Homeರಾಷ್ಟ್ರೀಯಕೇರಳ: ಬಾಲಕಿಯರ ಒಳವಸ್ತ್ರ ತೆಗೆಸಿದ ನೀಟ್‌ ಕೇಂದ್ರದ ಮೂವರು ಸೇರಿದಂತೆ ಐವರ ಬಂಧನ

ಕೇರಳ: ಬಾಲಕಿಯರ ಒಳವಸ್ತ್ರ ತೆಗೆಸಿದ ನೀಟ್‌ ಕೇಂದ್ರದ ಮೂವರು ಸೇರಿದಂತೆ ಐವರ ಬಂಧನ

- Advertisement -
- Advertisement -

ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರನ್ನು ಬ್ರಾ ತೆಗೆಯುವಂತೆ ಕೇಳಿದ ಮೂವರು ಸೇರಿದಂತೆ ಒಟ್ಟು ಐವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಕೇರಳ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ. ಪರೀಕ್ಷೆಗೂ ಮುನ್ನ ಅವಮಾನಕರವಾಗಿ ತಪಾಸಣೆಗೆ ಒಳಗಾದ ಮೂವರು ವಿದ್ಯಾರ್ಥಿನಿಯರು ಪೊಲೀಸರಿಗೆ ಮೂರು ನೀಡಿದ್ದಾರೆ.

ಈ ಬಗ್ಗೆ ಮೊದಲು ದೂರು ನೀಡಿದ್ದ ವಿದ್ಯಾರ್ಥಿನಿಯ ಆರೋಪಗಳನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಿರಾಕರಿಸಿದೆ. ದೂರನ್ನು ‘ಕಾಲ್ಪನಿಕ ಮತ್ತು ತಪ್ಪು ಉದ್ದೇಶದಿಂದ ದಾಖಲಿಸಲಾಗಿದೆ’ ಎಂದು ಕೊಲ್ಲಂನಲ್ಲಿರುವ ನೀಟ್ ಪರೀಕ್ಷಾ ಕೇಂದ್ರದ ಅಧೀಕ್ಷಕರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರದಂದು 17 ವರ್ಷದ ಬಾಲಕಿಯ ತಂದೆಯೊಬ್ಬರು ಮಾಧ್ಯಮಗಳ ಮುಂದೆ ಬಂದು ಈ ಬಗ್ಗೆ ಹೇಳಿಕೆ ನೀಡಿದಾಗ ವಿವಾದವು ಬೆಳಕಿಗೆ ಬಂದಿತ್ತು. ಅವರು, “ನನ್ನ ಮಗಳು ಮೊದಲ ಬಾರಿಗೆ ನೀಟ್ ಪರೀಕ್ಷೆಯನ್ನು ಬರೆದಿದ್ದಾರೆ. ಅವರು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ಒಳವಸ್ತ್ರಗಳನ್ನು ತೆಗೆಯುವಂತೆ ಕೇಳಲಾಯಿತು. ಪರೀಕ್ಷೆಯ ಮೂರು ಗಂಟೆಗಳ ಕಾಲ ಒಳ ಉಡುಪು ಧರಿಸದೇ ಕುಳಿತಿದ್ದರು. ಪರೀಕ್ಷೆಗೆ ಕುಳಿತ ‘ಆಘಾತಕಾರಿ ಅನುಭವ’ದಿಂದ ಇನ್ನೂ ಚೇತರಿಸಿಕೊಂಡಿಲ್ಲ” ಎಂದು ಹೇಳಿದ್ದಾರೆ.

