Homeಮುಖಪುಟಕೇರಳ ಬಜೆಟ್‌: ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ 10 ಕೋಟಿ ರೂ. ಮೀಸಲಿಟ್ಟ ಸರ್ಕಾರ

ಕೇರಳ ಬಜೆಟ್‌: ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ 10 ಕೋಟಿ ರೂ. ಮೀಸಲಿಟ್ಟ ಸರ್ಕಾರ

- Advertisement -
- Advertisement -

ಉಕ್ರೇನ್-ರಷ್ಯಾ ಬಿಕ್ಕಟ್ಟು ಮುಂದುವರೆಯುತ್ತಿದ್ದಂತೆ ದೇಶದ ಸಾವಿರಾರು ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ. ಈ ಹಿನ್ನಲೆಯಲ್ಲಿ ಉಕ್ರೇನ್‌ನಿಂದ ಮರಳಿದ ಕೇರಳದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಬಜೆಟ್‌ನಲ್ಲಿ 10 ಕೋಟಿ ರೂ. ಅನುದಾನವನ್ನು ಮೀಸಲಿಡುವುದಾಗಿ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್‌ ಸರ್ಕಾರ ಘೋಷಿಸಿದೆ.

ಶುಕ್ರವಾರ ವಿಧಾನಸಭೆಯಲ್ಲಿ 2022-23 ರ ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಿದ ಕೇರಳದ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್‌ ಅವರು, “ಅನಿವಾಸಿ ಕೇರಳೀಯರ ವ್ಯವಹಾರಗಳ ಇಲಾಖೆಯು (NORKA) ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಮತ್ತು ಪ್ರಮಾಣಪತ್ರಗಳನ್ನು ಮರುಪಡೆಯಲು ಸಹಾಯ ಮಾಡಲು ವಿಶೇಷ ವಿಭಾಗವೊಂದನ್ನು ತೆರೆಯುತ್ತದೆ” ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸಾಂಕ್ರಾಮಿಕದಿಂದಾಗಿ ಉಂಟಾದ ಆರ್ಥಿಕ ಹಿನ್ನಡೆಯ ಹಿನ್ನಲೆಯಲ್ಲಿ ಆರ್ಥಿಕ ಬೆಳವಣಿಗೆಯನ್ನು ಪ್ರಚೋದಿಸಲು ಮತ್ತು ಉದ್ಯೋಗವನ್ನು ಸೃಷ್ಟಿಸಲು ಬೇಕಾಗಿ ಈ ವರ್ಷದ ಬಜೆಟ್‌‌ ಪರಿಹಾರಗಳನ್ನು ನೀಡುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು 

ವರದಿಗಳ ಪ್ರಕಾರ, ಹಣದುಬ್ಬರವನ್ನು ಎದುರಿಸಲು ಮತ್ತು ರಾಜ್ಯದಲ್ಲಿ ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಹಣಕಾಸು ಸಚಿವರು 2,000 ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಿಸಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ 2,546 ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಹಣಕಾಸು ಸಚಿವರು ಹೇಳಿದ್ದು, ಶಾಲೆಗಳಲ್ಲಿ ಮಧ್ಯಾಹ್ನದ ಊಟಕ್ಕೆ 346 ಕೋಟಿ ರೂ., ವಿಶೇಷಚೇತನ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ 15 ಕೋಟಿ ರೂ. ಮೀಸಲಿಡುವುದಾಗಿ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಐಟಿ ಕ್ಷೇತ್ರವನ್ನು ಉತ್ತೇಜಿಸಲು ವಿವಿಧ ಪ್ಯಾಕೇಜ್‌ಗಳನ್ನು ಘೋಷಿಸಲಾಗಿದೆ. ಗೃಹಿಣಿಯರಿಗೆ ಉದ್ಯೋಗಾವಕಾಶಗಳನ್ನು ಖಾತ್ರಿಪಡಿಸುವ ‘ವರ್ಕ್ ನಿಯರ್ ಹೋಮ್’ ಯೋಜನೆಗೆ 50 ಕೋಟಿ ರೂ. ಮೀಸಲಿಡಲಾಗಿದೆ. ಈ ಯೋಜನೆಯು ವಿದ್ಯಾವಂತ ಮಹಿಳೆಯರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಕೇರಳ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಫಂಡ್ ಬೋರ್ಡ್ (KIIFB) ಮೂಲಕ 1000 ಕೋಟಿ ರೂಪಾಯಿ ವೆಚ್ಚದಲ್ಲಿ ನಾಲ್ಕು ಐಟಿ-ಕಾರಿಡಾರ್‌ಗಳನ್ನು ಸ್ಥಾಪಿಸಲಾಗುವುದು ಎಂದು ಸರ್ಕಾರ ಹೇಳಿದೆ. 5ಜಿ ಕ್ರಾಂತಿಯಲ್ಲಿ ರಾಜ್ಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಹಣಕಾಸು ಸಚಿವರು ಈ ಪ್ಯಾಕೇಜ್‌ಗಳನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...