Homeಮುಖಪುಟಕೇರಳ: ಇಸ್ಲಾಮೋಫೋಬಿಕ್ ಪೋಸ್ಟ್ ಹಂಚಿಕೊಂಡ ಆಲ್ ಇಂಡಿಯಾ ರೇಡಿಯೋ ಉದ್ಯೋಗಿ

ಕೇರಳ: ಇಸ್ಲಾಮೋಫೋಬಿಕ್ ಪೋಸ್ಟ್ ಹಂಚಿಕೊಂಡ ಆಲ್ ಇಂಡಿಯಾ ರೇಡಿಯೋ ಉದ್ಯೋಗಿ

- Advertisement -
- Advertisement -

ಕೇರಳದ ಆಲ್ ಇಂಡಿಯಾ ರೇಡಿಯೋ (ಎಐಆರ್‌) ಕಾರ್ಯಕ್ರಮ ನಿರ್ಮಾಪಕಿಯೊಬ್ಬರು ಫೇಸ್‌ಬುಕ್‌ನಲ್ಲಿ, “ಹಿಂದೂಗಳು ಕೇವಲ ಧಾರ್ಮಿಕ ರ್ಯಾಲಿಗಳನ್ನು ಆಯೋಜಿಸುವ ಬದಲು ಶಸ್ತ್ರಾಸ್ತ್ರಗಳನ್ನು ಹಿಡಿಯಿರಿ” ಎಂದು ಒತ್ತಾಯಿಸುವ ಇಸ್ಲಾಮೋಫೋಬಿಕ್ ಪೋಸ್ಟ್ ಅನ್ನು ಹಂಚಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಬರಹಗಾರ್ತಿಯೂ ಆಗಿರುವ ಎಐಆರ್‌ ಉದ್ಯೋಗಿ ಕೆ.ಆರ್. ಇಂದಿರಾ, ಪಶ್ಚಿಮ ಬಂಗಾಳದ ಮುರ್ಸಿದಾಬಾದ್‌ನಲ್ಲಿ ವಕ್ಫ್ ಕಾಯ್ದೆ ವಿರೋಧಿ ಪ್ರತಿಭಟನೆಗಳ ನಂತರ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಈ ಗಲಭೆಯಲ್ಲಿ 21 ವರ್ಷದ ಮುಸ್ಲಿಂ ವ್ಯಕ್ತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

“ಹಿಂದೂಗಳು ಶಸ್ತ್ರಗಳನ್ನು ತೆಗೆದುಕೊಂಡು ಉಗ್ರವಾಗಿ ದಾಳಿ ಮಾಡಲು ಕಲಿಯಬೇಕು. ನಾಮಜಪ (ಧಾರ್ಮಿಕ) ಮೆರವಣಿಗೆಯನ್ನು ಹೇಗೆ ಮುನ್ನಡೆಸಬೇಕೆಂದು ಕಲಿಯುವುದು ಸಾಕಾಗುವುದಿಲ್ಲ” ಎಂದು ಇಂದಿರಾ ಅವರ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆಯಲಾಗಿದೆ.

ವಿವಾದದ ಬಳಿಕ ಪೋಸ್ಟ್ ಅನ್ನು ಅಳಿಸಲಾಗಿದೆ. ಆದರೆ, ಶಾಹುಲ್ ಅಂಬಲತ್ ಎಂಬ ಫೇಸ್‌ಬುಕ್ ಬಳಕೆದಾರರು ಇಂದೀರಾ ಅವರ ಹಿಂದುತ್ವ ಸಿದ್ಧಾಂತ ಬಿಂಬಿಸುವ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ.

ಆದರೂ, ಕೇರಳ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ‘ಮಕ್ತೂಬ್ ಮೀಡಿಯಾ’ ವರದಿ ಮಾಡಿದೆ. ಈ ನಿಷ್ಕ್ರಿಯತೆಯು ರಾಜ್ಯದ ನಾಗರಿಕ ಸಮಾಜ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ವ್ಯಾಪಕ ಖಂಡನೆಗೆ ಕಾರಣವಾಗಿದೆ.

ಆಲ್ ಇಂಡಿಯಾ ರೇಡಿಯೋ ಕಾರ್ಯಕ್ರಮ ನಿರ್ಮಾಪಕಿ ದ್ವೇಷ ತುಂಬಿದ ಕೋಮು ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. 2020 ರಲ್ಲಿ, ಪೌರತ್ವ (ತಿದ್ದುಪಡಿ) ಕಾಯ್ದೆಯ ಬಗ್ಗೆ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದಾಗ, ಇಂದಿರಾ ಅಸ್ಸಾಂನಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರು. ಅವರಲ್ಲಿ ಅನೇಕರನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆಯ ಸಮಯದಲ್ಲಿ ಬಂಧನ ಶಿಬಿರಗಳಲ್ಲಿ ಇರಿಸಲಾಗಿತ್ತು.

ಇಂದಿರಾ ಅವರು ಮುಸ್ಲಿಮರಿಗೆ ಸಂತಾನಹರಣ ಮಾಡುವುದನ್ನು ಪ್ರತಿಪಾದಿಸಿದರು. “ಜಗತ್ತನ್ನು ಉಳಿಸಲು  ಗರ್ಭನಿರೋಧಕಗಳನ್ನು ಮುಸ್ಲಿಮರು ಕುಡಿಯುವ ನೀರಿನೊಂದಿಗೆ ಬೆರೆಸಬೇಕು” ಎಂದು ಹೇಳಿದರು.

ಕೇರಳ ಪೊಲೀಸರು ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120 (o) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಾಗರಿಕ ಸಮಾಜ ಗುಂಪುಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಕೆ.ಆರ್. ಇಂದಿರಾ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಲೇಖಕಿ-ಕಾರ್ಯಕರ್ತೆ ರೇಖಾ ರಾಜ್ ಕೇರಳದಲ್ಲಿ ಕುದಿಯುತ್ತಿರುವ ಅಪಾಯಕಾರಿ ಹಿಂದುತ್ವ ಮಾದರಿಯನ್ನು ಬಹಿರಂಗಪಡಿಸಿದ್ದಾರೆ. “ಇದು ಕೇವಲ ಒಬ್ಬ ವ್ಯಕ್ತಿಯ ಬಗ್ಗೆ ಅಲ್ಲ, ಬದಲಾಗಿ ಮುಸ್ಲಿಮರನ್ನು ಭಯ ಮತ್ತು ಅಭದ್ರತೆಯ ಸ್ಥಿತಿಗೆ ತಳ್ಳುತ್ತಿರುವ ಅಪಾಯಕಾರಿ ಸಿದ್ಧಾಂತದ ಬಗ್ಗೆ” ಎಂದು ಅವರು ಹೇಳಿದರು.

ದಲಿತ ದೌರ್ಜನ್ಯ ಪ್ರಕರಣ: ಸಹಪಾಠಿಗಳಿಂದ ದೌರ್ಜನ್ಯಕ್ಕೆ ಒಳಗಾಗಿದ್ದ ವರ್ಷದ ಬಳಿಕ ವಿದ್ಯಾರ್ಥಿ ಮೇಲೆ ಪುನಃ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...