Homeಮುಖಪುಟಕೇರಳ | ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದ ಬಿಜೆಪಿ-ಆರ್‌ಎಸ್‌ಎಸ್‌

ಕೇರಳ | ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದ ಬಿಜೆಪಿ-ಆರ್‌ಎಸ್‌ಎಸ್‌

- Advertisement -
- Advertisement -

ತಿರುವನಂತಪುರದ ಹೊರವಲಯ ನೆಯ್ಯಟ್ಟಿಂಕರ ಬಳಿ ಬುಧವಾರ (ಮಾ.12) ಸಂಜೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರ ಗುಂಪೊಂದು ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿರುವುದಲ್ಲದೆ, ಆಡಳಿತ ಮತ್ತು ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಯಿತು ಎಂದು ದಿ ಹಿಂದೂ ವರದಿ ಮಾಡಿದೆ.

ಶಿವಗಿರಿ ಮಠದ ಆಹ್ವಾನದ ಮೇರೆಗೆ ಕೇರಳಕ್ಕೆ ಭೇಟಿ ನೀಡಿದ್ದ ತುಷಾರ್ ಗಾಂಧಿ, ಮಠಕ್ಕೆ ಮಹಾತ್ಮ ಗಾಂಧಿ ಭೇಟಿ ನೀಡಿ 100 ವರ್ಷ ತುಂಬಿದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ಆರೆಸ್ಸೆಸ್ ಮತ್ತು ಸಂಘಪರಿವಾರ ದೇಶದ ಆತ್ಮಕ್ಕೆ ಕ್ಯಾನ್ಸರ್ ಇದ್ದಂತೆ, ನಾವು ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ. ಇದು ಸಂಘಪರಿವಾರದವರನ್ನು ಕೆರಳಿಸಿದೆ ಎಂದು ವರದಿ ಹೇಳಿದೆ.

ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ, ನೆಯ್ಯಟ್ಟಿಂಕರದಲ್ಲಿ ದಿವಂಗತ ಗಾಂಧಿವಾದಿ ಪಿ. ಗೋಪಿನಾಥನ್ ನಾಯರ್ ಅವರ ಪೂರ್ವಜರ ಮನೆಯಲ್ಲಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಲು ತುಷಾರ್ ಗಾಂಧಿ ತೆರಳಿದ್ದರು. ಈ ಕಾರ್ಯಕ್ರಮ ಮುಗಿಸಿ ಅವರು ವಾಹನ ಹತ್ತಲು ಮುಂದಾಗುತ್ತಿದ್ದಂತೆ ಆರ್‌ಎಸ್‌ಎಸ್ ಕಾರ್ಯಕರ್ತರು ಅವರಿಗೆ ಮುತ್ತಿಗೆ ಹಾಕಿದ್ದಾರೆ. ಶಿವಗಿರಿ ಮಠದಲ್ಲಿ ಆರ್‌ಎಸ್‌ಎಸ್ ವಿರುದ್ದ ಮಾಡಿದ ಭಾಷಣ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಪೊಲೀಸರು ಇರಲಿಲ್ಲ

ಆರ್‌ಎಸ್‌ಎಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿದಾಗ ತುಷಾರ್ ಗಾಂಧಿಯವರು ವಾಹನದಿಂದ ಕೆಳಗಿಳಿದು ಅವರನ್ನು ಎದುರಿಸಿದರು. ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಪ್ರತಿಯಾಗಿ “ಆರ್‌ಎಸ್‌ಎಸ್ ಮುರ್ದಾಬಾದ್, ಗಾಂಧೀಜಿ ಝಿಂದಾಬಾದ್” ಎಂದು ಕೂಗಿದರು. ಸ್ಥಳದಲ್ಲಿ ಯಾವುದೇ ಗಮನಾರ್ಹ ಪೊಲೀಸ್ ಉಪಸ್ಥಿತಿ ಇರಲಿಲ್ಲ. ಗಾಂಧಿಯವರು ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿ ಅಲ್ಲಿಂದ ಹೊರಟರು. ನೆಯ್ಯತ್ತಿಂಕರ ಪೊಲೀಸರನ್ನು ಸಂಪರ್ಕಿಸಿದಾಗ, ಘಟನೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ ಎಂಬುದಾಗಿ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ತಿಳಿಸಿದೆ.

