Homeಮುಖಪುಟಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಕೇರಳ: ತಂದೆ, ಮಗಳ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಸಾರಿಗೆ ಸಿಬ್ಬಂದಿ ಅಮಾನತು

ಈ ಆಘಾತಕಾರಿ ಘಟನೆಯ ಕುರಿತು ಕೇರಳ ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

- Advertisement -
- Advertisement -

ತಿರುವನಂತಪುರಂ: ವಿದ್ಯಾರ್ಥಿನಿಯರಿಗೆ ನೀಡುವ ರಿಯಾಯಿತಿ ಕಾರ್ಡ್ಅನ್ನು ತನ್ನ ಮಗಳಿಗೂ ನೀಡುವಂತೆ ಒತ್ತಾಯಿಸಿದ ವ್ಯಕ್ತಿಯೊಬ್ಬರನ್ನು ಕೂಡಿಹಾಕಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನಾಲ್ವರು ನೌಕರರನ್ನು ಅಮಾನತುಗೊಳಿಸಲಾಗಿದೆ.

‘ಕಟ್ಟಕ್ಕಡ ಕೆಎಸ್‌ಆರ್‌ಟಿಸಿ ಡಿಪೋದ ಸ್ಟೇಷನ್‌ ಮಾಸ್ಟರ್‌ ಸೇರಿದಂತೆ ನಾಲ್ವರು ನೌಕರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ’ ಎಂದು ಸಾರಿಗೆ ಸಚಿವ ಆಂಟನಿ ರಾಜು ತಿಳಿಸಿದ್ದಾರೆ.

ಈ ಆಘಾತಕಾರಿ ಘಟನೆಯ ಕುರಿತು ಹೈಕೋರ್ಟ್ ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಬೆಳಿಗ್ಗೆ ಬಸ್ ಡಿಪೋದಲ್ಲಿ ಮಾತಿನ ಚಕಮಕಿ ನಡೆದಿದೆ. 55 ವರ್ಷ ವಯಸ್ಸಿನ ವ್ಯಕ್ತಿ ಹಾಗೂ ಕಾಲೇಜಿಗೆ ಹೋಗುತ್ತಿರುವ ಅವರ ಮಗಳನ್ನು ಸಾರ್ವಜನಿಕ ಸಾರಿಗೆ ಸಂಸ್ಥೆಯ ಸಿಬ್ಬಂದಿ ತಳ್ಳಿ ಹಲ್ಲೆ ನಡೆಸಿದ್ದಾರೆ.

ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿಯಲಾದ ದೃಶ್ಯವು ವೈರಲ್ ಆದ ನಂತರ ಈ ಘಟನೆಗೆ ಸಾರ್ವಜನಿಕರು ಪ್ರತಿಕ್ರಿಯಿಸತೊಡಗಿದರು. ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿದವು. ಸಾರಿಗೆ ಸಿಬ್ಬಂದಿ ವ್ಯಕ್ತಿಯನ್ನು ಕೋಣೆಗೆ ತಳ್ಳಿ, ಆತನ ಮೇಲೆ ಹಲ್ಲೆ ನಡೆಸುವುದು ಮತ್ತು ತಡೆಯಲು ಪ್ರಯತ್ನಿಸಿದ ಹುಡುಗಿಯನ್ನು ಥಳಿಸುವುದು ವಿಡಿಯೊದಲ್ಲಿ ವರದಿಯಾಗಿದೆ.

ನೌಕರರಿಂದಾದ ಹಲ್ಲೆಯನ್ನು ಬಾಲಕಿ ಪ್ರಶ್ನಿಸುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು. ಇನ್ನೊಬ್ಬ ವ್ಯಕ್ತಿ ಅವರನ್ನು ಹೊಡೆಯಬೇಡಿ ಎಂದು ಸಿಬ್ಬಂದಿಗೆ ಹೇಳುವುದನ್ನು ಕೇಳಬಹುದು. ಬಳಿಕ ಬಾಲಕಿಯ ತಂದೆ ಪ್ರೇಮನ್ ಅವರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

ತಿರುವನಂತಪುರಂ ಬಳಿಯ ಅಮಚಲ್ ಮೂಲದವರಾದ ಅವರು, ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ನೌಕರರೊಂದಿಗೆ ಮಾಡಿದ ಸಣ್ಣ ವಾಗ್ವಾದದ ಕಾರಣ ಹಲ್ಲೆಗೊಳಗಾದರು.

