Homeಮುಖಪುಟಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

ಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

- Advertisement -
- Advertisement -

ಕಳೆದ 36 ದಿನಗಳಿಂದ ದೇಶದ ರಾಜಧಾನಿಯ ಗಡಿಗಳಲ್ಲಿ ಲಕ್ಷಾಂತರ ರೈತರು ಕೃಷಿ ಕಾಯ್ದೆಗಳ ರದ್ಧತಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಇಂದು ಕೇರಳ ವಿಧಾನಸಭೆಯಲ್ಲಿ ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯ ಮಂಡಿಸಿದ್ದು, ಅದು ಅವಿರೋಧವಾಗಿ ಅಂಗೀಕಾರಗೊಂಡಿದೆ. ವಿಶೇಷವೆಂದರೆ ಕೇರಳದ ಏಕೈಕ ಬಿಜೆಪಿ ಶಾಸಕ ಓ ರಾಜಗೋಪಾಲ್ ಸಹ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಬೆಂಬಲಿಸಿದ್ದಾರೆ.

ಕೇರಳ ವಿಧಾನಸಭಾ ಸ್ಫಿಕರ್ ಪಿ ಶ್ರೀರಾಮಕೃಷ್ಣನ್ ಅವರು ಧ್ವನಿ ಮತದಾನದ ಮೂಲಕ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಈ ವೇಳೆ ನೆಮೋಮ್ ಕ್ಷೇತ್ರದ ಬಿಜೆಪಿ ಶಾಸಕ ಓ ರಾಜಗೋಪಾಲ್ ರವರು ಕೃಷಿ ಕಾನೂನುಗಳ ಕೆಲವು ಅಂಶಗಳನ್ನು ಸಮರ್ಥಿಸಿಕೊಂಡರು, ಆದರೆ ಅವರು ನಿರ್ಣಯದ ಮತದಾನ ನಡೆಯುತ್ತಿರುವಾಗ ಮತಗಳ ವಿಭಜನೆಯನ್ನು ಕೇಳಲಿಲ್ಲ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನಾನು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯದ ಪರವಾಗಿ ಮತ ಹಾಕಿದ್ದೇನೆ. ನಾನು ಪ್ರಜಾಪ್ರಭುತ್ವದ ಭಾಗವಾಗಿ ವಿಧಾನಸಭೆಯ ಒಮ್ಮತವನ್ನು ಒಪ್ಪುತ್ತೇನೆ. ನಿರ್ಣಯದ ಕೆಲವು ಭಾಗಗಳೊಂದಿಗೆ ನನಗೆ ಭಿನ್ನಾಭಿಪ್ರಾಯಗಳಿವೆ, ಅದನ್ನು ನಾನು ವಿಧಾನಸಭೆಯಲ್ಲಿ ಸೂಚಿಸಿದ್ದೇನೆ. ಆದರೆ ನಾನು ಅಂತಿಮ ತೀರ್ಮಾನಕ್ಕೆ ಮರಳುತ್ತೇನೆ. ನಾನು ಬಿಜೆಪಿ ವ್ಯಕ್ತಿಯಾದ ಮಾತ್ರಕ್ಕೆ ರಾಜ್ಯದ ನಿಲುವನ್ನು ವಿರೋಧಿಸುವುದು ನ್ಯಾಯವಲ್ಲ” ಎಂದು ಅವರು ಹೇಳಿದ್ದಾರೆ.

ನೀವು ಮತ ಹಾಕಿದ ನಿರ್ಣಯವು ಕೃಷಿ ಕಾನೂನುಗಳನ್ನು ರದ್ದುಪಡಿಸಲು ಒತ್ತಾಯಿಸುತ್ತದೆ ಎಂಬುದು ನಿಮಗೆ ಚೆನ್ನಾಗಿ ತಿಳಿದಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ‘ಖಂಡಿತವಾಗಿಯೂ ತಿಳಿದಿದೆ’ ಎಂದು ಉತ್ತರಿಸಿದ್ದಾರೆ.

ರೈತರ ಸಮಸ್ಯೆಗಳನ್ನು ಚರ್ಚಿಸಲು ಮತ್ತು ಹೋರಾಟನಿರತ ರೈತರನ್ನು ಬೆಂಬಲಿಸಲು, ಹೋರಾಟಕ್ಕೆ ಸಹಮತ ವ್ಯಕ್ತಪಡಿಸಲು ಕರೆದ ಒಂದು ತಾಸಿನ ವಿಶೇಷ ಅಧಿವೇಶನದಲ್ಲಿ ಸಿಎಂ ಪಿಣರಾಯಿ ವಿಜಯನ್ ನಿರ್ಣಯ ಮಂಡಿಸಿದರು. ದೇಶವು ಈ ಅಪ್ರತಿಮ ರೈತ ಪ್ರತಿಭಟನೆಗೆ ಸಾಕ್ಷಿಯಾಗಿದೆ. ಸಂಸತ್ತಿನಲ್ಲಿ ಅಂಗೀಕಾರವಾದ ಕಾಯ್ದೆಗಳು ಕೇವಲ ರೈತ ವಿರೋಧಿಯಷ್ಟೇ ಅಲ್ಲ, ಅವು ಕಾರ್ಪೋರೇಟ್ ಪರವಾಗಿವೆ. ಈಗಾಗಲೇ ಪ್ರತಿಭಟನಾ ನಿರತ 32 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದರು.

 

ತಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ನಿರ್ದಿಷ್ಟ ಕಾನೂನುಗಳ ಬಗ್ಗೆ ಜನರಿಗೆ ಆತಂಕಗಳಿದ್ದಾಗ, ಶಾಸನಸಭೆಗಳು ಈ ಕುರಿತು ಗಂಭಿರ ದೃಷ್ಟಿಕೋನ ಹೊಂದಬೇಕಾದ ನೈತಿಕ ಜವಾಬ್ದಾರಿಯನ್ನು ಪ್ರದರ್ಶಿಸಬೇಕು ಎಂದ ಅವರು, “ಕೃಷಿ ಈ ದೇಶದ ಸಂಸ್ಕೃತಿಯ ಭಾಗವಾಗಿತ್ತು. ರೈತರು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರವು ಈ ಕಾಯ್ದೆಗಳನ್ನು ಜಾರಿ ಮಾಡಿದೆ. ಇದರ ಪರಿಣಾಮ ಈಗ ಸಿಗುತ್ತಿರುವ ಬೆಂಬಲ ಬೆಲೆಯನ್ನೂ ಕಳೆದುಕೊಳ್ಳುವ ಆತಂಕದಲ್ಲಿ ರೈತರಿದ್ದಾರೆ” ಎಂದು ವಿಜಯನ್ ಹೇಳಿದರು.


ಇದನ್ನೂ ಓದಿ: ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...