ಪರೀಕ್ಷಾ ಕೇಂದ್ರವಾದ ಮಾರ್ ಥೋಮಾ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿಯಲ್ಲಿ ಭದ್ರತಾ ತಪಾಸಣೆ ನಡೆಸುತ್ತಿದ್ದಾಗ ಒಳವಸ್ತ್ರಕ್ಕೆ ಲೋಹಗಳ ಕೊಕ್ಕೆಗಳು ಇದ್ದುದರಿಂದ ಬಾಲಕಿಯ ಬ್ರಾ ತೆಗೆಯುವಂತೆ ಹೇಳಲಾಗಿತ್ತು ಎಂದು ತಂದೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳ-ನೀಟ್ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಒಳವಸ್ತ್ರ ತೆಗೆಯುವಂತೆ ಒತ್ತಾಯ; ಪ್ರಕರಣ ದಾಖಲು

“ಒಳಉಡುಪು ನಿಮ್ಮ ಭವಿಷ್ಯಕ್ಕಿಂತ ದೊಡ್ಡದೆ? ಅದನ್ನು ತೆಗೆದುಹಾಕಿ, ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. 90% ವಿದ್ಯಾರ್ಥಿನಿಯರು ತಮ್ಮ ಒಳ ವಸ್ತ್ರಗಳನ್ನು ತೆಗೆದು ಸ್ಟೋರ್ ರೂಂನಲ್ಲಿ ಇಡಬೇಕಾಯಿತು” ಎಂದು ಭದ್ರತಾ ಸಿಬ್ಬಂದಿ ಹೇಳಿದ್ದಾರೆ ಎಂದು ಬಾಲಕಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಪರೀಕ್ಷಾ ಕೇಂದ್ರವು ಬಾಲಕಿಯ ತಂದೆಯ ಆರೋಪವನ್ನು ನಿರಾಕರಿಸಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ, “NEET ಡ್ರೆಸ್ ಕೋಡ್ ಅಭ್ಯರ್ಥಿಯ ಪೋಷಕರು ಆಪಾದಿಸುವ ಯಾವುದೇ ಚಟುವಟಿಕೆಯನ್ನು ಅನುಮತಿಸುವುದಿಲ್ಲ” ಎಂದು ಇಂದು ಹೇಳಿದೆ.

ಘಟನೆಯ ಕುರಿತು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಹುಡುಗಿಯರನ್ನು ಅವರ ಬ್ರಾ ತೆಗೆಯುವಂತೆ ಒತ್ತಾಯಿಸಿದ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ನೀಟ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರ ಘನತೆ ಮತ್ತು ಗೌರವದ ಮೇಲೆ ದಾಳಿ ನಡೆಸಿದ್ದಕ್ಕೆ ಅವರು ನಿರಾಶೆ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಲವಂತವಾಗಿ 68 ಹುಡುಗಿಯರ ಒಳವಸ್ತ್ರ ತೆಗೆಸಿ ಅವಮಾನ ಮಾಡಿದ ಪ್ರಾಂಶುಪಾಲೆ: ಗುಜರಾತಿನ ಕಾಲೇಜಿನಲ್ಲೊಂದು ಆಘಾತಕಾರಿ ಘಟನೆ

“ಈ ಅನಿರೀಕ್ಷಿತ ಘಟನೆಯ ಅವಮಾನ ಮತ್ತು ಆಘಾತವು ವಿದ್ಯಾರ್ಥಿಗಳ ನೈತಿಕತೆ ಮತ್ತು ಸ್ಥೈರ್ಯದ ಮೇಲೆ ಪರಿಣಾಮ ಬೀರಿದೆ. ಅದರ ಪರಿಣಾಮವಾಗಿ ಪರೀಕ್ಷೆಯಲ್ಲಿನ ಕಾರ್ಯಕ್ಷಮತೆಯು ಪರಿಣಾಮ ಬೀರುತ್ತದೆ. ದುಷ್ಕೃತ್ಯ ಎಸಗಿದವರ ವಿರುದ್ದ ತೀವ್ರ ಕ್ರಮ ಜರುಗಿಸಿ” ಎಂದು ಸಚಿವೆ ಪತ್ರದಲ್ಲಿ ಹೇಳಿದ್ದಾರೆ.

ಭದ್ರತಾ ತಪಾಸಣೆ ನಡೆಸಿ ಒಳ ಉಡುಪನ್ನು ತೆಗೆಯುವಂತೆ ಹೇಳಿದವರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...