ ನಂತರ ಇರಬೇಕು. ಭಾನುವಾರ ಮತ್ತು ಸಾರ್ವಜನಿಕ ರಜಾದಿನಗಳಲ್ಲಿ ವಿದ್ಯಾರ್ಥಿಗಳಿಗೆ ಹೊರಗೆ ಹೋಗಲು ಅವಕಾಶ ಮಾಡಿಕೊಡಿ ಎಂದು ನಾವು ಒತ್ತಾಯಿಸಿದ್ದೆವು. 2021ರ ಕೊನೆಯ ಕೆಲವು ತಿಂಗಳುಗಳಲ್ಲಿ ನಮ್ಮ ಪ್ರತಿಭಟನೆ ಆರಂಭಿಸಿದ್ದೆವು. ಈ ಬಳಿಕ, ಕಾಲೇಜು ಪುನರಾರಂಭವಾದಾಗ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಕಾಲೇಜು ಆಡಳಿತ ಭರವಸೆ ನೀಡಿತ್ತು” ಎಂದು ಮತ್ತೊಬ್ಬ ವಿದ್ಯಾರ್ಥಿನಿ ಟೆಸ್ಸಾ ಸಾರಾ ಕುರಿಯಾಕೋಸ್ ತಿಳಿಸಿದ್ದಾರೆ.

ಜನವರಿ 3 ರಂದು ಆಡಳಿತ ಮಂಡಳಿ ಸಭೆ ಸೇರಿತ್ತು. ನಮ್ಮ ಎಲ್ಲಾ ಬೇಡಿಕೆಗಳನ್ನು ಅವರು ಒಪ್ಪಿಕೊಂಡಿದ್ದು, ಮುಂದಿನ ದಿನ ಹಾಸ್ಟೆಲ್ ವಾರ್ಡನ್‌ಗಳೊಂದಿಗಿನ ಸಭೆಯ ನಂತರ ಅಧಿಕೃತ ನಿಲುವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದರು. ಆದರೆ, ಜನವರಿ 4 ರಂದು ನಡೆದ ಸಭೆಯ ನಂತರ, ಕರ್ಫ್ಯೂ ಸಮಯದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಘೋಷಿಸಿದ್ದರು. ಇದು ನಮ್ಮ ಸಹನೆಯನ್ನು ಪರೀಕ್ಷಿಸಿತ್ತು ಎಂದು ಟೆಸ್ಸಾ ಹೇಳಿದ್ದಾರೆ.

ಇದನ್ನೂ ಓದಿ: ರಾಮನಗರ: ರೇಷ್ಮೆ ಮಾರುಕಟ್ಟೆಯಲ್ಲಿ ಶೋಷಣೆ ಆರೋಪ – ಪತ್ರ ಅಭಿಯಾನ ಆರಂಭಿಸಿದ ರೈತರು

“ಭರವಸೆ ನೀಡಿ ಮತ್ತೆ ಅದನ್ನು ಈಡೇರಿಸದಿರುವುದನ್ನು ಒಪ್ಪಿಕೊಳ್ಳಲು ವಿದ್ಯಾರ್ಥಿಗಳು ಸಿದ್ಧರಿರಲಿಲ್ಲ. ಆರಂಭದಲ್ಲಿ ಅನೇಕ ಹಾಸ್ಟೆಲ್‌ಗಳಿಗೆ ನಮ್ಮ ಸಮಸ್ಯೆಗಳ ವಿಚಾರದಲ್ಲಿ ಸಂಘಟನೆಗಳು ಭಾಗಿಯಾಗುವುದು ಇಷ್ಟವಿರಲಿಲ್ಲ. ಆದರೆ, ಕಾಲೇಜು ನಮ್ಮ ಬೇಡಿಕೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದರಿಂದಾಗಿ, ಜನವರಿ 6 ರಂದು ಎಸ್‌ಎಫ್‌ಐ ಸಂಘಟನೆಯು ಪ್ರಾಂಶುಪಾಲರ ಕಚೇರಿಯ ಬಳಿ ಪ್ರತಿಭಟನೆ ಮತ್ತು ಕೆಎಸ್‌ಯು ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ನಾವು ಹಾಸ್ಟೆಲ್ ನಿಯಮ ಪುಸ್ತಕವನ್ನು ಸುಡುವ ಮೂಲಕ ಹೋರಾಟವನ್ನು ಪ್ರಾರಂಭಿಸಿವು. 30 ಗಂಟೆಗಳ ನಿರಂತರ ಪ್ರತಿಭಟನೆಯ ನಂತರ ಆಡಳಿತವು ನಮ್ಮ ಕೆಲವು ಬೇಡಿಕೆಗಳನ್ನು ಒಪ್ಪಿಕೊಂಡಿತು” ಟೆಸ್ಸಾ ಸಾರಾ ಕುರಿಯಾಕೋಸ್ ತಿಳಿಸಿದ್ದಾರೆ.

“ಈಗ ಸಂಜೆ 6 ಗಂಟೆಗೆ ಕರ್ಫ್ಯೂ ಹಾಗೆ ಉಳಿದಿದ್ದರೂ ವಿದ್ಯಾರ್ಥಿಗಳು ಲೇಟಾಗಿ ಬರುವ ಚೀಟಿಗೆ ಸಹಿ ಮಾಡಿ ರಾತ್ರಿ 9 ರವರೆಗೆ ಹೊರಗಿರಬಹುದು ಎಂದು ಹೊಸ ನಿಯಮಗಳು ಹೇಳುತ್ತವೆ. ಚಲನಚಿತ್ರಗಳನ್ನು ವೀಕ್ಷಿಸಲು ಹೋಗುವುದು, ಶಾಪಿಂಗ್ ಸೇರಿದಂತೆ ಯಾವುದೇ ಕಾರಣಗಳನ್ನು ಬೇಕಾದರೂ ನೀಡಬಹುದು. ಎರಡನೇ ಮತ್ತು ನಾಲ್ಕನೇ ಭಾನುವಾರದಂದು ಸಂಜೆ 5 ಗಂಟೆಯವರೆಗೆ ಹೊರ ಹೋಗಬಹುದು. ಜೊತೆಗೆ ಸಾರ್ವಜನಿಕ ರಜಾದಿನಗಳಲ್ಲಿ ಹೊರಗೆ ಹೋಗಬಹುದು” ಎಂದು ವಿದ್ಯಾರ್ಥಿನಿ ಎಮಿಲಾ ಹೇಳುತ್ತಾರೆ.

ಮೊದಲ ಮತ್ತು ಮೂರನೇ ಭಾನುವಾರವೂ ಹೊರ ಹೋಗಲು ಅನುಮತಿ ನೀಡುವಂತೆ ಕೇಳಲಾಗಿದೆ. ಈ ಬಗ್ಗೆ ಆಡಳಿತ ಮಂಡಳಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಲಾಗಿದೆ. ಒಂದು ತಿಂಗಳೊಳಗೆ ಅವರು ತಮ್ಮ ನಿರ್ಧಾರವನ್ನು ನಮಗೆ ತಿಳಿಸುತ್ತಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...