Homeಮುಖಪುಟಕೇರಳ: ಮೊಬೈಲ್ ಗೇಮ್‌ನಿಂದ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಕೇರಳ: ಮೊಬೈಲ್ ಗೇಮ್‌ನಿಂದ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕ

- Advertisement -
- Advertisement -

ಮೊಬೈಲ್ ಗೇಮ್‌ಗಳಿಗೆ ಅತಿಯಾಗಿ ಅಂಟಿಕೊಂಡಿರುವುದು ಹಣ ಕಸಿಯುವುದಷ್ಟೇ ಅಲ್ಲದೇ ಸಾವಿಗೂ ಕೂಡ ಆಹ್ವಾನ ನೀಡುತ್ತದೆ ಎಂಬುದಕ್ಕೆ ದೇಶದಲ್ಲಿ ಹಲವು ನಿದರ್ಶನಗಳು ಸಿಕ್ಕಿವೆ. ಈಗ ಕೇರಳದ ಬಾಲಕರೊಬ್ಬರು ಮೊಬೈಲ್ ಗೇಮ್‌ಗಳ ಗೀಳಿನಿಂದ ಹಣ ಕಳೆದುಕೊಂಡು, ಮನೆಯವರು ಬೈಯುತ್ತಾರೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವಿದ್ಯಾರ್ಥಿಯನ್ನು ಎಸ್. ಆಕಾಶ್ (14) ಎಂದು ಗುರುತಿಸಲಾಗಿದೆ. ತ್ರಿಶೂರ್‌ನ ಇರಿಂಜಲಕುಡ ಬಳಿಯ ಕೊಳದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಮಂಗಳವಾರ ಸಂಜೆ ಆಕಾಶ್ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂದು ಆತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕಾಶ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲೆ, ಶಿಕ್ಷಕನ ಬಂಧನ

ಬಳಿಕ ಹುಡುಕಾಟದ ವೇಳೆ ಬುಧವಾರ ಕೊಳದ ಬಳಿ ಬಾಲಕನ ಪಾದರಕ್ಷೆ ಹಾಗೂ ಸೈಕಲ್ ದೊರೆತಿದೆ. ತಕ್ಷಣ ಪೊಲೀಸರು ಅಕ್ಕ-ಪಕ್ಕ ಹುಡುಕಿದ್ದು, ಕೊಳದಲ್ಲಿ ಆಕಾಶ್‌ನ ಮೃತದೇಹ ಕಾಣಿಸಿದೆ.

“ಒಂಬತ್ತನೇ ತರಗತಿ ಓದುತ್ತಿದ್ದ ಆಕಾಶ್‌ “ಫ್ರೀ ಫೈರ್” (Free Fire) ನಂತಹ ಮೊಬೈಲ್ ಗೇಮ್‌ಗಳಿಗೆ ಹಣವನ್ನು ಖರ್ಚು ಮಾಡಿದ್ದಾರೆ. ಇದಿಂದ ಆತನ ತಂದೆ ಬೈದಿದ್ದಾರೆ ಎಂದು ಶಂಕಿಸಲಾಗಿದೆ. ಇದರಿಂದ ಬಾಲಕ ಇಂತಹ ನಿರ್ಧಾರ  ಮಾಡಿದ್ದಾರೆ” ಎಂದು ಇರಿಂಜಲಕುಡ ಪೊಲೀಸರು ತಿಳಿಸಿದ್ದಾರೆ.

ಇನ್ನು ಕೆಲವು ವರದಿಗಳ ಪ್ರಕಾರ ಆಕಾಶ್ ಮೊಬೈಲ್ ಗೇಮ್‌ನಲ್ಲಿ ಸಾಕಷ್ಟು ಹಣವನ್ನು ಕಳೆದುಕೊಂಡಿದ್ದಾರೆ. ಇದರಿಂದ ಮನೆಯಲ್ಲಿ ಬೈಯಬಹುದು ಎಂದು ಹೆದರಿ ತನ್ನ ಜೀವವನ್ನು ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

(ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104)


ಇದನ್ನೂ ಓದಿ: ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...