Homeಮುಖಪುಟಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಆರೋಪಿಗೆ 10 ದಿನ ಪೊಲೀಸ್ ಕಸ್ಟಡಿ

ಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಆರೋಪಿಗೆ 10 ದಿನ ಪೊಲೀಸ್ ಕಸ್ಟಡಿ

- Advertisement -
- Advertisement -

ಕೊಚ್ಚಿ ಕಲಮಸ್ಸೆರಿಯ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯುತ್ತಿದ್ದ ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಫೋಟದ ಆರೋಪಿ ಡೊಮಿನಿಕ್ ಮಾರ್ಟಿನ್‌ಗೆ ನ್ಯಾಯಾಲಯವು  10 ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದೆ.

ಸ್ಫೋಟದಲ್ಲಿ 4 ಜನರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದಾದ ಕೆಲವು ಗಂಟೆಗಳ ನಂತರ ತಾನು ಯೆಹೋವನ ಸಾಕ್ಷಿಗಳ  ಸಂಘದ ಮಾಜಿ ಸದಸ್ಯ ಎಂದು ಹೇಳಿಕೊಂಡ ಮಾರ್ಟಿನ್ ಸಿದ್ದಾಂತದ ವ್ಯತ್ಯಾಸಗಳ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಬಳಿಕ ಪೊಲೀಸರಿಗೆ ಶರಣಾಗಿದ್ದ.

ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಹನಿ ಎಂ ವರ್ಗೀಸ್, ಮಾರ್ಟಿನ್‌ಗೆ ಪೊಲೀಸರ ಮನವಿಯಂತೆ 10 ದಿನಗಳ ಪೊಲೀಸ್ ಕಸ್ಟಡಿ ನೀಡಿದ್ದಾರೆ. ಮಾರ್ಟಿನ್‌ಗೆ ಇರುವ ಆದಾಯದ ಮೂಲಗಳು, ಅಂತರಾಷ್ಟ್ರೀಯ ಸಂಪರ್ಕಗಳು ಮತ್ತು ಇತರ ಸಂಬಂಧಿತ ವಿಷಯಗಳ ಬಗ್ಗೆ ತನಿಖೆ ನಡೆಸಬೇಕಾಗಿದೆ. ಹೆಚ್ಚಿನ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ಆರೋಪಿಯನ್ನು ಕೆಲವು ಸ್ಥಳಗಳಿಗೆ ಕರೆದೊಯ್ಯಬೇಕಿದೆ ಎಂದು ಪೊಲೀಸರು ಕೋರ್ಟ್‌ಗೆ ಮನವಿಯನ್ನು ಸಲ್ಲಿಸಿದ್ದರು.

ಮಾರ್ಟಿನ್ ಮತ್ತೊಮ್ಮೆ ಕಾನೂನು ನೆರವು ಮತ್ತು ವಕೀಲರ ಸಹಾಯವನ್ನು ಪಡೆಯಲು ನಿರಾಕರಿಸಿದ್ದು, ಅ.31 ರಂದು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇಂದು ಬೆಳಿಗ್ಗೆ ಡೊಮಿನಿಕ್‌ಗೆ ವೈದ್ಯಕೀಯ ತಪಾಸಣೆ ಮಾಡಿಸಿದ ಕೊಚ್ಚಿ ಪೊಲೀಸರು ಬಳಿಕ ಎರ್ನಾಕುಳಂ ಪ್ರಿನ್ಸಿಪಾಲ್ ಸೆಷನ್ಸ್‌ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 61 ವರ್ಷದ ಮಹಿಳೆ ಮೊಲಿ ಜಾಯ್ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಕಲಮಶ್ಶೇರಿಯ ನಿವಾಸಿ ಎಂದು ತಿಳಿದು ಬಂದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅ. 29ರಂದು ಸಂಭವಿಸಿದ್ದ ಸ್ಫೋಟದಲ್ಲಿ ಮೊಲಿ ಜಾಯ್ ಅವರಿಗೆ ಶೇಕಡ 70ರಷ್ಟು ಸುಟ್ಟ ಗಾಯಗಳಾಗಿದ್ದವು. ಅವರಿಗೆ ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಅ.29ರಂದು ಸರಣಿ ಸ್ಪೋಟ ನಡೆದಾಗ ಸ್ಪೋಟದ ಸ್ಥಳದಲ್ಲೇ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು. ಮರುದಿನ ತೀವ್ರವಾಗಿ ಗಾಯಗೊಂಡಿದ್ದ 12 ವರ್ಷ ವಯಸ್ಸಿನ ಲಿಬಿನಾ ಎಂಬ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.

ಡೊಮಿನಿಕ್ ಮಾರ್ಟಿನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೊಚ್ಚಿ ಸ್ಪೋಟಕ್ಕೆ ಐಇಡಿ ಬಳಕೆ ಮಾಡಿರುವುದು ಪತ್ತೆಯಾಗಿತ್ತು. ಟಿಫಿನ್‌ ಬಾಕ್ಸ್‌ನಲ್ಲಿ ಸ್ಪೋಟಕ ಇಟ್ಟಿರುವುದು ತನಿಖೆಯ ವೇಳೆ ಕಂಡು ಬಂದಿತ್ತು. ಸಮಾವೇಶದ ಸ್ಥಳದಿಂದ ಸ್ಪೋಟಕ್ಕೆ ಕೆಲವೇ ನಿಮಿಷಗಳ ಮೊದಲು ಕಾರೊಂದು ವೇಗವಾಗಿ ಸ್ಥಳದಿಂದ ತೆರಳಿದ್ದು, ಈ ಕುರಿತ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಇದನ್ನು ಓದಿ: 29ನೇ ದಿನಕ್ಕೆ ಕಾಲಿಟ್ಟ ಯುದ್ಧ; ಇಸ್ರೇಲ್‌ನಿಂದ ಗಾಝಾದಲ್ಲಿ 9,770 ನಾಗರಿಕರ ಹತ್ಯೆ; ಮೃತರಲ್ಲಿ ಹೆಚ್ಚಿನವರು ಮಕ್ಕಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...