Homeಮುಖಪುಟಕೇರಳ ಸ್ಪೋಟ: ನಾಗರಿಕ ಸಮಾಜದಲ್ಲಿ ದ್ವೇಷ, ಹಿಂಸೆಗೆ ಜಾಗವಿಲ್ಲ- ರಾಹುಲ್ ಖಂಡನೆ

ಕೇರಳ ಸ್ಪೋಟ: ನಾಗರಿಕ ಸಮಾಜದಲ್ಲಿ ದ್ವೇಷ, ಹಿಂಸೆಗೆ ಜಾಗವಿಲ್ಲ- ರಾಹುಲ್ ಖಂಡನೆ

- Advertisement -
- Advertisement -

ಕೇರಳದ ಎರ್ನಾಕುಲಂನಲ್ಲಿರುವ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಸಮಾವೇಶ ಕೇಂದ್ರದಲ್ಲಿ ಸಂಭವಿಸಿದ ಸರಣಿ ಸ್ಫೋಟದ ಘಟನೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ”ಈ ಘಟನೆಯು ತುಂಬಾ ಪ್ರಕ್ಷುಬ್ಧಕಾರಿಯಾಗಿದೆ’ ಎಂದು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಚಾರವಾಗಿ ಎಕ್ಸಾನಲ್ಲಿ ಪೋಸ್ಟ್‌ ಮಾಡಿರುವ ಅವರು, ”ಗಾಯಾಳುಗಳು ಆದಷ್ಟು ಶೀಘ್ರ ಚೇತರಿಸಿಕೊಳ್ಳಲಿ ಎಂದು ಬಯಸುತ್ತೇನೆ” ಎಂದು ಹಾರೈಸಿದ್ದಾರೆ.

ರ”ನಾಗರಿಕ ಸಮಾಜದಲ್ಲಿ ದ್ವೇಷ ಹಾಗೂ ಹಿಂಸೆಗೆ ಜಾಗವಿಲ್ಲ. ಸರ್ಕಾರವು ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕೇರಳದ ಕಳಮಶೆರಿಯ ಪ್ರಾರ್ಥನಾ ಕೇಂದ್ರವೊಂದರಲ್ಲಿ ರವಿವಾರ ಬೆಳಗ್ಗೆ ನಡೆದ ಸರಣಿ ಸ್ಫೋಟದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಆರು ಜನರ ಸ್ಥಿತಿ ಗಂಭೀರವಾಗಿದೆ. ಈ ಸ್ಫೋಟಕ್ಕೆ ನಾನೇ ಕಾರಣ ಎಂದು ಡೊಮಿನಿಕ್ ಮಾರ್ಟಿನ್ ಎಂಬಾತ ಫೇಸ್‌ಬುಕ್ ಲೈವ್‌ನಲ್ಲಿ ಹೇಳಿಕೊಂಡಿದ್ದು, ಆ ಬಳಿಕ ಆತ ಪೊಲೀಸರಿಗೆ ಶರಣಾಗಿದ್ದಾನೆ.

ಪೊಲೀಸರು ಹೆಸರಿಸದ ವ್ಯಕ್ತಿಗಳ ವಿರುದ್ಧ ಸೆಕ್ಷನ್ 302 ಮತ್ತು 307 ಅನ್ವಯ ಹಾಗೂ ಸ್ಫೋಟಕಗಳ ಕಾಯಿದೆ ಮತ್ತು ಅಕ್ರಮ ಚಟುವಟಿಕೆ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಮಾರ್ಟಿನ್ ಹಂಚಿಕೊಂಡ ವಿಡಿಯೋದಲ್ಲಿ ಏನಿದೆ?

”ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ, ಏನಾದರೂ ಸಂಭವಿಸಿದೆ ಎಂಬುದು ಖಚಿತ . ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾನೆ.

”ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ” ಎಂದು ಆರೋಪಿಸಿದ್ದಾನೆ.

”4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶ ಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪು ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ” ಎಂದು ವಿಡಿಯೋದಲ್ಲಿ ಹೇಳಿದ್ದಾನೆ.
”ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು” ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...