Homeಮುಖಪುಟಸರಕಾರ ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲರು: ಸುಪ್ರೀಂ ಕದ ತಟ್ಟಿದ ಕೇರಳ ಸರಕಾರ

ಸರಕಾರ ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲರು: ಸುಪ್ರೀಂ ಕದ ತಟ್ಟಿದ ಕೇರಳ ಸರಕಾರ

- Advertisement -
- Advertisement -

ರಾಜ್ಯ ಸರಕಾರವು ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಕೇರಳ ಸರ್ಕಾರ ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ.

ಎಂಟು ಮಸೂದೆಗಳ ಪೈಕಿ ಮೂರು ವಿಧೇಯಕಗಳು ಎರಡು ವರ್ಷಗಳಿಂದ ರಾಜ್ಯಪಾಲರ ಮುಂದೆ ಬಾಕಿ ಉಳಿದಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿಯಲ್ಲಿ ರಾಜ್ಯಪಾಲರ ನಡವಳಿಕೆಯು ಕಾನೂನು ಮತ್ತು ಪ್ರಜಾಪ್ರಭುತ್ವಕ್ಕೆ ಮತ್ತು ನಮ್ಮ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ. ಈ ನಡವಳಿಕೆಯು ಜನರ ಹಕ್ಕುಗಳ ಉಲ್ಲಂಘನೆಯಾಗಿದೆ. ಮಸೂದೆಗಳ ಮೂಲಕ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿರುವ ಕಲ್ಯಾಣ ಕ್ರಮಗಳಿಗೆ ಇದು ಅಡ್ಡಿಯಾಗುತ್ತದೆ ಎಂದು ಉಲ್ಲೇಖಿಸಲಾಗಿದೆ.

ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಅನುಮೋದನೆಗಾಗಿ ಎಂಟು ಬಾಕಿ ಇರುವ ಮಸೂದೆಗಳಲ್ಲಿ ಎರಡು 2021ರ ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆಗಳು (1 ನೇ ತಿದ್ದುಪಡಿ) ಮತ್ತು ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆ (2 ನೇ ತಿದ್ದುಪಡಿ) ಇದೆ. ಇದಲ್ಲದೆ ಕೇರಳ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ 2022, 2022ರ ವಿಶ್ವವಿದ್ಯಾನಿಲಯ ಕಾನೂನುಗಳ ತಿದ್ದುಪಡಿ ಮಸೂದೆ, 2022ರ ಕೇರಳ ಲೋಕಾಯುಕ್ತ ತಿದ್ದುಪಡಿ ಮಸೂದೆ, 2022ರ ವಿಶ್ವವಿದ್ಯಾನಿಲಯ ಕಾನೂನುಗಳ ತಿದ್ದುಪಡಿ ಮಸೂದೆ ಮತ್ತು 2021ರ ಸಾರ್ವಜನಿಕ ಆರೋಗ್ಯ ಮಸೂದೆ ಸೇರಿದೆ.

ಕೇರಳ, ರಾಜ್ಯಪಾಲರು ಮಸೂದೆಗಳಿಗೆ ಒಪ್ಪಿಗೆ ನೀಡಲು ನಿರಾಕರಿಸಿರುವುದರ ವಿರುದ್ಧ ನ್ಯಾಯಾಲಯದ ಮೊರೆ ಹೋದ ಮೂರನೇ ರಾಜ್ಯವಾಗಿದೆ. ಈ ಮೊದಲು ಪಂಜಾಬ್ ಮತ್ತು ತೆಲಂಗಾಣ ರಾಜ್ಯಗಳು ರಾಜ್ಯಪಾಲರ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.

ಈ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲ ಆರಿಫ್ ಖಾನ್ ನಿರಾಕರಿಸಿದ್ದರಿಂದ ಸುಪ್ರೀಂಕೋರ್ಟ್‌ ಮೊರೆ ಹೋಗುವ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಇದೀಗ ಕೇರಳ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಮಯಕ್ಕೆ ಸರಿಯಾಗಿ ಅನುಮೋದನೆ ನೀಡುವಂತೆ ರಾಜ್ಯಪಾಲ ಆರಿಫ್‌ ಮುಹಮ್ಮದ್‌ ಖಾನ್‌ ಅವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ ಕದ ತಟ್ಟಿದೆ.

ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಮಯ ಮಿತಿಯೊಳಗೆ ಅಂಕಿತ ನೀಡುವುದು ರಾಜ್ಯಪಾಲರ ಕರ್ತವ್ಯ, ಪ್ರಜಾಸತ್ತಾತ್ಮಕ ಪ್ರಕ್ರಿಯೆ ಮತ್ತು ಜನರ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿ ಅವರು ಅಂಕಿತ ನೀಡಬೇಕಿದ್ದರೂ ರಾಜ್ಯಪಾಲರು ತಮ್ಮ ಸಂವಿಧಾನಿಕ ಹಕ್ಕುಗಳನ್ನು ಚಲಾಯಿಸಲು ಮತ್ತು ಕರ್ತವ್ಯಗಳನ್ನು ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಕೇರಳ ಸರ್ಕಾರ ತನ್ನ ಅರ್ಜಿಯಲ್ಲಿ ತಿಳಿಸಿದೆ.

ಇದನ್ನು ಓದಿ: ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...