Homeಮುಖಪುಟಕೇರಳ: ಚುನಾವಣೆಯಿಂದ ಹಿಂದೆ ಸರಿದ ಮೊದಲ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ ಕುಮಾರಿ

ಕೇರಳ: ಚುನಾವಣೆಯಿಂದ ಹಿಂದೆ ಸರಿದ ಮೊದಲ ತೃತೀಯಲಿಂಗಿ ಅಭ್ಯರ್ಥಿ ಅನನ್ಯಾ ಕುಮಾರಿ

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದ ಮೊದಲ ತೃತೀಯಲಿಂಗಿ ಅಭ್ಯರ್ಥಿ 28 ವರ್ಷದ ಅನನ್ಯಾ ಕುಮಾರಿ ಅಲೆಕ್ಸ್, ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಈ ಮೊದಲು ಅವರು ಡೆಮಾಕ್ರಟಿಕ್ ಸೋಶಿಯಲ್ ಜಸ್ಟೀಸ್ ಪಾರ್ಟಿಯಿಂದ ಸ್ಪರ್ಧಿಗಿಳಿಯುವುದಾಗಿ ಘೋಷಿಸಿದ್ದರು.

ಅನನ್ಯಾ ಕುಮಾರಿ ಅಲೆಕ್ಸ್ ಸ್ಫರ್ಧಿಸಲು ಬಯಸಿದ್ದ ಡೆಮಾಕ್ರಟಿಕ್ ಸೋಶಿಯಲ್ ಜಸ್ಟೀಸ್ ಪಾರ್ಟಿಯವರಲ್ಲೇ ಕೆಲವರು ಲಿಂಗ ತಾರತಮ್ಯ ಮಾಡುತ್ತಿದ್ದಾರೆ. ತೀವ್ರ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ, ಹೀಗಾಗಿ ಚುನಾವಣೆಯಿಂದ ದೂರ ಇರುವುದಾಗಿ ಅನನ್ಯಾ ತಿಳಿಸಿದ್ದಾರೆ.

ಮಲ್ಲಾಪುರಂನ ವೆಂಗಾರಾ ಕ್ಷೇತ್ರದಲ್ಲಿ ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿ (DSJP)ಯಿಂದ ಸ್ಪರ್ಧಿಸಲು ನಿರ್ಧರಿಸಿದ್ದರು. ಈ ಕ್ಷೇತ್ರದಲ್ಲಿ ಪ್ರಭಾವಿಯಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಮತ್ತು ಎಲ್‌ಡಿಎಫ್ ಅಭ್ಯರ್ಥಿ ಪಿ.ಜಿಜಿ ಕಣಕ್ಕಿಳಿದಿದ್ದಾರೆ.

‌ಇದನ್ನೂ ಓದಿ: ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ತನಗೆ ಕಿರುಕುಳ ನೀಡಿದ ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿ ಮತ್ತು ನಾಯಕರ ವಿರುದ್ಧ ತಾನು ಪೊಲೀಸ್ ದೂರು ದಾಖಲಿಸಿದ್ದೇನೆ ಎಂದು ಅನನ್ಯಾ ಇತ್ತೀಚಿನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಚುನಾವಣಾ ಪ್ರಚಾರ ಕಾರ್ಯ ಕೂಡ ನಿಲ್ಲಿಸಿದ್ದಾರೆ.

ಅನನ್ಯಾ ತಮ್ಮ ಹೇಳಿಕೆಯಲ್ಲಿ, “ನಾನು ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಾರ್ಟಿದಲ್ಲಿ ತಾರತಮ್ಯ ಮತ್ತು ಲೈಂಗಿಕ ಕಿರುಕುಳವನ್ನು ಎದುರಿಸುತ್ತಿರುವ ಕಾರಣ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಅವರು ಪ್ರಚಾರಕ್ಕಾಗಿ ನನ್ನನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಯುಡಿಎಫ್ ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ಬಗ್ಗೆ ತಪ್ಪಾಗಿ ಮಾತನಾಡಲು ಮತ್ತು ಎಲ್‌ಡಿಎಫ್ ಸರ್ಕಾರವನ್ನು ಟೀಕಿಸಲು ಡಿಎಸ್‌ಜೆಪಿ ನಾಯಕರು ನನ್ನನ್ನು ಒತ್ತಾಯಿಸುತ್ತಿದ್ದಾರೆ. ಇದರ ಜೊತೆಗೆ, ಚುನಾವಣಾ ಪ್ರಚಾರದ ಸಮಯದಲ್ಲಿ ಬುರ್ಖಾ ಧರಿಸಲು ನನ್ನನ್ನು ಒತ್ತಾಯಿಸಿದರು, ಅದನ್ನು ನಾನು ನಿರಾಕರಿಸಿದ್ದೇನೆ” ಎಂದಿದ್ದಾರೆ.

ಅನನ್ಯಾ ಕುಮಾರಿ ಅಲೆಕ್ಸ್, ಕೇರಳದ ಮೊದಲ ತೃತೀಯಲಿಂಗಿ ರೇಡಿಯೋ ಜಾಕಿ ಮತ್ತು ಸುದ್ದಿ ನಿರೂಪಕರಾಗುವ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.


ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...