Homeಮುಖಪುಟಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!

ಕೇರಳ | ನಿರ್ಣಾಯಕ ಅವಿಶ್ವಾಸ ಗೊತ್ತುವಳಿಗೂ ಮುನ್ನ ಸಿಪಿಐ(ಎಂ) ಕೌನ್ಸಿಲರ್ ಅಪಹರಣ!

- Advertisement -
- Advertisement -

ಕೇರಳದ ಮುನ್ಸಿಪಲ್ ಕಾರ್ಪೋರೇಶನ್ ಒಂದರ ಅವಿಶ್ವಾಸ ನಿರ್ಣಯ ಮಂಡನೆ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಸಿಪಿಐ(ಎಂ) ಮಹಿಳಾ ಕೌನ್ಸಿಲರ್ ಒಬ್ಬರ ಅಪಹರಣ, ಆಸ್ಪತ್ರೆಗೆ ದಾಖಲು, ಪಕ್ಷಾಂತರ ಆಫರ್ ಹೀಗೆ ದೊಡ್ಡ ಹೈಡ್ರಾಮಕ್ಕೆ ಕಾರಣವಾಗಿದೆ.

ಎರ್ನಾಕುಲಂ ಜಿಲ್ಲೆಯ ಕೂತಟ್ಟುಕುಲಂ ಮುನ್ಸಿಪಲ್ ಕಾರ್ಪೋರೇಶನ್‌ನಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಆಡಳಿತವಿದೆ. 13 ಮಂದಿ ಸದಸ್ಯರನ್ನು ಎಲ್‌ಡಿಎಫ್‌ ಹೊಂದಿದೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಇದ್ದು, 11 ಸದಸ್ಯರನ್ನು ಹೊಂದಿದೆ.

ಕೂತಟ್ಟುಕುಲಂ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಐಸೋಲೇಶನ್ ವಾರ್ಡ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಯಡಿಎಫ್‌, ಮುನ್ಸಿಪಲ್ ಕೌನ್ಸಿಲ್ ಆಡಳಿತದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಶನಿವಾರ (ಜ.18) ಅಣಿಯಾಗಿತ್ತು. ಆದರೆ, ಆಡಳಿತರೂಢ ಎಲ್‌ಡಿಎಫ್‌ ಮುನ್ಸಿಪಲ್ ಸಭೆಯನ್ನೇ ಬಹಿಷ್ಕರಿಸಿತ್ತು.

ಎಲ್‌ಡಿಎಫ್‌ ಆಡಳಿತದ ಕುರಿತು ಅಸಮಾಧಾನ ಹೊಂದಿದ್ದ ಸಿಪಿಐ(ಎಂ) ಮಹಿಳಾ ಕೌನ್ಸಿಲರ್ ಕಲಾ ರಾಜು ಎಂಬವರು ಪಕ್ಷ ತೊರೆದು ಯುಡಿಎಫ್‌ ಬಣ ಸೇರುವ ಸೂಚನೆ ನೀಡಿದ್ದರು. ತಮ್ಮದೇ ಪಕ್ಷದ ವಿರುದ್ದ ಅವರು ಹೇಳಿಕೆಗಳನ್ನು ನೀಡುತ್ತಿದ್ದರು. ಅವಿಶ್ವಾಸ ನಿರ್ಣಯ ಮಂಡನೆಯ ಹಿನ್ನೆಲೆ ಶನಿವಾರ (ಜ.19) ಎಲ್‌ಡಿಎಫ್‌ ಕೌನ್ಸಿಲ್ ಸಭೆ ಬಹಿಷ್ಕರಿಸಿದ್ದರೂ, ಕಲಾ ರಾಜು ಮುನ್ಸಿಪಲ್ ಕಚೇರಿ ಬಳಿಗೆ ಬಂದಿದ್ದರು. ಈ ವೇಳೆ ಅವರನ್ನು ಅಪಹರಿಸಿ ಇಡೀ ದಿನ ಸಿಪಿಐ(ಎಂ) ಕಚೇರಿಯಲ್ಲಿ ಕೂಡಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ಮಾತನಾಡಿರುವ ಕಲಾ ರಾಜು ಅವರು, “ಮುನ್ಸಿಪಲ್ ಕಚೇರಿ ಬಳಿಗೆ ಬಂದಾಗ ಎಲ್ಲರೆದುರು ನನ್ನ ಬಟ್ಟೆಯನ್ನು ಎಳೆದಾಡಿ, ಬಲವಂತವಾಗಿ ಸಿಪಿಐ(ಎಂ) ಪ್ರಾದೇಶಿಕ ಕಚೇರಿಗೆ ಕರೆದೊಯ್ದರು. ಅವಿಶ್ವಾಸ ನಿರ್ಣಯವನ್ನು ಬೆಂಬಲಿಸದಂತೆ ಒತ್ತಡ ಹೇರಿದರು. ಪಕ್ಷಕ್ಕೆ ದ್ರೋಹ ಬಗೆದು ನೀನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ಸಿಪಿಐ(ಎಂ) ಪಕ್ಷದ ಎಲ್ಲಾ ಪುರುಷರು ಅಲ್ಲಿದ್ದರು” ಎಂದು ಆರೋಪಿಸಿದ್ದಾರೆ.

