Homeಮುಖಪುಟಕೇರಳದಲ್ಲಿ ಶಾಂತಿ ಕದಡಲು ರಾಜ್ಯಪಾಲರಿಂದ ಯತ್ನ: ಸಿಎಂ ಪಿಣರಾಯಿ ವಿಜಯನ್‌

ಕೇರಳದಲ್ಲಿ ಶಾಂತಿ ಕದಡಲು ರಾಜ್ಯಪಾಲರಿಂದ ಯತ್ನ: ಸಿಎಂ ಪಿಣರಾಯಿ ವಿಜಯನ್‌

- Advertisement -
- Advertisement -

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಉದ್ದೇಶಪೂರ್ವಕವಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.

ಪತ್ತನಂತಿಟ್ಟದಲ್ಲಿ ರಾಜ್ಯ ಸರ್ಕಾರದ ‘ನವ ಕೇರಳ ಸಮಾವೇಶ’ದ ಅಂಗವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ರಾಜ್ಯಪಾಲರ ವಿರುದ್ದ ಕಿಡಿ ಕಾರಿದ್ದಾರೆ.

ಪ್ರತಿಭಟನಾನಿರತ ಎಸ್‌ಎಫ್‌ಐ ಕಾರ್ಯಕರ್ತರನ್ನು ರಾಜ್ಯಪಾಲರು ‘ಕ್ರಿಮಿನಲ್‌ಗಳು’ ಎಂದು ಕರೆದಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಜಯನ್, ರಾಜ್ಯಪಾಲ ಖಾನ್ ಅವರು ‘ಮನಸ್ಸಿಗೆ ತೋಚಿದನ್ನು ಹೇಳುವ ಪರಿಸ್ಥಿತಿಗೆ ತಲುಪಿದ್ದಾರೆ’ ಎಂದಿದ್ದಾರೆ.

ಆರಿಫ್ ಮೊಹಮ್ಮದ್ ಖಾನ್ ಅವರು ಕೇರಳದ ರಾಜ್ಯಪಾಲರು ಎಂಬುದನ್ನು ಮರೆಯುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ತಮ್ಮ ಹೇಳಿಕೆಗಳ ಮೂಲಕ ರಾಜ್ಯದಲ್ಲಿ ಶಾಂತಿ ಕದಡುಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯಪಾಲರು ಈ ಹಿಂದೆಯೂ ಇದೇ ರೀತಿ ಮಾಡಿದ್ದರು. ನಂತರ ಅವರ ಬಣ್ಣ ಬಯಲಾಗಿತ್ತು ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ, ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ದ ಸದಸ್ಯರು ಪ್ರತಿಭಟನೆ ಮಾಡಿದ್ದಕ್ಕೆ ರಾಜ್ಯಪಾಲ ಖಾನ್ ಅವರು, ವಿದ್ಯಾರ್ಥಿಗಳನ್ನು ಸಿಎಂ ಕಳಿಸಿದ ಕ್ರಿಮಿನಲ್‌ಗಳು, ಗೂಂಡಾಗಳು ಎಂದಿದ್ದರು. ಈ ವಿಚಾರಕ್ಕೆ ರಾಜ್ಯಪಾಲರ ವಿರುದ್ದ ಸಿಎಂ ಕೆಂಡಾಮಂಡಲರಾಗಿದ್ದಾರೆ.

ಕೆಲ ದಿನಗಳ ಹಿಂದೆ ರಾಜ್ಯಪಾಲರು ದೆಹಲಿಗೆ ತೆರಳುವ ಸಲುವಾಗಿ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಎಸ್‌ಎಫ್‌ಐ ಕಾರ್ಯಕರ್ತರು ತನ್ನ ಕಾರಿನ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದ ರಾಜ್ಯಪಾಲರು, ಅವರು ನನ್ನ ಮೇಲೆ ದೈಹಿಕವಾಗಿ ದಾಳಿ ಮಾಡಲು ಸಂಚು ರೂಪಿಸಿದ್ದರು ಎಂದಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ರಾಜ್ಯಪಾಲರು ಮತ್ತು ಕೇರಳ ಸರ್ಕಾರದ ನಡುವಿನ ಕಿತ್ತಾಟ ಇಂದು ನಿನ್ನೆಯದಲ್ಲ. ಆರಿಫ್ ಮೊಹಮ್ಮದ್ ಖಾನ್ ಕೇರಳಕ್ಕೆ ರಾಜ್ಯಪಾಲರಾಗಿ ನೇಮಕವಾದಾಗಿನಿಂದ ಇದೆ. ರಾಜ್ಯಪಾಲರು ಮಸೂದೆಗಳಿಗೆ ಸಹಿ ಹಾಕುತ್ತಿಲ್ಲ ಎಂದು ಇತ್ತೀಚೆಗೆ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿರುವುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ ಜೈಲು: ಬುಲ್ಡೋಜರ್ ಕಾರ್ಯಾಚರಣೆ ಯಾವಾಗ?; ಅಖಿಲೇಶ್ ಯಾದವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...