Homeಮುಖಪುಟಆಳ ಸಮುದ್ರ ಗಣಿಗಾರಿಕೆ ಪ್ರಸ್ತಾವನೆ ವಿರೋಧಿಸಿ ಕೇರಳ ವಿಧಾನಸಭೆಯಿಂದ ನಿರ್ಣಯ ಅಂಗೀಕಾರ

ಆಳ ಸಮುದ್ರ ಗಣಿಗಾರಿಕೆ ಪ್ರಸ್ತಾವನೆ ವಿರೋಧಿಸಿ ಕೇರಳ ವಿಧಾನಸಭೆಯಿಂದ ನಿರ್ಣಯ ಅಂಗೀಕಾರ

- Advertisement -
- Advertisement -

ರಾಜ್ಯದ ಕರಾವಳಿಯಲ್ಲಿ ಆಳ ಸಮುದ್ರ ಖನಿಜ ಗಣಿಗಾರಿಕೆಗೆ ಅವಕಾಶ ನೀಡುವ ಕೇಂದ್ರ ಸರ್ಕಾರ ಕ್ರಮವನ್ನು ಹಿಂಪಡೆಯಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಅಂಗೀಕರಿಸಿದೆ.

‘ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆಡಳಿತ ಪಕ್ಷದ ‘ಏಜೆಂಟ್’ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಆರೋಪಿಸಿ ಸ್ಪೀಕರ್ ವೇದಿಕೆಯ ಮುಂದೆ ವಿರೋಧ ಪಕ್ಷದ ಯುಡಿಎಫ್ ಶಾಸಕರು ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ನಿರ್ಣಯ ಅಂಗೀಕರಿಸಲಾಯಿತು.

ಆಶಾ ಕಾರ್ಯಕರ್ತರ ಪ್ರತಿಭಟನೆಯನ್ನು ಚರ್ಚಿಸಲು ಸದನದ ಕಲಾಪವನ್ನು ಮುಂದೂಡಬೇಕೆಂಬ ಬೇಡಿಕೆಯನ್ನು ಅಂಗೀಕರಿಸದ ಕಾರಣ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಅವರು ತಮ್ಮ ಭಾಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡದಿದ್ದಕ್ಕಾಗಿ ಯುಡಿಎಫ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದರು.

ಈ ಪ್ರತಿಭಟನೆಯಿಂದಾಗಿ, ಆಳ ಸಮುದ್ರ ಗಣಿಗಾರಿಕೆ ನಿರ್ಣಯವನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.

ರಾಜ್ಯದ ಕರಾವಳಿಯಲ್ಲಿ ಆಳ ಸಮುದ್ರ ಗಣಿಗಾರಿಕೆಯನ್ನು ಪ್ರಾರಂಭಿಸುವ ಕೇಂದ್ರದ ಕ್ರಮವನ್ನು ಯಾವುದೇ ಕಾರಣಕ್ಕೂ ಅನುಮತಿಸಲಾಗುವುದಿಲ್ಲ; ಈ ನಿಟ್ಟಿನಲ್ಲಿ ರಾಜ್ಯದ ಮೀನುಗಾರ ಸಮುದಾಯದ ಕಳವಳವನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ಕೇರಳ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.

ಕಡಲಾಚೆಯ ಪ್ರದೇಶಗಳ ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ – 2002 ರ ಮಾನದಂಡಗಳು ಮತ್ತು ಕಳೆದ ವರ್ಷ ಅದಕ್ಕೆ ಮಾಡಲಾದ ತಿದ್ದುಪಡಿಗಳು ರಾಜ್ಯಗಳ ಹಿತಾಸಕ್ತಿಗೆ ಅನುಗುಣವಾಗಿಲ್ಲ ಎಂದು ಆಡಳಿತ ಪಕ್ಷ ಈ ಹಿಂದೆ ಸದನದಲ್ಲಿ ಹೇಳಿತ್ತು.

ಪ್ರಸ್ತಾವಿತ ಆಳ ಸಮುದ್ರ ಗಣಿಗಾರಿಕೆಯ ವಿರುದ್ಧದ ಆಂದೋಲನದಲ್ಲಿ ಸೇರಲು ಆಡಳಿತ ಪಕ್ಷವು ವಿರೋಧ ಪಕ್ಷವಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅನ್ನು ಒತ್ತಾಯಿಸಿತ್ತು. ಎಡ ಸರ್ಕಾರವು ಗಣಿಗಾರಿಕೆ ಉಪಕ್ರಮವನ್ನು ‘ಬೆಂಬಲಿಸುತ್ತಿದೆ’ ಎಂದು ಆರೋಪಿಸಿ ಯುಡಿಎಫ್ ಜಂಟಿ ಪ್ರತಿಭಟನೆಗೆ ಆಹ್ವಾನವನ್ನು ತಿರಸ್ಕರಿಸಿದೆ. ಕೇಂದ್ರದ ಕ್ರಮವನ್ನು ಪ್ರತ್ಯೇಕವಾಗಿ ಪ್ರತಿಭಟಿಸುವುದಾಗಿ ಯುಡಿಎಫ್‌ ಹೇಳಿದೆ.