“ನಾನು ಹಲವು ಗಂಟೆಗಳ ಕಾಲ ಸಿಪಿಐ(ಎಂ) ಕಚೇರಿಯಲ್ಲೇ ಇದ್ದೆ. ನಂತರ ಸಂಜೆ 4:30ಕ್ಕೆ ಮನೆಗೆ ಬಿಟ್ಟರು. ಅವರು ನನ್ನೊಂದಿಗೆ ಮಾತನಾಡಿದ ರೀತಿ ಮತ್ತು ಎಲ್ಲರ ಮುಂದೆ ನನ್ನ ಬಟ್ಟೆಗಳನ್ನು ಹಿಡಿದು ಎಳೆದು ಅವಮಾನಿಸಿದ ರೀತಿ ನನಗೆ ಹೆಚ್ಚು ನೋವುಂಟು ಮಾಡಿದೆ” ಎಂದು ಕಲಾ ರಾಜು ಹೇಳಿದ್ದಾರೆ.

ಆಪಾದಿತ ಅಪಹರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಲಾ ಅವರ ಕುಟುಂಬವು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೂತಟ್ಟುಕುಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕಲಾ ಅವರು ಪ್ರಸ್ತುತ ಕೊಚ್ಚಿಯ ಇಂದಿರಾ ಗಾಂಧಿ ಸಹಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಂಗ್ರೆಸ್‌ ಸೇರುವಂತೆ ಆಫರ್

ಮುನ್ಸಿಪಲ್ ಕೌನ್ಸಿಲ್ ಹೈಡ್ರಾಮದ ಬಳಿಕ ತಮ್ಮ ಪಕ್ಷಕ್ಕೆ ಸೇರುವಂತೆ ಎರ್ನಾಕುಲಂ ಜಿಲ್ಲಾ ಕಾಂಗ್ರೆಸ್ ಕಲಾ ರಾಜು ಅವರಿಗೆ ಆಫರ್ ಕೊಟ್ಟಿದೆ. ಕಲಾ ಅವರು ಕೂಡ ಯುಡಿಎಫ್‌ ಬಣ ಸೇರುವ ಸೂಚನೆ ನೀಡಿದ್ದಾರೆ.

“ನನ್ನ ಜೀವನದ 25 ವರ್ಷಗಳನ್ನು ಸಿಪಿಎಂಗೆ ಅರ್ಪಿಸಿದ್ದೇನೆ. ನನ್ನ ಪತಿಯ ಮರಣದ ಆಘಾತದ ಹೊರತಾಗಿಯೂ, ನಾನು ಜನರು ಮತ್ತು ಪಕ್ಷ ಎರಡಕ್ಕೂ ಸೇವೆ ಸಲ್ಲಿಸಲು ಬದ್ಧಳಾಗಿದ್ದೆ. ಆದರೆ, ನಾನು ಅನುಭವಿಸಿದ ಅವಮಾನಕ್ಕೆ ಪಕ್ಷ ಬದಲಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇನೆ” ಎಂದು ಕಲಾ ಅವರು ಹೇಳಿದ್ದಾರೆ.

ಸಿಪಿಐ (ಎಂ) ಕಲಾ ಅವರನ್ನು ಏಕೆ ಗುರಿ ಮಾಡಿದೆ?

