Homeಮುಖಪುಟಕೊರೊನ ವಿರುದ್ಧ ಹೋರಾಡಲು 20 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಿದ ಕೇರಳ ಸಿಎಂ ವಿಜಯನ್‌

ಕೊರೊನ ವಿರುದ್ಧ ಹೋರಾಡಲು 20 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಿದ ಕೇರಳ ಸಿಎಂ ವಿಜಯನ್‌

- Advertisement -
- Advertisement -

ದಿನೇ ದಿನೇ ಉಲ್ಬಣಗೊಳ್ಳುತ್ತಿರುವ ಕೊರೊನ ವೈರಸ್‌ ವಿರುದ್ಧ ಹೋರಾಡಲು ಕೇರಳ ಸರ್ಕಾರ ಪಣತೊಟ್ಟಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರವರು ತಕ್ಷಣವೇ 20 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಿದ್ದಾರೆ.

ಕೇರಳದಲ್ಲಿ ಸುಮಾರು 25 ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಎದುರಾಗಬಹುದಾದ ಬಿಕ್ಕಟ್ಟನ್ನು  ತಗ್ಗಿಸಲು 20000 ಕೋಟಿ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಕಟಿಸಿದ್ದಾರೆ.

2018 ರಲ್ಲಿ ಎದುರಾದ ಭೀಕರ ಪ್ರವಾಹ ಮತ್ತು 2019 ರಲ್ಲಿ ಅದರ ವಿನಾಶಕಾರಿ ಪುನರಾವರ್ತನೆಯ ನಂತರ ಘೋಷಿಸಲಾದ ಪರಿಹಾರ ಪ್ಯಾಕೇಜ್‌ಗಿಂತ ಈ ಕೊರೊನಾ ಹಣಕಾಸಿನ ಪ್ಯಾಕೇಜ್ ದೊಡ್ಡದಾಗಿದೆ. ಏಕೆಂದರೆ ಕೊರೊನ ವೈರಸ್ ಪರಿಣಾಮವು ವ್ಯಾಪಕವಾಗಲಿದೆ ಎಂದು ವಿಜಯನ್ ಹೇಳಿದ್ದಾರೆ.

ಇದರಲ್ಲಿ 2000 ಕೋಟಿಯನ್ನು ಉದ್ಯೋಗ ಖಾತರಿ ಕಾರ್ಯಕ್ರಮದಡಿ ಹೆಚ್ಚಿನ ಗ್ರಾಮೀಣ ಉದ್ಯೋಗಗಳಿಗೆ ಬಳಸಲಾಗುವುದು ಮತ್ತು ಇನ್ನೊಂದು 100 ಕೋಟಿಯನ್ನು ಈ ತಿಂಗಳವರೆಗೆ ಉಚಿತ ಪಡಿತರಕ್ಕಾಗಿ ಬಳಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಪರಿಸ್ಥಿತಿ ಹದಗೆಡುವ ಸಾಧ್ಯತೆಯಿದೆ. ಆದ್ದರಿಂದ ನಾವು ಅತ್ಯಂತ ಕೆಟ್ಟ ಪರಿಸ್ಥಿತಿಗೆ ಯೋಜಿಸುತ್ತಿದ್ದೇವೆ “ಎಂದು ಸಿಎಂ ನಿಕಟವರ್ತಿಯೊಬ್ಬರು ತಿಳಿಸಿದ್ದಾರೆ. ಪ್ಯಾಕೇಜ್‌‌ ಹಣದ ವಿಂಗಣಡಣೆ ಇನ್ನು ಅಧಿಕೃತ ಪತ್ರಿಕಾ ಪ್ರಕಟಣೆಯಾಗಿ ಹೊರಬಂದಿಲ್ಲ. ಆದರೆ ಅಂದಾಜು ಈ ಕೆಳಕಂಡಂತಿದೆ.

  • ರಾಜ್ಯದ ಪ್ರತಿಯೊಬ್ಬರಿಗೂ (ಎಪಿಎಲ್ ಮತ್ತು ಬಿಪಿಎಲ್) ಒಂದು ತಿಂಗಳ ಕಾಲ ಉಚಿತ ಪಡಿತರ ಪೂರೈಕೆ.
  • ಏಪ್ರಿಲ್-ಮೇ ಎರಡು ತಿಂಗಳ ಎಲ್ಲಾ ಜನಕಲ್ಯಾಣ ನಿವೃತ್ತಿ ವೇತನಗಳನ್ನು ಮಾರ್ಚ್ ತಿಂಗಳಲ್ಲೇ ಮನೆ ಬಾಗಿಲಿಗೆ ತಲುಪಿಸಲಾಗುವುದು.
  • ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 2000 ಕೋಟಿ ರೂಪಾಯಿ ವಿಶೇಷ ಹೂಡಿಕೆ ಮೂಲಕ ಅರ್ಹರಿಗೆ ಎರಡು ತಿಂಗಳ ಕೂಲಿ ನೀಡಲಾಗುವುದು.
  • ಕುಟುಂಬಶ್ರೀ ಯೋಜನೆಯ ಸಾಲಸೌಲಭ್ಯಕ್ಕಾಗಿ 2000 ಕೋಟಿ ರೂಪಾಯಿ ನೀಡಲಾಗುವುದು.
  • 1000 ಸುಭಿಕ್ಷ ರೆಸ್ಟೋರೆಂಟ್ ಗಳನ್ನು ಏಪ್ರಿಲ್ ತಿಂಗಳಿನಲ್ಲೇ ತೆರೆದು ರೂ.20
    ಬೆಲೆಯಲ್ಲಿ ಊಟ ಪೂರೈಸಲಾಗುವುದು.
  • ಕೋವಿಡ್-19ರ ಅವಧಿಗೆ 500 ಕೋಟಿ ರೂಪಾಯಿ ಆರೋಗ್ಯ ಯೋಜನೆ ಜಾರಿ.
  • ವಿದ್ಯುಚ್ಛಕ್ತಿ ಮತ್ತು ನೀರಿನ ಶುಲ್ಕ ಸಂದಾಯ ಒಂದು ತಿಂಗಳ ಕಾಲ ಮುಂದೂಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...