ದೀರ್ಘಾವಧಿಯಲ್ಲಿ, ಆಳ ಸಮುದ್ರ ಗಣಿಗಾರಿಕೆಯು ಸಾಂಪ್ರದಾಯಿಕ ಸಮುದ್ರ ಮತ್ತು ಹಿನ್ನೀರಿನ ಮೀನುಗಳನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ, ಕರಾವಳಿ ಸವೆತ ಮತ್ತು ಉದ್ಯೋಗ ನಷ್ಟವನ್ನು ವೇಗಗೊಳಿಸಿ, ಮೀನುಗಾರರ ಹಡಗುಗಳಿಗೆ ಅಡ್ಡಿಯಾಗುತ್ತದೆ ಎಂದು ಸರ್ಕಾರ ಕಳೆದ ತಿಂಗಳು ವಿಧಾನಸಭೆಯಲ್ಲಿ ಹೇಳಿತ್ತು.

ಕೇರಳ ಕೈಗಾರಿಕಾ ಸಚಿವ ಪಿ ರಾಜೀವ್ ಇತ್ತೀಚೆಗೆ ಕೇರಳವು ಆಳ ಸಮುದ್ರ ಗಣಿಗಾರಿಕೆ ಪ್ರಸ್ತಾವನೆಯ ವಿರುದ್ಧ ಮೂರು ಸಂದರ್ಭಗಳಲ್ಲಿ ತನ್ನ ಪ್ರತಿಭಟನೆಯನ್ನು ಅಧಿಕೃತವಾಗಿ ದಾಖಲಿಸಿದೆ ಎಂದು ಹೇಳಿದರು.

ಕಳೆದ ತಿಂಗಳು, ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ, ಕೇರಳ ಮೀನುಗಾರಿಕಾ ಸಮನ್ವಯ ಸಮಿತಿಯ ಅಡಿಯಲ್ಲಿ ಮೀನುಗಾರಿಕಾ ಸಂಘಗಳು ರಾಜ್ಯದಲ್ಲಿ 24 ಗಂಟೆಗಳ ಹರತಾಳವನ್ನು ಆಯೋಜಿಸಿದ್ದವು. ಪ್ರತಿಭಟನೆಯ ಭಾಗವಾಗಿ ಮೀನುಗಾರರು ಮೀನುಗಾರಿಕೆ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಇದರಿಂದಾಗಿ ಕಾಸರಗೋಡಿನಿಂದ ತಿರುವನಂತಪುರಂವರೆಗಿನ ಕರಾವಳಿ ಪ್ರದೇಶದಾದ್ಯಂತ ಮೀನುಗಾರಿಕೆ ಬಂದರುಗಳು, ಮೀನು ಲ್ಯಾಂಡಿಂಗ್ ಕೇಂದ್ರಗಳು ಮತ್ತು ಮೀನು ಮಾರುಕಟ್ಟೆಗಳಲ್ಲಿ ವ್ಯಾಪಾರಕ್ಕೆ ಅಡ್ಡಿ ಉಂಟಾಯಿತು.

ಸಮಿತಿಯ ನಾಯಕರ ಪ್ರಕಾರ, ಕೊಲ್ಲಂ ದಕ್ಷಿಣ, ಕೊಲ್ಲಂ ಉತ್ತರ, ಆಲಪ್ಪುಳ, ಪೊನ್ನಾನಿ ಮತ್ತು ಚಾವಕ್ಕಾಡ್ ಎಂಬ ಐದು ವಲಯಗಳಲ್ಲಿ ಕಡಲಾಚೆಯ ಗಣಿಗಾರಿಕೆಗಾಗಿ ಮರಳು ಬ್ಲಾಕ್‌ಗಳನ್ನು ಹರಾಜು ಹಾಕಲು ಕೇಂದ್ರ ನಿರ್ಧರಿಸಿದೆ. ಪ್ರತಿಭಟನೆಯ ಭಾಗವಾಗಿ, ಸಮಿತಿಯು ಮಾರ್ಚ್ 12 ರಂದು ಸಂಸತ್ ಮೆರವಣಿಗೆ ನಡೆಸಲು ಯೋಜಿಸಿದೆ.

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...