Homeಮುಖಪುಟ'ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ' ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

- Advertisement -
- Advertisement -

ಆಗಸ್ಟ್ 14ರಂದು ‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಿಸಲು ಎಲ್ಲಾ ವಿಶ್ವ ವಿದ್ಯಾಲಯಗಳ ಉಪ ಕುಲಪತಿಗಳಿಗೆ ನಿರ್ದೇಶಿಸುವ ಮೂಲಕ ಕೇರಳದ ರಾಜ್ಯಪಾಲ ಹಾಗೂ ವಿಶ್ವ ವಿದ್ಯಾಲಯಗಳ ಕುಲಪತಿ ರಾಜೇಂದ್ರ ಅರ್ಲೇಕರ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಅವರು, ಇಂತಹ ಸೂಚನೆ ನೀಡುವ ರಾಜ್ಯಪಾಲರ ಅಧಿಕಾರವನ್ನು ಪ್ರಶ್ನಿಸಿದ್ದಾರೆ.

ರಾಜಭವನದಿಂದ ವಿಶ್ವವಿದ್ಯಾಲಯಗಳಿಗೆ ನೀಡಲಾಗಿರುವ ಸುತ್ತೋಲೆಯಲ್ಲಿ, ಕ್ಯಾಂಪಸ್‌ಗಳಲ್ಲಿ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ಸೆಮಿನಾರ್, ನಾಟಕಗಳನ್ನು ಆಯೋಜಿಸುವಂತೆ ಮತ್ತು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ಸೂಚಿಸಲಾಗಿದೆ

ರಾಜಭವನದ ಸುತ್ತೋಲೆಯು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ನಿರ್ದೇಶಿಸಿದೆ.

ಇಂತಹ ಆಚರಣೆಯ ಚರ್ಚೆಯನ್ನು 2021ರಲ್ಲಿ ಮೊದಲು ಹುಟ್ಟು ಹಾಕಿದ್ದು ಪ್ರಧಾನಿ ನರೇಂದ್ರ ಮೋದಿ, ಆ ಬಳಿಕ ಕೇಂದ್ರ ಸರ್ಕಾರ ಈ ದಿನವನ್ನು ಆಚರಿಸಿಕೊಂಡು ಬರುತ್ತಿದೆ.

ರಾಜ್ಯಪಾಲರ ನಿರ್ದೇಶನದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಸಂಘ ಪರಿವಾರದ ವಿಭಜನಕಾರಿ ರಾಜಕೀಯ ಕಾರ್ಯಸೂಚಿಗಳಿಗೆ ಹೊಂದಿಕೆಯಾಗುವಂತೆ ರಾಜಭವನದಿಂದ ಬರುತ್ತಿರುವ ಆದೇಶಗಳು ಸಂವಿಧಾನಬಾಹಿರ” ಎಂದು ಹೇಳಿದ್ದಾರೆ.

ರಾಜ್ಯಪಾಲರು ಉಪಕುಲಪತಿಗಳಿಗೆ ಹೊರಡಿಸಿರುವ ಸುತ್ತೋಲೆ ಆಕ್ಷೇಪಾರ್ಹ. ನಮ್ಮ ವಿಶ್ವವಿದ್ಯಾಲಯಗಳು ಅಂತಹ ಕಾರ್ಯಸೂಚಿಯನ್ನು ಜಾರಿಗೆ ತರುವ ವೇದಿಕೆಗಳಾಗಲು ನಾವು ಅನುಮತಿಸುವುದಿಲ್ಲ” ಎಂದಿದ್ದಾರೆ.

“ರಾಜ್ಯ ಸರ್ಕಾರವನ್ನು ಬದಿಗಿಟ್ಟು ‘ವಿಭಜನಾ ಭಯಾನಕ ದಿನ’ವನ್ನು ಆಚರಿಸಲು ಉಪಕುಲಪತಿಗಳಿಗೆ ಸೂಚಿಸಲು ರಾಜ್ಯಪಾಲರಿಗೆ ಯಾವ ಅಧಿಕಾರವಿದೆ? ರಾಜ್ಯ ಸರ್ಕಾರಕ್ಕೆ ಸಮಾನಾಂತರವಾಗಿ ರಾಜ್ಯಪಾಲರು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಮತ್ತು ಕಾರ್ಯನಿರ್ವಹಿಸುವುದು ಅಸಂವಿಧಾನಿಕವಾಗಿದೆ” ಎಂದು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ಆದೇಶಗಳನ್ನು ನೀಡುವ ಮೂಲಕ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಮೂಲಭೂತವಾಗಿ ತಮ್ಮನ್ನು ಆರೆಸ್ಸೆಸ್‌ನ ವಿಭಜಕ ರಾಜಕೀಯದ ವಕ್ತಾರರೆಂದು ಘೋಷಿಸಿಕೊಂಡಿದ್ದಾರೆ ಎಂದು ಸತೀಶನ್ ಹೇಳಿದ್ದಾರೆ.

ಜನರಿಂದ ಆಯ್ಕೆಯಾದ ಸಚಿವ ಸಂಪುಟದ ಅನುಮೋದನೆಯಿಲ್ಲದೆ ರಾಜ್ಯಪಾಲರು ಸಮಾನಾಂತರ ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವಂತೆ ವರ್ತಿಸುತ್ತಿದ್ದಾರೆ ಎಂದು ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ.

