Homeಮುಖಪುಟಕೇರಳದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ: LDF ಸಭೆಯಲ್ಲಿ ಮಹತ್ವದ ನಿರ್ಧಾರ

ಕೇರಳದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ: LDF ಸಭೆಯಲ್ಲಿ ಮಹತ್ವದ ನಿರ್ಧಾರ

- Advertisement -
- Advertisement -

ಕೇರಳದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಜನವರಿಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ದೆಹಲಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಶುಕ್ರವಾರ ನಡೆದ ಕೇರಳದ ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್(ಎಲ್ ಡಿಎಫ್) ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಎಲ್‌ಡಿಎಫ್ ಸಂಚಾಲಕ ಮತ್ತು ಸಿಪಿಐ(ಎಂ) ಹಿರಿಯ ನಾಯಕ ಇ ಪಿ ಜಯರಾಜನ್ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯೇತರ ಆಡಳಿತವಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಈ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುವುದು. ಎಲ್ಲಾ ಸಮಾನ ಮನಸ್ಕ ಪಕ್ಷಗಳನ್ನು ಕೂಡ ಪ್ರತಿಭಟನೆಗೆ ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ.

ಕೇರಳ ಎಡರಂಗದ ಎಲ್ಲಾ ಸಚಿವರು, ಶಾಸಕರು ಮತ್ತು ಸಂಸದರು ರಾಜ್ಯದ ನಿಜವಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕೇಂದ್ರದ ಜನವಿರೋಧಿ ನೀತಿಗಳನ್ನು ಖಂಡಿಸುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮುನ್ನ ಕೇರಳದ ಬಗ್ಗೆ ಕೇಂದ್ರದ ನಿರ್ಲಕ್ಷ್ಯ ವಿಚಾರದಲ್ಲಿ ಸರಣಿ ಅಭಿಯಾನ ನಡೆಸಲು ಪಕ್ಷವು ತೀರ್ಮಾನಿಸಿದೆ.

ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್‌ನ 18 ಸಂಸದರು ಲೋಕಸಭೆಯಲ್ಲಿದ್ದರೂ ಅವರು ಕೇರಳದ ಬಗ್ಗೆ ಕೇಂದ್ರದ ನಿರ್ಲಕ್ಷ್ಯದ ಬಗ್ಗೆ ಮಾತನಾಡುತ್ತಿಲ್ಲ ಎಂದು ಜಯರಾಜನ್ ಆರೋಪಿಸಿದ್ದಾರೆ.

ಇತ್ತೀಚೆಗೆ ವಿಧಾನಸಭೆಯಲ್ಲಿ ಅಂಗೀಕಾರವಾದ ಬಿಲ್‌ಗೆ ಕೇರಳ ರಾಜ್ಯಪಾಲರಾದ ಆರೀಫ್‌ ಮೊಹಮ್ಮದ್‌ ಖಾನ್‌ ಅವರು ಅಂಕಿತ ಹಾಕುತ್ತಿಲ್ಲ ಎಂದು ಕೇರಳ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ರಾಜ್ಯಪಾಲರ ವಿರುದ್ಧ ಸುಪ್ರೀಂಕೋರ್ಟ್‌ಗೆ ದೂರು ನೀಡಿದ ಮೂರನೇ ರಾಜ್ಯ ಕೇರಳವಾಗಿದೆ.

ಪಂಜಾಬ್‌ ಸರಕಾರ ಸಲ್ಲಿಸಿದ ರಾಜ್ಯಪಾಲರ ವಿರುದ್ಧದ ಅರ್ಜಿಯಲ್ಲಿ ಸುಪ್ರೀಂಕೋರ್ಟ್‌, ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಅರ್ಥೈಸಬೇಕು ಎಂದು ಹೇಳಿದ್ದರು. ಸುಪ್ರೀಂಕೋರ್ಟ್‌ಗೆ ಈ ಕುರಿತು ವಿಷಯ ತಲುಪುವ ಮುನ್ನವೇ ಇತ್ಯರ್ಥ ಆಗಬೇಕು ಎಂದು ಹೇಳಿದ್ದರು.

 ಇದನ್ನು ಓದಿ: ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ತಡೆಗೆ ಸುಪ್ರೀಂ ನಕಾರ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...