Homeಮುಖಪುಟಕೇರಳ ಸ್ಫೋಟ: ಸುಟ್ಟ ಗಾಯಗಳಿಂದ 24 ವರ್ಷದ ಯುವಕ ಸಾವು

ಕೇರಳ ಸ್ಫೋಟ: ಸುಟ್ಟ ಗಾಯಗಳಿಂದ 24 ವರ್ಷದ ಯುವಕ ಸಾವು

- Advertisement -
- Advertisement -

ಅಕ್ಟೋಬರ್ 29ರಂದು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಯೆಹೋವನ ಸಾಕ್ಷಿಗಳ ಸಭೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡ ಯುವಕನೊಬ್ಬ ಗುರುವಾರದಂದು ಸಾವಿಗೀಡಾಗಿದ್ದಾನೆ. ಈ ಸ್ಪೋಟದಲ್ಲಿ ಒಟ್ಟು ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ ಎಂದು ಪಿಟಿಐ ವರದಿ ಮಾಡಿದೆ.

24 ವರ್ಷದ ಮಲಯತೂರು ನಿವಾಸಿ ಪ್ರವೀಣ್ ಪ್ರದೀಪ್ ಸಾವಿಗೀಡಾದ ಯುವಕ ಎಂದು ಗುರುತಿಸಲಾಗಿದ್ದು, ಅವರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದರು. ಗುರುವಾರ ಮೃತಪಟ್ಟಿದ್ದಾರೆ ಎಂದು ಮಾತೃಭೂಮಿ ವರದಿ ಮಾಡಿದೆ.

ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರವೀಣ್‌ನ ತಾಯಿ ನವೆಂಬರ್ 11ರಂದು ಸಾವನ್ನಪ್ಪಿದರು. ಸ್ಫೋಟದ ಒಂದು ದಿನದ ನಂತರ ಅವರ ಸಹೋದರಿ ಲಿಬಿನಾ ಅಕ್ಟೋಬರ್ 30 ರಂದು ಗಾಯಗಳಿಗೆ ಬಲಿಯಾಗಿದ್ದರು ಎಂದು ಪಿಟಿಐ ವರದಿ ಮಾಡಿದೆ.

ಅವರ ಸಹೋದರ ರಾಹುಲ್ ಕೂಡ ಸ್ಫೋಟದಲ್ಲಿ ಗಾಯಗೊಂಡಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಕ್ಟೋಬರ್ 29ರಂದು ಕಲಮಸ್ಸೆರಿ ಪುರಸಭೆ ವ್ಯಾಪ್ತಿಯ ಕ್ರಿಶ್ಚಿಯನ್ ಗುಂಪಿನ ಸಮಾವೇಶ ಕೇಂದ್ರದಲ್ಲಿ ಎರಡು ದೊಡ್ಡ ಸ್ಫೋಟಗಳು ಸಂಭವಿಸಿದ್ದವು.

ಸ್ಫೋಟದ ಕೆಲವು ಗಂಟೆಗಳ ನಂತರ, ಡೊಮಿನಿಕ್ ಮಾರ್ಟಿನ್ ಎಂಬ , ಎರ್ನಾಕುಲಂನ ನಿವಾಸಿ ತ್ರಿಶೂರ್ ಜಿಲ್ಲೆಯಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ.

ಶರಣಾಗುವ ಮೊದಲು, ಮಾರ್ಟಿನ್ ಅವರು ಯೆಹೋವನ ಸಾಕ್ಷಿಗಳ ಸಭೆಯ “ಬೋಧನೆ” ಯಿಂದ ಕೋಪಗೊಂಡಿದ್ದರು ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದರು. ಆನಂತರ ಪೋಸ್ಟ್ ಅನ್ನು ಅಳಿಸಲಾಗಿದೆ.

ಸ್ಫೋಟ ನಡೆದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದಾನೆ.

ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಆ ಬಳಿಕ ಅವರನ್ನು ಕೊಲೆ ಆರೋಪದ ಮೇಲೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕಗಳ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಯಿತು.

ಮಂಗಳವಾರ, ಕೇರಳ ನ್ಯಾಯಾಲಯವು ಮಾರ್ಟಿನ್ ಅವರನ್ನು ನವೆಂಬರ್ 29 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಎರ್ನಾಕುಲಂ ಸ್ಪೋಟ ಪ್ರಕರಣ: ಪತ್ರಕರ್ತರ ವಿರುದ್ಧದ FIR ಕುರಿತು ಕಿಡಿಕಾರಿದ ಸಂಪಾದಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...