“ಅವರು ಯಾವ ಅಧಿಕಾರದ ಅಡಿಯಲ್ಲಿ ಅಂತಹ ಸೂಚನೆ ನೀಡಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಅವರಿಗೆ ಅಂತಹ ಅಧಿಕಾರವಿಲ್ಲ. ರಾಜ್ಯಪಾಲರ ಅಧಿಕಾರಗಳು ಸೀಮಿತವಾಗಿವೆ. ನ್ಯಾಯಾಲಯಗಳು ಈಗಾಗಲೇ ಸ್ಪಷ್ಟಪಡಿಸಿದಂತೆ ಇದು ದೈನಂದಿನ ಆಡಳಿತಕ್ಕೆ ಸಂಬಂಧಿಸಿದ ವಿಷಯವಲ್ಲ” ಎಂದು ಶಿವನ್‌ಕುಟ್ಟಿ ಕಿಡಿಕಾರಿದ್ದಾರೆ.

ಭಾರತದ ಸ್ವಾತಂತ್ರ್ಯ ದಿನವು ಸಾಮ್ರಾಜ್ಯಶಾಹಿ ವಿರೋಧಿ ಹೋರಾಟ ಮತ್ತು ಬ್ರಿಟಿಷರು ನಡೆಸಿದ ಕ್ರೌರ್ಯಗಳನ್ನು ನೆನಪಿಸುತ್ತದೆ ಎಂದು ಎಂದಿರುವ ಸಿಎಂ, ಪಿಣರಾಯಿ ವಿಜಯನ್, “ನಾವು ಸ್ವಾತಂತ್ರ್ಯದ 78ನೇ ವರ್ಷವನ್ನು ಆಚರಿಸುತ್ತಿರುವಾಗ, ಆಗಸ್ಟ್ 15ರ ಹೊರತಾಗಿ ಮತ್ತೊಂದು ದಿನವನ್ನು ಆಚರಿಸುವ ಕಲ್ಪನೆಯು ಸಂಘ ಪರಿವಾರದ ಮನಸ್ಸಿನಿಂದ ಹುಟ್ಟಿಕೊಂಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸದೆ ಬ್ರಿಟಿಷ್ ರಾಜ್‌ಗೆ ಸೇವೆ ಸಲ್ಲಿಸಿದವರು ಸ್ವಾತಂತ್ರ್ಯ ದಿನವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ವಿದೇಶಿ ಶಕ್ತಿಗಳಿಗಿಂತ ಆಂತರಿಕ ಶತ್ರುಗಳ ವಿರುದ್ಧ ಹೋರಾಡಲು ಶಕ್ತಿಯನ್ನು ವ್ಯಯಿಸಿದವರು, ಈಗ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ದಿನವನ್ನು ಆಚರಿಸಲು ಮುಂದಾಗಿದ್ದಾರೆ. ಇದರಿಂದಾಗಿ ಸ್ವಾತಂತ್ರ್ಯ ದಿನದ ಮಹತ್ವ ಕಡಿಮೆಯಾಗುತ್ತದೆ” ಎಂದು ಹೇಳಿದ್ದಾರೆ.

ಬ್ರಿಟಿಷ್ ವೈಸ್ರಾಯ್ ಅವರನ್ನು ಭೇಟಿಯಾಗಿ ತಾವು ಬ್ರಿಟಿಷ್ ರಾಜ್ ವಿರುದ್ಧ ಇಲ್ಲ ಎಂದು ಬೆಂಬಲ ವ್ಯಕ್ತಪಡಿಸಿದವರಂತೆಯೇ ಸಂಘ ಪರಿವಾರವೂ ಕಾರ್ಯನಿರ್ವಹಿಸುತ್ತಿದೆ. ಭಾರತದ ವೈವಿಧ್ಯಮಯ ಸಮುದಾಯಗಳ ಸಂಯುಕ್ತ ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದಿಂದ ದೂರ ಸರಿದವರೇ ಈಗ ವಿಭಜನೆಯ ಭಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಭಾರತದ ವಿಭಜನೆ ಮತ್ತು ನಂತರದ ಹಿಂಸಾಚಾರವು ಬ್ರಿಟಿಷರ ಒಡೆದು ಆಳುವ ನೀತಿಯ ಪರಿಣಾಮಗಳಾಗಿದ್ದು, ಹಿಂದಿನ ಬ್ರಿಟಿಷ್ ನಿಷ್ಠಾವಂತರು ಇದನ್ನು ಮರೆತಿದ್ದಾರೆ ಎಂದು ತೋರುತ್ತದೆ. ವಿಭಜನೆಯ ಸಮಯದಲ್ಲಿ ಹಿಂಸಾಚಾರವನ್ನು ಹತ್ತಿಕ್ಕಲು ಪ್ರಯತ್ನಿಸಿದ ಮಹಾತ್ಮ ಗಾಂಧಿಯವರಂತಹ ನಾಯಕರನ್ನು ಸಂಘ ಪರಿವಾರವು ಅಪಹಾಸ್ಯ ಮಾಡಿತು ಎಂದು ವಿಜಯನ್ ಕಿಡಿಕಾರಿದ್ದಾರೆ.

ಹಣ ಪತ್ತೆ ಪ್ರಕರಣ: ನ್ಯಾ.ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಲೋಕಸಭೆ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...