HomeUncategorizedಕೇರಳ ಸಿಎಂ ಪಿಣರಾಯಿ ವಿಜಯನ್, ಸಂಸದ ರಾಹುಲ್ ಭೇಟಿ: ನೈಸರ್ಗಿಕ ವಿಕೋಪ ಕುರಿತು ಚರ್ಚೆ

ಕೇರಳ ಸಿಎಂ ಪಿಣರಾಯಿ ವಿಜಯನ್, ಸಂಸದ ರಾಹುಲ್ ಭೇಟಿ: ನೈಸರ್ಗಿಕ ವಿಕೋಪ ಕುರಿತು ಚರ್ಚೆ

- Advertisement -
- Advertisement -

ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿ ಇಂದು ಸಿಎಂ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದರು. ದೆಹಲಿಯ ಕೊಚ್ಚಿ ನಿವಾಸದಲ್ಲಿ ಇಬ್ಬರು ನಾಯಕರು ಚರ್ಚೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ-766ನಲ್ಲಿ ಹೇರಿರುವ ರಾತ್ರಿ ನಿರ್ಬಂಧ, ಮಳೆ, ಪ್ರವಾಹದಿಂದ ಆಗಿರುವ ಹಾನಿ, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ವಿಚಾರವಾಗಿ ಚರ್ಚೆ ನಡೆಸಿದರು.

ಪ್ರಾಕೃತಿಕ ವಿಕೋಪದಿಂದ ಕೇರಳ ನಲುಗಿದೆ. ದೇವರನಾಡು ಕೇರಳದ ಹಲವು ಭಾಗದ ಜನತೆ ಮಳೆ, ಪ್ರವಾಹದಿಂದ ತತ್ತರಿಸಿದ್ದಾರೆ. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವುದು ಹಾಗೂ ಅಭಿವೃದ್ಧಿ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಅಲ್ಲದೇ ಕೋಯಿಕ್ಕೋಡ್ ಹಾಗೂ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ -766ನಲ್ಲಿ ಹೇರಿರುವ ರಾತ್ರಿ ನಿರ್ಬಂಧದ ವಿರುದ್ಧ ರಾಹುಲ್ ಗಾಂಧಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ನಿರ್ಬಂಧ ವಿರೋಧಿಸಿ ಯುವಕರು ನಡೆಸಿದ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಇನ್ನು ಇಂದು ಸಿಎಂ ಪಿಣರಾಯಿ ವಿಜಯನ್, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದಲಿತ ಸಮುದಾಯದ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ; ‘ಪ್ರಬುದ್ಧ’ ಯೋಜನೆ ಪುನರಾರಂಭ

0
ಎಸ್‌ಸಿ-ಎಸ್‌ಟಿ ಮತ್ತು ಇತರ ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಕೋರ್ಸ್‌ಗಳನ್ನು ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ನಡೆಸಲು ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಆರ್ಥಿಕ ಯೋಜನೆಯಾದ 'ಪ್ರಬುದ್ಧ' ಕಾರ್ಯಕ್ರಮವನ್ನು ನಿಲ್ಲಿಸಿದ್ದ...