Homeಮುಖಪುಟಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

- Advertisement -
- Advertisement -

ಕೊರೊನಾದಿಂದಾಗಿ ಎಲ್ಲಾ ಕಡೆ ಉದ್ಯೋಗ ನಷ್ಟದ ಸುದ್ದಿಗಳೇ ಕೇಳುತ್ತಿರುವ ಸಂಧರ್ಭದಲ್ಲಿ ಕೇರಳ ರಾಜ್ಯವು ತನ್ನ “100 ದಿನಗಳು, 100 ಯೋಜನೆಗಳು” ಎಂಬ ಕಾರ್ಯಕ್ರಮದ ಅಂಗವಾಗಿ 61,290 ಜನರಿಗೆ ಉದ್ಯೋಗ ನೀಡಿದೆ. ಯೋಜನೆಯೂ 2 ತಿಂಗಳಲ್ಲಿ 50,000 ಹೊಸ ಉದ್ಯೋಗಗಳನ್ನು ನೀಡಬೇಕು ಎದು ಗುರಿಯಿಟ್ಟು ಕೊಂಡಿದ್ದರೂ ಗುರಿಯನ್ನು ಮೀರಿ ಉದ್ಯೋಗ ನೀಡಿತು.

“ಈ ಸಾಧನೆ ಮಾಡಲು ಶ್ರಮಿಸಿದ ಎಲ್ಲ ವ್ಯಕ್ತಿಗಳನ್ನು ನಾನು ಅಭಿನಂದಿಸುತ್ತೇನೆ” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು, ನಾಲ್ಕು ತಿಂಗಳ ಅವಧಿಯಲ್ಲಿ ಒಟ್ಟು ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ: ದಲಿತ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್!

ಒಪ್ಪಿಗೆ, ಸಿಬಿಐ, CBI, Kerela,“ಸಾಂಕ್ರಾಮಿಕ ರೋಗದ ಹೊರತಾಗಿಯೂ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೊರಟ ಸರ್ಕಾರ ಈ ಯೋಜನೆಯೂ ಭಾರಿ ಅಪಹಾಸ್ಯಕ್ಕೆ ಗುರಿಯಾಯಿತ್ತು. ಆದಾಗ್ಯೂ ಅದು ವಾಸ್ತವವಾಗಿದ್ದು, ನೀಡಿದ್ದ ಭರವಸೆಯನ್ನು ಉಳಿಸಿಕೊಂಡಿದ್ದೇವೆ. ನಡೆಯುತ್ತಿರುವ ’100 ದಿನಗಳು, 100 ಯೋಜನೆಗಳು’ ಕಾರ್ಯಕ್ರಮದ ಅಂಗವಾಗಿ ಡಿಸೆಂಬರ್ ಅಂತ್ಯದ ಮೊದಲು ಇನ್ನೂ 50,000 ಉದ್ಯೋಗಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ”
~ಪಿಣರಾಯಿ ವಿಜಯನ್, ಕೇರಳ ಮುಖ್ಯಮಂತ್ರಿ

 

“19,607 ಜನರನ್ನು ತಾತ್ಕಾಲಿಕ ಆಧಾರದ ಮೇಲೆ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಸೇರಿಸಿಕೊಳ್ಳಲಾಗಿದೆ. ಸರ್ಕಾರಿ ಅಥವಾ ಇತರ ಹಣಕಾಸು ಸಂಸ್ಥೆಗಳ ಉದ್ಯಮಗಳಲ್ಲಿ ಇನ್ನೂ 41,683 ಜನರು ಉದ್ಯೋಗದಲ್ಲಿದ್ದಾರೆ. ಕುಡುಂಬಸ್ರೀ ಕೋಟಾ 15,000 ರಷ್ಟಿದ್ದು, 19,135 ಕಾರ್ಮಿಕರನ್ನು ನೇಮಿಸಿಕೊಳ್ಳಲು ವಿಸ್ತರಿಸಲಾಗಿದೆ. ಸೂಕ್ಷ್ಮ ಉದ್ಯಮಗಳಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗಿದ್ದು, ಹೋಟೆಲ್ ಉದ್ಯಮದಲ್ಲಿ 611 ಜನರು ಉದ್ಯೋಗ ಪಡೆದಿದ್ದಾರೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಅತ್ಯುತ್ತಮ ಆಡಳಿತ ರಾಜ್ಯ: ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...