“ನನ್ನ ಮಗಳಿಗೆ ನೀಡಬೇಕಾಗಿದ್ದ ವಿದ್ಯಾರ್ಥಿನಿಯರ ರಿಯಾಯಿತಿ ಕಾರ್ಡ್ ನವೀಕರಿಸಲು ಡಿಪೋಗೆ ಹೋಗಿದ್ದೆವು. ಕೌಂಟರ್‌ನಲ್ಲಿದ್ದ ಸಿಬ್ಬಂದಿ ಕೋರ್ಸ್ ಪ್ರಮಾಣಪತ್ರವನ್ನು ತರುವಂತೆ ಹೇಳಿದರು. ಕಳೆದ ತಿಂಗಳು ಬಸ್ ಪಾಸ್ ನವೀಕರಣದ ಸಮಯದಲ್ಲಿ ಅದನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ನಾನು ಅವರಿಗೆ ಹೇಳಿದೆ. ಆದರೆ, ರಿಯಾಯಿತಿಯನ್ನು ನವೀಕರಿಸಲು ನೌಕರರು ಸಿದ್ಧರಿಲ್ಲದ ಕಾರಣ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ್ದಾರೆ” ಎಂದು ಸಂತ್ರಸ್ತ ವ್ಯಕ್ತಿ ತಿಳಿಸಿದ್ದಾರೆ.

ಘಟನೆಯು ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಸಚಿವ ಆಂಟನಿ ರಾಜು ಮಧ್ಯಪ್ರವೇಶಿಸಿದರು. ಕೆಎಸ್‌ಆರ್‌ಟಿಸಿ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಂದ ತುರ್ತು ವರದಿ ಕೇಳಿದರು. “ಇದೊಂದು ಪ್ರತ್ಯೇಕ ಘಟನೆಯಾಗಿದ್ದರೂ ಕೆಎಸ್‌ಆರ್‌ಟಿಸಿಗೆ ಕಳಂಕ ತಂದಿದೆ. ಈ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಆ್ಯಂಟನಿ ರಾಜು ಹೇಳಿದ್ದಾರೆ.

ಇದನ್ನೂ ಓದಿರಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ಬಳಿಕ ಸಂಜೆ ವೇಳೆಗೆ ಪ್ರಾಥಮಿಕ ತನಿಖಾ ವರದಿ ಆಧರಿಸಿ ನಾಲ್ವರು ನೌಕರರನ್ನು ವಿಚಾರಣೆಗೆ ಬಾಕಿ ಉಳಿಸಿ ಅಮಾನತು ಮಾಡಿದ್ದಾರೆ. 45 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ (ಸಿಎಂಡಿ) ಅವರು ಆದೇಶಿಸಿದ್ದಾರೆ.

ಇದರ ನಡುವೆ ಕೇರಳ ಹೈಕೋರ್ಟ್‌ ವರದಿ ಕೇಳಿದೆ. ಕೆಎಸ್‌ಆರ್‌ಟಿಸಿಯನ್ನು ಪ್ರತಿನಿಧಿಸುವ ವಕೀಲ ದೀಪು ತಂಕನ್ ಮಾಹಿತಿ ನೀಡಿದ್ದು, “ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರು ಘಟನೆಯ ಕುರಿತು ವರದಿಯನ್ನು ಕೇಳಿದ್ದಾರೆ. ಮಾಧ್ಯಮ ವರದಿಗಳ ಆಧಾರದ ಮೇಲೆ ಘಟನೆಯ ಬಗ್ಗೆ ಹೈಕೋರ್ಟ್ ತನ್ನದೇ ಆದ ಪ್ರಕರಣವನ್ನು ದಾಖಲಿಸಿದೆ” ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐವರು ಕೆಎಸ್‌ಆರ್‌ಟಿಸಿ ನೌಕರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 143, 149, 323 ಸೇರಿದಂತೆ ವಿವಿಧ ಸೆಕ್ಷನ್‌ಗಳನ್ನು ಹಾಕಲಾಗಿದೆ ಎಂದು ಕಟ್ಟಕ್ಕಡ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...