Homeಮುಖಪುಟಕೇರಳ: ಸಾರ್ವಜನಿಕವಾಗಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಲಿರುವ ಕಾಂಗ್ರೆಸ್

ಕೇರಳ: ಸಾರ್ವಜನಿಕವಾಗಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಲಿರುವ ಕಾಂಗ್ರೆಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಕೇರಳದ ಕಾಂಗ್ರೆಸ್ ಘಟಕವು ಗುರುವಾರ ತಿರುವನಂತಪುರಂನಲ್ಲಿ ಪ್ರದರ್ಶಿಸುತ್ತಿದೆ. ಒಕ್ಕೂಟ ಸರ್ಕಾರ ಈಗಾಗಲೆ ಸಾಕ್ಷ್ಯಚಿತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಮಾಧ್ಯಮಗಳಿಂದ ಅವುಗಳನ್ನು ತಡೆ ಹಿಡಿದಿದೆ. ಅದಾಗ್ಯೂ ಇಂಟರ್‌ನೆಟ್‌ನ ವಿವಿಧ ಮಾಧ್ಯಮಗಳ ಮೂಲಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ.

ಎರಡು ಭಾಗಗಳಾಗಿ ಬಿಡುಗಡೆಯಾಗಿರುವ ಸಾಕ್ಷ್ಯಚಿತ್ರದ ಸರಣಿಯು 2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನಿ ಮೋದಿಯವರ ರಾಜಕೀಯದ ಬಗ್ಗೆ ಚರ್ಚಿಸುತ್ತದೆ. ಈಗಾಗಲೆ ದೇಶಾದ್ಯಂತ ಹಲವಾರು ವಿರೋಧ ಪಕ್ಷಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ಯ್ರದ ಪರ ಹೋರಾಟಗಾರರು ಇಂತಹ ಪ್ರದರ್ಶನಗಳನ್ನು ಆಯೋಜಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದರೂ, ಆಡಳಿತಾರೂಢ ಸಿಪಿಐಎಂ ಕೂಡ ಸಾಕ್ಷ್ಯಚಿತ್ರವನ್ನು ಒಕ್ಕೂಟ ಸರ್ಕಾರ ಸಾಮಾಜಿಕ ಮಾಧ್ಯಮಗಳಲ್ಲಿ ತಡೆ ಹಿಡಿದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ.

ಕೇರಳದ ರಾಜಧಾನಿ ತಿರುವನಂತಪುರಂನಲ್ಲಿರುವ ಶಾಂಗುಮುಖಂ ಬೀಚ್‌ನಲ್ಲಿ ಇಂದಿನ ಪ್ರದರ್ಶನವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆಯಾದ ಎನ್‌ಎಸ್‌ಯುಐ ಈಗಾಗಲೆ ದೆಹಲಿ, ಹೈದರಾಬಾದ್, ಕೋಲ್ಕತ್ತಾ ಮತ್ತು ಚಂಡೀಗಢದಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭಾರತ್‌  ಜೋಡೋ ಯಾತ್ರೆಯಲ್ಲಿ ಇರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಾಕ್ಷ್ಯಚಿತ್ರದ ಸೆನ್ಸಾರ್‌‌ಶಿ‍ಪ್ ಅ‌ನ್ನು ಪ್ರಶ್ನಿಸಿದ್ದರು. ಜಮ್ಮುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸತ್ಯವು ಪ್ರಕಾಶಮಾನವಾಗಿ ಹೊಳೆಯುತ್ತದೆ. ಅದು ಯಾವತ್ತಿದ್ದರೂ ಹೊರ ಬಂದೇ ಬರುತ್ತದೆ. ಆದ್ದರಿಂದ ಯಾವುದೇ ನಿಷೇಧ, ದಬ್ಬಾಳಿಕೆ ಮತ್ತು ಜನರನ್ನು ಹೆದರಿಸುವುದರಿಂದ ಸತ್ಯವನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಕೇರಳದಲ್ಲಿ ಆಡಳಿತರೂಢ ಪಕ್ಷವಾದ ಸಿಪಿಐಎಂನ ಯುವಜನ ಸಂಘಟನೆ ಡಿವೈಎಫ್‌ಐ ಮತ್ತು ವಿದ್ಯಾರ್ಥಿ ಸಂಘಟನೆ ಎಸ್‌ಎಫ್‌ಐ ಈಗಾಗಲೆ ರಾಜ್ಯದ ಹಲವಾರು ಸ್ಥಳಗಳಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ವಿಚಾರ: ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಉಳಿಸಲು ಇದು ಸಕಾಲ ಎಂದ ಅಮೆರಿಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...