Homeಮುಖಪುಟಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

- Advertisement -
- Advertisement -

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ (ಮಾ.21) ಸುರೇಂದ್ರನ್ ನಾಮಪತ್ರ ಸಲ್ಲಿಸುವಾಗ ಬಯಲಾಗಿದೆ ಎಂದು ವರದಿಗಳು ಹೇಳಿವೆ.

ಸುರೇಂದ್ರನ್ ವಿರುದ್ಧದ 242 ಪ್ರಕರಣಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳು ಮತ್ತು ಆಂದೋಲನಗಳ ನೇತೃತ್ವ ವಹಿಸಿದ್ದಕ್ಕಾಗಿ ಅಥವಾ ಭಾಗವಾಗಿದ್ದಕ್ಕಾಗಿ ದಾಖಲಾಗಿವೆ ಎಂಬುವುದು ಅವರ ನಾಮಪತ್ರದ ಜೊತೆಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ ಎಂದು theprint.in ವರದಿ ಮಾಡಿದೆ.

ತಮ್ಮ ಅಫಿಡವಿಟ್‌ನಲ್ಲಿ, ಸುರೇಂದ್ರನ್ ಅವರು 28 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ಮತ್ತು ಒಂಬತ್ತು ಲಕ್ಷ ರೂಪಾಯಿಗೂ ಹೆಚ್ಚು ಸಾಲಗಳನ್ನು ಘೋಷಿಸಿಕೊಂಡಿದ್ದಾರೆ.

2014ರಲ್ಲಿ ತಿರುವನಂತಪುರದಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದಕ್ಕಾಗಿ ಸುರೇಂದ್ರನ್ ಅವರ ಪಕ್ಷದ ಸಹೋದ್ಯೋಗಿ ಮತ್ತು ಕೇಂದ್ರದ ರಾಜ್ಯ ಖಾತೆ ಸಚಿವ ಜಾರ್ಜ್ ಕುರಿಯನ್ ವಿರುದ್ಧ ಕೇವಲ ಒಂದು ಕ್ರಿಮಿನಲ್ ಪ್ರಕರಣ ಬಾಕಿ ಇದೆ ಎಂದು ವರದಿ ತಿಳಿಸಿದೆ.

ಕುರಿಯನ್ ತಮ್ಮ ಅಫಿಡವಿಟ್‌ನಲ್ಲಿ 1.74 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ ಹಾಗೂ ಎರಡು ಲಕ್ಷ ರೂ.ಗಳ ಸಾಲವನ್ನು ಘೋಷಿಸಿಕೊಂಡಿದ್ದಾರೆ.

ಕಝಕೂಟಂ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್, ವಿವಿಧ ಪ್ರತಿಭಟನೆಗಳು ಮತ್ತು ಆಂದೋಲನಗಳಲ್ಲಿ ಭಾಗವಹಿಸಿದ್ದಕ್ಕಾಗಿ ಎಂಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಅವರು 20 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಚರಾಸ್ತಿ ಹೊಂದಿದ್ದಾರೆಂದು ಘೋಷಿಸಿಕೊಂಡಿದ್ದಾರೆ ಮತ್ತು ಅವರ ಅಫಿಡವಿಟ್ ಪ್ರಕಾರ ಅವರ ಬಳಿ ಯಾವುದೇ ಸ್ಥಿರ ಆಸ್ತಿ ಇಲ್ಲ ಎಂದು ಹೇಳಿಕೊಂಡಿದ್ದಾರೆ.

ಪಾಲಕ್ಕಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ಅವರ ವಿರುದ್ಧ 35 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಅವುಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳು ಮತ್ತು ಆಂದೋಲನಗಳ ನೇತೃತ್ವ ವಹಿಸಿದ್ದಕ್ಕಾಗಿ ಮತ್ತು ಭಾಗವಾಗಿದ್ದಕ್ಕಾಗಿ ದಾಖಲಾಗಿರುವುದಾಗಿದೆ.

ಶೋಭಾ ಅವರು ತಮ್ಮ ಅಫಿಡವಿಟ್‌ನಲ್ಲಿ 1.94 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

ವಟ್ಟಿಯೂರ್ಕಾವು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಕೌನ್ಸಿಲರ್ ಮತ್ತು ಮಾಜಿ ಡಿಜಿಪಿ ಆರ್. ಶ್ರೀಲೇಖಾ ಅವರು ತಮ್ಮ ಅಫಿಡವಿಟ್‌ನಲ್ಲಿ ಐದು ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

ಶ್ರೀಲೇಖಾ ಅವರ ಅಫಿಡವಿಟ್ ಪ್ರಕಾರ, ಪೋಕ್ಸೊ ಪ್ರಕರಣದ ಬಲಿಪಶುವಿನ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಈ ವರ್ಷ ಅವರ ವಿರುದ್ಧ ಒಂದು ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಅವರು ಈ ಆರೋಪವನ್ನು ನಿರಾಕರಿಸಿದ್ದಾರೆ ಮತ್ತು ಎಫ್‌ಐಆರ್ ರದ್ದುಗೊಳಿಸುವಂತೆ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...