Homeಮುಖಪುಟಕೇರಳ: ಎಡಪಕ್ಷಗಳ ಆಡಳಿತಕ್ಕೆ ಮಣೆ ಹಾಕಿದ ಜನ - ಮತ್ತೊಮ್ಮೆ ಅಧಿಕಾರದತ್ತ ಎಲ್‌ಡಿಎಫ್‌

ಕೇರಳ: ಎಡಪಕ್ಷಗಳ ಆಡಳಿತಕ್ಕೆ ಮಣೆ ಹಾಕಿದ ಜನ – ಮತ್ತೊಮ್ಮೆ ಅಧಿಕಾರದತ್ತ ಎಲ್‌ಡಿಎಫ್‌

- Advertisement -
- Advertisement -

ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಎಲ್‌ಡಿಎಫ್ (Left Democratic Front) ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಕೇರಳದ ಜನತೆ ಎಡಪಕ್ಷಗಳ ಅಧಿಕಾರವನ್ನು ಮೆಚ್ಚಿ ಮತ್ತೆಮ್ಮೆ ಅಧಿಕಾರ ನೀಡಿರುವುದನ್ನು ಇಂದಿನ ಮತ ಎಣಿಕೆಯ ಆರಂಭಿಕ ಮುನ್ನಡೆಗಳು ತಿಳಿಸಿವೆ.

140 ಸದಸ್ಯರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 71 ಸ್ಥಾನಗಳ ಅಗತ್ಯವಿದೆ. ಆದರೆ ಎಲ್‌ಡಿಎಫ್ ಈಗಾಗಲೇ 90 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆ ಮೂಲಕ ಸತತ ಎರಡನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಎಡಪಕ್ಷಗಳು ವಿಶಿಷ್ಟ ದಾಖಲೆಗೆ ಪಾತ್ರವಾಗಿವೆ.

ಪ್ರತಿಪಕ್ಷ ಯುಡಿಎಫ್ 47 ಸ್ಥಾನಗಳ ಮುನ್ನಡೆಗೆ ಸೀಮಿತವಾದರೆ ಬಿಜೆಪಿ 03 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಕೇರಳದಲ್ಲಿ 1982ರ ನಂತರ ಇದುವರೆಗೂ ಯಾವುದೆ ಒಂದು ಪಕ್ಷವಾಗಲೀ ಅಥವಾ ಮೈತ್ರಿಕೂಟವಾಗಲೀ ಪುನರಾವರ್ತಿತವಾಗಿ (ಸತತ ಎರಡನೇ ಬಾರಿ) ಸರ್ಕಾರ ರಚಿಸಿಲ್ಲ. 1982ರ ನಂತರ ಒಮ್ಮೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಅಧಿಕಾರಕ್ಕೆ ಬಂದರೆ, ಮತ್ತೊಮ್ಮೆ ಸಿಪಿಐಎಂ ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಅಧಿಕಾರಕ್ಕೆ ಬರುವುದು ವಾಡಿಕೆ. ಆದರೆ ಈ ಬಾರಿ ಈ ಸಂಪ್ರದಾಯಕ್ಕೆ ಬ್ರೇಕ್ ಹಾಕಿರುವ ಮತದಾರರು ಎಲ್‌ಡಿಎಫ್ ಆಡಳಿತ ಮೆಚ್ಚೆ ಮತ್ತೆ ಅವರನ್ನೆ ಅಧಿಕಾರಕ್ಕೆ ತಂದಿದ್ದಾರೆ.


ಇದನ್ನೂ ಓದಿ; ತಮಿಳುನಾಡು: ಭರ್ಜರಿ ಮುನ್ನಡೆ ಸಾಧಿಸಿದ ಡಿಎಂಕೆ – ದಶಕದ ನಂತರ ಉದಯಿಸಿದ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...