ಮಾಧ್ಯಮಗಳ ಜೊತೆ ಮಾತನಾಡಿರುವ ಕಲಾ ರಾಜು “ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಸನ್ನಿ ಕುರಿಯಕೋಸ್ ಅಧ್ಯಕ್ಷರಾಗಿದ್ದಾಗ, ಸಿಪಿಎಂ ನಿಯಂತ್ರಣದಲ್ಲಿರುವ ಸಹಕಾರಿ ಬ್ಯಾಂಕ್‌ನಿಂದ ನನ್ನ ಕುಟುಂಬ 10 ಲಕ್ಷ ರೂ. ಸಾಲ ಪಡೆದಿತ್ತು. ಕೂತ್ತಟ್ಟುಕುಲಂ ಪಟ್ಟಣದಲ್ಲಿರುವ ನಮ್ಮ ಭೂಮಿಯ ಒಂದು ಭಾಗವನ್ನು ಒತ್ತೆ ಇರಿಸಿ ಆ ಸಾಲವನ್ನು ಪಡೆಯಲಾಗಿತ್ತು.”

“ಕೋವಿಡ್‌ನಿಂದ ನನ್ನ ಪತಿ ನಿಧನರಾದರು. ಈ ನಡುವೆ ಸಾಲ ಮರು ಪಾವತಿಸದ ಕಾರಣ ಬ್ಯಾಂಕ್ ಮುಟ್ಟುಗೋಲು ನೋಟಿಸ್ ನೀಡಿತು. ರಿಯಾಯಿತಿ ನೀಡುವಂತೆ ಕೋರಿದ್ದ ನನ್ನ ಮನವಿಯನ್ನು ತಳ್ಳಿ ಹಾಕಿತ್ತು. ನಾನು ಪಕ್ಷದ ನಾಯಕರನ್ನು ಸಂಪರ್ಕಿಸಿ ನನ್ನ ಕಳವಳವನ್ನು ವ್ಯಕ್ತಪಡಿಸಿದೆ. ಸನ್ನಿ ಸೇರಿದಂತೆ ನಾಯಕರು ಮಧ್ಯಪ್ರವೇಶಿಸಿ, ಪಕ್ಷವು ನಮಗೆ ಸಹಾಯ ಮಾಡಲಿದೆ ಎಂದಿದ್ದರು”.

“ಅವರು ನಮ್ಮ ಭೂಮಿಯನ್ನು 22.5 ಲಕ್ಷ ರೂ.ಗೆ ಮಾರಾಟ ಮಾಡಿ, ಬಂದ ಹಣವನ್ನು ಬ್ಯಾಂಕ್ ಬಾಕಿ ಪಾವತಿಸಲು ಬಳಸಿಕೊಂಡರು”.

“ಅವಿಶ್ವಾಸ ನಿರ್ಣಯದ ಪರ ಮತ ಚಲಾಯಿಸಲು ನೀವು ಯುಡಿಎಫ್ ಜೊತೆ ಒಪ್ಪಂದ ಮಾಡಿಕೊಂಡಿದ್ದೀರಿ ಎಂದು ಸಿಪಿಎಂ ನಾಯಕರು ನನ್ನ ವಿರುದ್ದ ಆರೋಪ ಮಾಡಿದ್ದಾರೆ. ನನ್ನ ಮತ್ತು ಯುಡಿಎಫ್ ಕೌನ್ಸಿಲರ್‌ಗಳ ನಡುವೆ ಯಾವುದೇ ಒಪ್ಪಂದವಾಗಲಿ, ಮಾತಕತೆಯಾಗಲಿ ನಡೆದಿಲ್ಲ. ಸಿಪಿಎಂ ನೇತೃತ್ವದ ಆಡಳಿತ ಪಕ್ಷದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಲು ನಾನು ನಿರ್ಧರಿಸಿದ್ದೇನೆ. ಏಕೆಂದರೆ, ಪಕ್ಷವು ನನ್ನ ಮತ್ತು ನನ್ನ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ” ಎಂದು ಕಲಾ ಅವರು ವಿವರಿಸಿದ್ದಾರೆ.

ಬಾಬಾ ರಾಮ್‌ದೇವ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...