Homeಮುಖಪುಟಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಕೇರಳ: ಮೊದಲ ಬಾರಿ ಚುನಾವಣಾ ಕಣದಲ್ಲಿ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಸ್ಫರ್ಧಿಸಲಿದ್ದಾರೆ. 28 ವರ್ಷದ ಅನನ್ಯಾ ಕುಮಾರಿ ಅಲೆಕ್ಸ್ ಅವರು ಕೇರಳದ ವೆಂಗಾರಾ ಕ್ಷೇತ್ರದಿಂದ ಸ್ಫರ್ಧಿಸಲಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಲ್ಲಾಪುರಂನ ವೆಂಗಾರಾ ಕ್ಷೇತ್ರದಲ್ಲಿ ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿ (DSJP)ಯಿಂದ ಸ್ಫರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಭಾವಿಯಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಮತ್ತು ಎಲ್‌ಡಿಎಫ್ ಅಭ್ಯರ್ಥಿ ಪಿ.ಜಿಜಿ ವಿರುದ್ಧ ಅವರು ಕಣಕ್ಕಿಳಿದಿದ್ದಾರೆ.

ಅನನ್ಯಾ ಕುಮಾರಿ ಅಲೆಕ್ಸ್, ಕೇರಲದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರಂತೆ ಸಮನಾಗಿ ಟ್ರಾನ್ಸ್‌ಜೆಂಡರ್‌ಗಳು ಸಹ ಉತ್ತಮ ನಾಯಕರಾಗಬಹು ಎಂಬುದನ್ನು ಸಾಬೀತುಪಡಿಸಲು ಬಯಸುತ್ತೇನೆ ಎಂದು ಅನನ್ಯಾ ಕುಮಾರಿ ಹೇಳಿದ್ದಾರೆ.

“ನಾವು ಯಾವುದೇ ಗಂಡು ಅಥವಾ ಹೆಣ್ಣಿನಂತೆಯೇ ಸಾಮರ್ಥ್ಯಗಳನ್ನು ಹೊಂದಿದ್ದೇವೆ. ನಮಗೆ ಯಾವುದೇ ಸಹಾನುಭೂತಿ ಬೇಡ. ಇತರರಂತೆ ನಮಗೂ ಸಮಾನವಾಗಿ ಪರಿಗಣಿಸಿದರೆ ಸಾಕು. ತೃತೀಯಲಿಂಗಿ ಸಮುದಾಯದವರು ಸಹ ಇತರರಂತೆ ಪ್ರತಿಭಾವಂತರು ಮತ್ತು ಯಾವುದೇ ಕ್ಷೇತ್ರದಲ್ಲಿ ತಮ್ಮನ್ನು ಪ್ರತಿನಿಧಿಸಬಹುದು” ಎಂದು ಅನನ್ಯಾ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅನನ್ಯಾ ಅವರ ನಿರ್ಧಾರವನ್ನು ಅವರ ಪ್ರತಿಸ್ಫರ್ಧಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಸ್ವಾಗತಿಸಿದ್ದಾರೆ. ತೃತೀಯಲಿಂಗಿಗಳು ಸಹ ಸಮಾಜದ ಭಾಗವಾಗಿದ್ದಾರೆ ಮತ್ತು ಚುನಾವಣೆಯಲ್ಲಿ ಹೋರಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ಚುನಾವಣಾ ಪ್ರಚಾರ ಮಾಡುವಾಗ ಯಾವುದೇ ತಾರತಮ್ಯವನ್ನು ಎದುರಿಸದ ಕಾರಣ ಚುನಾವಣೆಯಲ್ಲಿ ಮಾತ್ರವಲ್ಲದೆ ಜನರ ಹೃದಯವನ್ನೂ ಗೆಲ್ಲುವ ಭರವಸೆ ಇದೆ ಎಂದು ಅನನ್ಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆದರೂ, ತೃತೀಯಲಿಂಗಿ ಸಮುದಾಯದವರು ತಮ್ಮ ಮನೆಗಳಲ್ಲಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಚುನಾವಣೆಯಲ್ಲಿ ತಾನು ಗೆದ್ದರೆ, ಇವರುಗಳು ತಮ್ಮ ಮನೆಗಳಲ್ಲಿ ಮತ್ತು ಸಮಾಜದಲ್ಲಿ ಸುರಕ್ಷತವಾಗಿರಲು ಕೆಲಸ ಮಾಡುತ್ತೇನೆ ಎಂದಿದ್ದಾರೆ.

ನೆರೆಯ ರಾಜ್ಯ ತಮಿಳುನಾಡಿನಲ್ಲಿ, ಮಧುರೈ ದಕ್ಷಿಣ ಕ್ಷೇತ್ರದಿಂದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾರತಿ ಕನ್ನಮ್ಮ ಎಂಬ ತೃತೀಯಲಿಂಗಿ ಸ್ಪರ್ಧಿಸುತ್ತಿದ್ದು, ಮಧುರೈಯನ್ನು ಮಾದರಿ ನಗರವನ್ನಾಗಿ ಮಾಡುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...