Homeಮುಖಪುಟಕೇರಳ - ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

- Advertisement -
- Advertisement -

ಕೇರಳದಲ್ಲಿ ಈಗ ಚುನಾವಣೆ ನಡೆದರೆ ಭಾರತೀಯ ಕಮ್ಯುನಿಷ್ಟ್‌ ಪಕ್ಷ(ಮಾರ್ಕ್ಸ್‌ವಾದಿ) ನೇತೃತ್ವದ ಎಲ್‌ಡಿಎಫ್‌ ಸರ್ಕಾರ ರಾಜ್ಯದಲ್ಲಿ ಮತ್ತೇ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಹೀಗಾದರೆ ಕೇರಳದ 40 ವರ್ಷಗಳ ರಾಜಕೀಯ ಸಂಪ್ರದಾಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸರ್ಕಾರ ಮುರಿಯಲಿದೆ.

1980 ರಿಂದೀಚೆಗೆ, ಕೇರಳವು ಯಾವುದೇ ಪಕ್ಷ ಅಥವಾ ಮೈತ್ರಿ ಕೂಟಕ್ಕೆ ರಾಜ್ಯದಲ್ಲಿ ಮತ್ತೆ ಅಧಿಕಾರ ನೀಡಿಲ್ಲ.

ಏಷ್ಯಾನೆಟ್ ನ್ಯೂಸ್-ಸಿಫೋರ್ ಸಮೀಕ್ಷೆಯ ಪ್ರಕಾರ, 140 ಸದಸ್ಯರ ವಿಧಾನಸಭೆಯಲ್ಲಿ ಎಲ್‌ಡಿಎಫ್‌‌ 72-78 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಸರ್ಕಾರ ಬಹುಮತ ಪಡೆಯಲು 71 ಸ್ಥಾನಗಳು ಸಾಕಾಗುತ್ತದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್‌‌ಗೆ ಕೇವಲ 59-65 ಸ್ಥಾನಗಳಷ್ಟೇ ಸಿಗುತ್ತದೆ ಎಂದು ಅದು ತಿಳಿಸಿದೆ. ಯುಡಿಎಫ್‌ 2016 ರಲ್ಲಿ 47 ಸ್ಥಾನಗಳನ್ನು ಪಡೆದಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ 3-7 ಸ್ಥಾನಗಲು ಪಡೆಯುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಉತ್ತರ ಮತ್ತು ದಕ್ಷಿಣ ಕೇರಳದಲ್ಲಿ ಯುಡಿಎಫ್‌ ಸ್ಥಾನಗಳನ್ನು ಕಳೆದುಕೊಳ್ಳಲಿದ್ದು ಅದು ಎಲ್‌ಡಿಎಫ್‌‌ ಪಾಲಾಗಲಿದೆ, ಆದರೆ ಮಧ್ಯ ಕೇರಳದಲ್ಲಿ ಯುಡಿಎಫ್ ಪ್ರಬಲವಾಲಿದೆ ಎಂದು ಎಂದು ಸಮೀಕ್ಷೆಯು ಊಹಿಸಿದೆ.

ಸಮೀಕ್ಷೆಯ ಪ್ರಕಾರ ಸುಮಾರು 39% ರಷ್ಟು ಜನರು ಪಿಣರಾಯಿ ವಿಜಯನ್ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ಮರಳಬೇಕೆಂದು ತಿಳಿಸಿದ್ದಾರೆ. ಮಾಜಿ ಸಿಎಂ ಮತ್ತು ಕಾಂಗ್ರೆಸ್ ಮುಖಂಡ ಉಮ್ಮನ್ ಚಾಂಡಿ ಅವರನ್ನು 18% ಜನರಷ್ಟೇ ಆಯ್ಕೆ ಮಾಡಿಕೊಂಡರೆ, ಅವರ ಸಹೋದ್ಯೋಗಿ ಮತ್ತು ತಿರುವನಂತಪುರ ಸಂಸದ ಶಶಿ ತರೂರ್ ಅವರು 9% ಮತಗಳನ್ನು ಪಡೆದ್ದಾರೆ. ಆರೋಗ್ಯ ಸಚಿವೆ ಕೆ.ಕೆ.ಶೈಲಜಾ 7% ಮತಗಳನ್ನು ಪಡೆದರೆ, ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ 6% ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಸಮೀಕ್ಷೆಯ ಪ್ರಕಾರ, 34% ರಷ್ಟು ಜನರು ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಉಚಿತ ಆಹಾರ ಕಿಟ್‌ಗಳನ್ನು ವಿತರಿಸಿದ್ದು ಎಲ್‌ಡಿಎಫ್ ಸರ್ಕಾರದ ದೊಡ್ಡ ಸಾಧನೆ ಎಂದು ಹೇಳಿದ್ದಾರೆ. ಪ್ರತಿಕ್ರಿಯಿಸಿದವರಲ್ಲಿ 27% ಜನರು ಕಲ್ಯಾಣ ಪಿಂಚಣಿ ನೀಡಿದ್ದು ದೊಡ್ಡ ಸಾಧನೆ ಎಂದಿದ್ದರೆ, 18% ಜನರು ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಕಳೆದ ವರ್ಷ ಜೂನ್‌ನಲ್ಲಿ ಏಷ್ಯಾನೆಟ್ ನ್ಯೂಸ್-ಸಿಫೋರ್ ನಡೆಸಿದ ಇದೇ ರೀತಿಯ ಸಮೀಕ್ಷೆಯು ಚುನಾವಣೆಗಳನ್ನು ನಡೆಸಿದರೆ ಎಲ್‌ಡಿಎಫ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಊಹಿಸಿತ್ತು. ಅದರಂತೆ ಡಿಸೆಂಬರ್‌ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಲ್‌ಡಿಎಫ್ ಬಹುಪಾಲು ಪಂಚಾಯಿತಿಗಳು, ಬ್ಲಾಕ್ ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು ಮತ್ತು ಕಾರ್ಪೋಷನ್‌‌ಗಳನ್ನು ಗೆಲ್ಲುವ ಮೂಲಕ ಭಾರಿ ಜಯಗಳಿಸಿತ್ತು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...