Homeಮುಖಪುಟಕೇರಳ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆಯ್ಕೆ

ಕೇರಳ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆಯ್ಕೆ

- Advertisement -
- Advertisement -

ಬಿಜೆಪಿ ಕೇರಳ ಘಟಕವು ಸೋಮವಾರ ಸರ್ವಾನುಮತದಿಂದ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. 2020 ರಿಂದ ಈ ಹುದ್ದೆಯನ್ನು ಅಲಂಕರಿಸಿದ್ದ ಕೆ. ಸುರೇಂದ್ರನ್ ಅವರ ನಂತರ ಜಲಸಂಪನ್ಮೂಲ ಖಾತೆಯ ಮಾಜಿ ರಾಜ್ಯ ಸಚಿವರೂ ಆಗಿರುವ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಕೇರಳ ಬಿಜೆಪಿ ರಾಜ್ಯಾಧ್ಯಕ್ಷರಾಗಿ

ಚಂದ್ರಶೇಖರ್ ಈ ಸ್ಥಾನಕ್ಕೆ ಏಕೈಕ ಅಭ್ಯರ್ಥಿಯಾಗಿದ್ದರು ಎಂದು ಪಿಟಿಐ ವರದಿ ಮಾಡಿದೆ. ಅವರು ಭಾನುವಾರ ತಿರುವನಂತಪುರಂನಲ್ಲಿರುವ ಬಿಜೆಪಿಯ ರಾಜ್ಯ ಪ್ರಧಾನ ಕಚೇರಿಯಲ್ಲಿ ಈ ಹುದ್ದೆಗೆ ಎರಡು ಸೆಟ್ ನಾಮಪತ್ರಗಳನ್ನು ಸಲ್ಲಿಸಿದ್ದರು. ಕೇರಳ ಬಿಜೆಪಿ ರಾಜ್ಯಾಧ್ಯಕ್ಷರಾಗಿ

ಚಂದ್ರಶೇಖರ್ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂನಿಂದ ಎನ್‌ಡಿಎ ಒಕ್ಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರನ್ನು ಕಾಂಗ್ರೆಸ್‌ನ ಶಶಿ ತರೂರ್ 16,077 ಮತಗಳಿಂದ ಸೋಲಿಸಿದರು.

ತನ್ನ ಸೋಲಿನ ನಂತರ ಅವರು ಸಾಮಾಜಿಕ ಮಾಧ್ಯಮದಲ್ಲಿ “ನನ್ನ 18 ವರ್ಷಗಳ ಸಾರ್ವಜನಿಕ ಸೇವೆಗೆ ತೆರೆ ಬಿದ್ದಿದೆ” ಎಂದು ಘೋಷಿಸಿದ್ದರು. ಶೀಘ್ರದಲ್ಲೇ ತಮ್ಮ ಹೇಳಕೆಯನ್ನು ಹಿಂಪಡೆದ ಅವರು ಸಂಸತ್ತಿನ ತನ್ನ ಅಧಿಕಾರಾವಧಿಯನ್ನು ಕೊನೆಗೊಳಿಸುವುದಾಗಿ ಹೇಳಿಕೊಂಡರು.

ಚಂದ್ರಶೇಖರ್ ಅವರು ಮೂರು ಅವಧಿಗೆ ರಾಜ್ಯಸಭೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ ಮತ್ತು ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಕೇರಳ ಘಟಕದ ಉಪಾಧ್ಯಕ್ಷರೂ ಆಗಿದ್ದಾರೆ.

ಹಿಂದಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ, ಅವರು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜಲಶಕ್ತಿ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

2023 ರಲ್ಲಿ, ಎರ್ನಾಕುಲಂ ಜಿಲ್ಲೆಯ ಕ್ರಿಶ್ಚಿಯನ್ ಗುಂಪಿನ ಜೆಹೋವಸ್ ವಿಟ್ನೆಸಸ್‌ನ ಸಮಾವೇಶ ಕೇಂದ್ರದಲ್ಲಿ ನಡೆದ ಸ್ಫೋಟಗಳ ಬಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಕೇರಳ ಪೊಲೀಸರು ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...