Homeಮುಖಪುಟಕೇಂದ್ರದ ಕೃಷಿ ಕಾನೂನಿನ ವಿರುದ್ದ ವಿಶೇಷ ಅಧಿವೇಶನ ಕರೆಯಲಿರುವ ಕೇರಳ!

ಕೇಂದ್ರದ ಕೃಷಿ ಕಾನೂನಿನ ವಿರುದ್ದ ವಿಶೇಷ ಅಧಿವೇಶನ ಕರೆಯಲಿರುವ ಕೇರಳ!

ಇತ್ತೀಚೆಗಷ್ಟೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತರೂಢ ಎಡಪಕ್ಷಗಳ ಒಕ್ಕೂಟ ವಿಜಯ ಗಳಿಸಿದ ಹಿನ್ನಲೆಯಲ್ಲಿ, ಕೇಂದ್ರದ ವಿರುದ್ದ ಇನ್ನೂ ಹೆಚ್ಚು ಧ್ವನಿ ಎತ್ತಲು ಕೇರಳ ಸರ್ಕಾರ ನಿರ್ಧರಿಸಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನಿನ ವಿರುದ್ದ ನಿರ್ಣಯ ಅಂಗೀಕರಿಸಲು ಕೇರಳ ಸರ್ಕಾರ ಬುಧವಾರ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಲು ನಿರ್ಧರಿಸಿದೆ. ಸರ್ಕಾರವು ಅಧಿವೇಶನ ಕರೆಯಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸಂಪರ್ಕಿಸಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಕೂಡಾ ಬೆಂಬಲಿಸಲಿವೆ ಎನ್ನಲಾಗಿದೆ. 140 ವಿಧಾನಸಭಾ ಸದಸ್ಯರಿರುವ ಕೇರಳ ವಿಧಾನಸಭೆಯಲ್ಲಿ ಬಿಜೆಪಿಯು ಕೇವಲ ಒಬ್ಬ ಶಾಸಕನನ್ನಷ್ಟೇ ಹೊಂದಿದೆ.

ಇದನ್ನೂ ಓದಿ: ಮೋದಿ ಮನ್ ಕಿ ಬಾತ್ ಸಮಯದಲ್ಲಿ ತಟ್ಟೆ ಬಾರಿಸಿ: ಹೋರಾಟನಿರತ ರೈತರ ಕರೆ

ಈ ಹಿಂದೆ ದೆಹಲಿ ವಿಧಾನಸಭೆ ಕೂಡಾ ಎಲ್ಲಾ ಮೂರು ಕೃಷಿ ಕಾನೂನುಗಳನ್ನು ತಿರಸ್ಕರಿಸಿತ್ತು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಸೂದೆಗಳ ಪ್ರತಿಗಳನ್ನು ಸದನದಲ್ಲೇ ಹರಿದು ಹಾಕಿದ್ದರು. ಕೇರಳ ವಿಧಾನಸಭೆಯ ವಿಶೇಷ ಅಧಿವೇಶನವು ಒಂದು ಗಂಟೆಗಳ ಕಾಲ ನಡೆಯಲಿದ್ದು, ಮಸೂದೆಗಳನ್ನು ಮತದಾನಕ್ಕೆ ತಂದು ನಿರ್ಣಯ ಅಂಗೀಕರಿಸಲಾಗುತ್ತದೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಡಳಿತರೂಢ ಎಡಪಕ್ಷಗಳ ಒಕ್ಕೂಟ ವಿಜಯ ಗಳಿಸಿದ ಹಿನ್ನಲೆಯಲ್ಲಿ, ಕೇಂದ್ರದ ವಿರುದ್ದ ಇನ್ನೂ ಹೆಚ್ಚು ಧ್ವನಿ ಎತ್ತಲು ಕೇರಳ ಸರ್ಕಾರ ನಿರ್ಧರಿಸಿದೆ.

ಆದರೆ ಬಿಜಪಿ ಕೇರಳ ಸರ್ಕಾರದ ಕ್ರಮವನ್ನು ರಾಜಕೀಯ ಪ್ರೇರಿತ ನಿರ್ಧಾರ ಎಂದು ಟೀಕಿಸಿದ್ದು, ರಾಜ್ಯದ ವಿದೇಶಾಂಗ ವ್ಯವಹಾರಗಳ ಸಚಿವ ವಿ. ಮುರುಲೀಧರನ್, “ಇದು ರಾಜಕೀಯ ಸಾಹಸಕ್ಕಿಂತ ಹೆಚ್ಚೇನೂ ಅಲ್ಲ. ಇದು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದಷ್ಟು ನಿರರ್ಥಕವಾಗಿದೆ. ಸಿಪಿಐ(ಎಂ) ಮತ್ತು ಕಾಂಗ್ರೆಸ್ ಎರಡೂ ಅಗ್ಗದ ರಾಜಕೀಯ ಸಾಹಸಗಳಿಗಾಗಿ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡುತ್ತಿವೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...