Homeಮುಖಪುಟಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

ಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

- Advertisement -
- Advertisement -

ಕೇರಳದ ಎರ್ನಾಕುಲಂನಲ್ಲಿರುವ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಸಮಾವೇಶ ಕೇಂದ್ರದಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಸೋಮವಾರ ಸಾವಿನ ಸಂಖ್ಯೆ ಮೂರಕ್ಕೆ ತಲುಪಿದೆ ಎಂದು ಪಿಟಿಐ ವರದಿ ಮಾಡಿದೆ.

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಜಮ್ರಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸಿಬಿಷನ್ ಸೆಂಟರ್‌ನಲ್ಲಿ ಪ್ರಾರ್ಥನಾ ಅಧಿವೇಶನಕ್ಕಾಗಿ ರಾಜ್ಯದಾದ್ಯಂತ ಸುಮಾರು 2,500 ಯೆಹೋವನ ಸಾಕ್ಷಿಗಳು ಸೇರಿದ್ದರು ಬೆಳಿಗ್ಗೆ 9.30 ರ ಸುಮಾರಿಗೆ ಸ್ಫೋಟಗಳು ಸಂಭವಿಸಿದವು.

ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ. ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

ಮಲಯತ್ತೂರಿನ ಲಿಬಿನಾ ಎಂದು ಗುರುತಿಸಲಾದ 12 ವರ್ಷದ ಬಾಲಕಿ ಸೋಮವಾರ ಮುಂಜಾನೆ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಆಕೆಯ ದೇಹದ 95% ರಷ್ಟು ತೀವ್ರವಾದ ಸುಟ್ಟಗಾಯಗಳಾಗಿ ದಾಖಲಾಗಿದ್ದಳು. ಈ ಹಿಂದೆ ಇಬ್ಬರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದರು ಮತ್ತು ಸುಮಾರು 40 ಜನರು ಗಾಯಗೊಂಡಿದ್ದಾರೆ.

ಈ ಸ್ಪೋಟಕ್ಕೆ ಕಾರಣವಾದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ತನ್ನ ಫೇಸ್‌ಬುಕ್ ಲೈವ್‌ನಲ್ಲಿ ವೀಡಿಯೊ ಮೂಲಕ ಈ ಕೃತ್ಯ ಎಸಗಿದ್ದು ತಾನೇ ಎಂದು ಹೇಳಿ, ಆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ವಿಡಿಯೋದಲ್ಲಿ, ಯೆಹೋವನ ಸಾಕ್ಷಿಗಳ ಸಭೆಯ “ಬೋಧನೆ” ಯಿಂದ ಕೋಪಗೊಂಡಿದ್ದಾಗಿ ಹೇಳಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಘಟನೆಗೆ “ಕೋಮುವಾದಿ” ಬಣ್ಣ ಬಳಿಯಲು ಯತ್ನಿಸಿದ ಬಿಜೆಪಿ ನಾಯಕ

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ಸ್ಫೋಟಗಳ ಕುರಿತು ಎಕ್ಸಾನಲ್ಲಿ ಪೋಸ್ಟ್‌ ಮಾಡಿ “ಕೋಮುವಾದಿ” ಹೇಳಿಕೆಗಳನ್ನು ನೀಡಿದ್ದಾರೆ.

”ದಿಲ್ಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ, ಕೇರಳದಲ್ಲಿ ಭಯೋತ್ಪಾದನೆ, ಹಮಾಸ್‌ನಿಂದ ಜಿಹಾದ್‌ಗಾಗಿ ಮುಕ್ತ ಕರೆಗಳು, ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳು ನಡೆಯುತ್ತಿವೆ” ಎಂದು ಅವರು ಹೇಳಿದರು.

ಗಾಜಾದ ಮೇಲಿನ ಇಸ್ರೇಲ್‌ನ ಯುದ್ಧವನ್ನು ತಕ್ಷಣವೇ ಅಂತ್ಯಗೊಳಿಸಲು ಕೋರಿ ಭಾನುವಾರ ನವದೆಹಲಿಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೇತೃತ್ವದ ರ್ಯಾಲಿಯನ್ನು ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ”ಅವರು ಸಚಿವರಾಗಿದ್ದಾರೆ ಮತ್ತು ಅವರು ತನಿಖಾ ಸಂಸ್ಥೆಗಳಿಗೆ ಕನಿಷ್ಠ ಮಟ್ಟದ ಗೌರವವನ್ನು ತೋರಿಸಬೇಕು” ಎಂದು ವಿಜಯನ್ ಸುದ್ದಿಗಾರರಿಗೆ ತಿಳಿಸಿದರು.

”ತನಿಖೆ ನಡೆಯುತ್ತಿದೆ… ಇಂತಹ ಗಂಭೀರ ಘಟನೆಯಲ್ಲಿ, ಇಂತಹ ಆರಂಭಿಕ ಹಂತದಲ್ಲಿ, ಅವರು ಕೆಲವು ಸೆಟ್ ಜನರನ್ನು ಗುರಿಯಾಗಿಸಿಕೊಂಡು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅವರ ಕೋಮುವಾದಿ ಅಜೆಂಡಾವನ್ನು ಆಧರಿಸಿದೆ, ಆದರೆ ಕೇರಳವು ಅಂತಹ ಕಾರ್ಯಸೂಚಿಯನ್ನು ಹೊಂದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಅಕ್ಟೋಬರ್ 27 ರಂದು, ಜಮಾತ್-ಎ-ಇಸ್ಲಾಮಿಯ ಯುವ ಘಟಕದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಮತ್ತೊಂದು ರ್ಯಾಲಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಹಮಾಸ್ ಮುಖ್ಯಸ್ಥ ಖಲೀದ್ ಮಶಾಲ್ ಮಾತನಾಡಿದರು.

ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಶಾಲ್, ”ಇಸ್ಲಾಂ ಧರ್ಮದ ಮೂರು ಪವಿತ್ರ ಸ್ಥಳಗಳಲ್ಲಿ ಒಂದಾದ ಜೆರುಸಲೆಮ್‌ನಲ್ಲಿರುವ ಅಲ್-ಅಕ್ಸಾ ಮಸೀದಿಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿರುವ ಪ್ಯಾಲೇಸ್ಟಿನಿಯನ್ ಹೋರಾಟಗಾರರನ್ನು ಪ್ರಪಂಚದಾದ್ಯಂತದ ಜನರು ಬೆಂಬಲಿಸಬೇಕು” ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ಇಸ್ರೇಲ್ ನಮ್ಮ ನಿವಾಸಿಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ” ಎಂದು ಮಾಜಿ ಹಮಾಸ್ ಮುಖ್ಯಸ್ಥರು ಹೇಳಿದರು.

”ಮನೆಗಳನ್ನು ಕೆಡವಲಾಗುತ್ತಿದೆ. ಅವರು ಗಾಜಾದ ಅರ್ಧಕ್ಕಿಂತ ಹೆಚ್ಚು ಭಾಗವನ್ನು ನಾಶಪಡಿಸಿದ್ದಾರೆ. ಚರ್ಚುಗಳು, ದೇವಾಲಯಗಳು, ವಿಶ್ವವಿದ್ಯಾನಿಲಯಗಳು ಮತ್ತು UN ಸಂಸ್ಥೆಗಳನ್ನು ಸಹ ನಾಶಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಕೊಚ್ಚಿ ಸ್ಪೋಟಕ್ಕೆ ಮುಸ್ಲಿಂ ನಂಟು ಸೃಷ್ಟಿಸಿದ ಬಿಜೆಪಿ ನಾಯಕ ಭಾಸ್ಕರ್ ರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...