ಶಿವಗಿರಿ ಮಠದವರನ್ನು ಸಂಪರ್ಕಿಸಿದಾಗ, ಗುರುವಾರ ಈ ಬೆಳವಣಿಗೆಗೆ ಪ್ರತಿಕ್ರಿಯಿಸುವುದಾಗಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರು ಆರ್‌ಎಸ್‌ಎಸ್‌ನ ಕೃತ್ಯವನ್ನು ಖಂಡಿಸಿದ್ದಾರೆ. ಮಹಾತ್ಮಾ ಗಾಂಧಿಯವರು ನಾರಾಯಣ ಗುರುಗಳೊಂದಿಗೆ ಮಠದಲ್ಲಿ ನಡೆಸಿದ ಐತಿಹಾಸಿಕ ಭೇಟಿಯ 100 ನೇ ವಾರ್ಷಿಕೋತ್ಸವವನ್ನು ಆಚರಿಸಲು ತುಷಾರ್ ಗಾಂಧಿ ಕೇರಳಕ್ಕೆ ಆಗಮಿಸಿದ್ದರು. ಆರ್‌ಎಸ್‌ಎಸ್ ಕೇರಳ ನಾಚಿಕೆಪಡುವಂತೆ ಮಾಡಿದೆ. ಪ್ರತಿಭಟನೆಯ ಮೂಲಕ ತಮ್ಮ ನಿಜವಾದ ಬಣ್ಣವನ್ನು ಬಹಿರಂಗಪಡಿಸಿದೆ” ಎಂದು ಹೇಳಿದ್ದಾರೆ.

ಸಿಪಿಐ ಹೇಳಿದ್ದೇನು?

ಮಹಾತ್ಮಾ ಗಾಂಧಿ ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ಆರ್‌ಎಸ್‌ಎಸ್‌ನ ತಿರಸ್ಕಾರ ಮತ್ತು ಊಳಿಗಮಾನ್ಯ ವಸಾಹತುಶಾಹಿ ವ್ಯವಸ್ಥೆಗೆ ಸಂಘಟನೆಯ ಬೆಂಬಲವು ತುಷಾರ್ ಗಾಂಧಿ ವಿರುದ್ಧದ ಅವರ ನಡೆಯಿಂದ ಸ್ಪಷ್ಟವಾಗಿ ಗೊತ್ತಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ ಹೇಳಿದ್ದಾರೆ.

“ಆರ್‌ಎಸ್‌ಎಸ್ ಸ್ವಾತಂತ್ರ್ಯ ಚಳವಳಿಯ ದ್ರೋಹಿ. ದೇಶದ ಸ್ವಾತಂತ್ರ್ಯ ಚಳವಳಿ ಮತ್ತು ಪ್ರಜಾಪ್ರಭುತ್ವದ ಪ್ರಗತಿಯಲ್ಲಿ ಅದರದ್ದು ಯಾವುದೇ ಪಾತ್ರವಿಲ್ಲ. ಗಾಂಧಿಯವರ ಹಂತಕ ಗೋಡ್ಸೆ ಮತ್ತು ಸಾವರ್ಕರ್ ಸೇರಿದಂತೆ ಅವರ ನಾಯಕರನ್ನು ಆರ್‌ಎಸ್‌ಎಸ್ ಸಿಂಹಾಸನವೇರಿಸಿದೆ. ಕೇರಳವು ಈ ಫ್ಯಾಸಿಸ್ಟ್ ಶಕ್ತಿಯ ವಿರುದ್ಧ ಒಂದಾಗಿ ನಿಲ್ಲಬೇಕು” ಎಂದಿದ್ದಾರೆ.

ಸರ್ಕಾರಿ ಪ್ರಾಥಮಿಕ ಶಾಲೆಗಳು ಇಂಗ್ಲಿಷ್‌ಗೆ ಬದಲಾಗಬೇಕು: ಗೋವಾ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...